Connect with us

ದಿನದ ಸುದ್ದಿ

ಆತ್ಮ ನಿರ್ಭರ್ ಯೋಜನೆ, 4ನೇ ಪ್ಯಾಕೇಜ್ ರಾಜ್ಯಕ್ಕೆ ಹೆಚ್ಚಿನ ಲಾಭ: ಸಿಎಂ ಬಿ ಎಸ್ ಯಡಿಯೂರಪ್ಪ

Published

on

ಸುದ್ದಿದಿನ, ಬೆಂಗಳೂರು : ಆತ್ಮ ನಿರ್ಭರ್ ಭಾರತ ನಿರ್ಮಾಣದ ಹಾದಿಯಲ್ಲಿ ಇಂದು ಘೋಷಿಸಿದ ಹಲವಾರು ಯೋಜನೆಗಳು, ಮತ್ತು ಹಣಕಾಸು ಸಹಾಯ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದ್ದು, ಉದ್ಯೋಗ ಅವಕಾಶಗಳನ್ನು ವೃದ್ಧಿಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಖನಿಜ ವಲಯದಲ್ಲಿ ತರುತ್ತಿರುವ ಅಮೂಲಾಗ್ರ ಬದಲಾವಣೆ ರಾಜ್ಯದ ಖನಿಜ ನೀತಿಗೆ ಪೂರಕವಾಗಲಿದೆ. ನಮ್ಮ ರಾಜ್ಯದಲ್ಲಿ ಹಲವಾರು ಖನಿಜಗಳ ನಿಕ್ಷೇಪಗಳಿದ್ದು, ಈಗ ಅವುಗಳ ಗಣಿಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ ಎಂದರು.

ಅದರಲ್ಲೂ ಈಗಿರುವ ಖನಿಜ ಸಂಬಂಧಪಟ್ಟ ಕಾಯಿದೆಗಳು ನಮಗೆ ಹೆಚ್ಚಿನ ಅವಕಾಶ ಕಲ್ಪಿಸಲು ಮತ್ತು ಗಣಿಗಾರಿಕೆ ಮಾಡುವಲ್ಲಿ ಸ್ವಲ್ಪ ಅಡಚಣೆಗಳಿದ್ದವು. ಈಗ, ನಾವು ಮುಕ್ತ ವಾತಾವರಣದಲ್ಲಿ ಕೆಲಸ ಮಾಡಬಹುದು.
ಇವೆಲ್ಲವುಗಳ ಜತೆಗೆ ರಾಜ್ಯದಲ್ಲಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವಲ್ಲಿ ಸಹಾಯವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಯಥೇಚ್ಛ ಖನಿಜ ಸಂಪತ್ತು ಇದ್ದು (ಕಬ್ಬಿಣ, ತಾಮ್ರ, ಬಂಗಾರ, ಕ್ವಾರ್ಜ್ ಮತ್ತು ಯುರೇನಿಯಂ) ಇವುಗಳನ್ನು ನಾವು ಗಣಿಗಾರಿಕೆ ಮಾಡಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಕಾರಣವಾಗಬಹುದು. ಖಾಸಗಿ ಸಹಭಾಗಿತ್ವದ ಗಣಿಗಾರಿಕೆ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ ಎಂದು ಮಾಹಿತಿ ನೀಡಿದರು.

ದೇಶದ ರಕ್ಷಣಾ ವಲಯ, ಬಾಹ್ಯಾಕಾಶ, ನಾಗರಿಕ ವಿಮಾನಯಾನ, ಅಂತರಿಕ್ಷ ಯಾನ, ಮತ್ತು ಅಂತರಿಕ್ಷ ವಲಯಗಳಲ್ಲಿ ಹೂಡಿಕೆ ಹೆಚ್ಚಾಗಿ ರಾಜ್ಯಕ್ಕೆ ಲಾಭವಾಗಲಿದೆ. ಏಕೆಂದರೆ, ಈ ವಲಯದಲ್ಲಿ ಸಾಕಷ್ಟು ಉತ್ಪಾದನಾ ಘಟಕಗಳು ನಮ್ಮ ರಾಜ್ಯದಲ್ಲಿದ್ದು, ಅವುಗಳಿಗೆ ಪೂರಕವಾಗಿ ಇತರೆ ಸಂಬಂಧಪಟ್ಟ ಘಟಕಗಳು ಸ್ಥಾಪನೆ ಆಗುತ್ತವೆ. ಎಲ್ಲಕ್ಕೂ ಮಿಗಿಲಾಗಿ ಇಂದು ಪ್ರಕಟಿಸಿದ ಆರ್ಥಿಕ ಯೋಜನೆಗಳು ದೇಶದ ವಿದೇಶ ವಿನಿಮಯವನ್ನು ಉಳಿತಾಯ ಮಾಡಲಿದೆ. ಅಣು ವಿಜ್ಞಾನದಲ್ಲಿ ಖಾಸಗಿ ಸಹಭಾಗಿತ್ವ ಕೂಡ ನಮ್ಮ ರಾಜ್ಯಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ನುಡಿದರು.

ದಾವೋಸ್ ಪ್ರವಾಸದಲ್ಲಿ ಹಲವಾರು ಬಾಹ್ಯಾಕಾಶ ಮತ್ತು ರಕ್ಷಣಾ ವಲಯ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ತಮ್ಮ ಇಚ್ಛೆ ವ್ಯಕ್ತಪಡಿಸಿದ್ದವು. ಈಗ ಆ ಕಂಪನಿಗಳ ಯೋಜನೆಗಳು ಸಾಕಾರಗೊಳ್ಳಲಿವೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಬಾಯಿ ಬಿಟ್ಟರೆ ಬಣ್ಣಗೇಡಿನಂತಾಗಿದೆ ಮೋದಿ ಭಾಷಣಗಳು : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು:ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಿಸಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ಧಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಅಸಹಾಯಕ ನಾಯಕನ ಗೋಳಾಟದಂತಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆಯನ್ನು ನವಂಬರ್ ತಿಂಗಳ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು.

ಕೊರೊನಾ ಸೋಂಕಿನ ತೀವ್ರತೆಯನ್ನು ಅವಲೋಕಿಸಿದರೆ ಇದು ಮುಂದಿನ 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಸಿವಿನ ಸಮಸ್ಯೆ ಭೀಕರವಾಗಲಿದೆ. ಆದ್ದರಿಂದ ನಮ್ಮ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ ಅನ್ನಭಾಗ್ಯದ ಮಾದರಿಯಲ್ಲಿ ಇಡೀ ರಾಷ್ಟ್ರದಲ್ಲಿ ಬಡವರಿಗೆ ಉಚಿತ ಆಹಾರಧಾನ್ಯ ಪೂರೈಸುವ ಶಾಶ್ವತ ಯೋಜನೆಯನ್ನು ಜಾರಿಗೆ ತರಬೇಕೆಂದು ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ ಎಂದರು.

ದೇಶದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್ ಗಳ ತೀವ್ರ ಕೊರತೆ ಇದೆ. ವೈದ್ಯರು,ದಾದಿಯರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದ ಜನ ಕೊರೊನಾ ಸೋಂಕಿಗಿಂತ ಕೊರೊನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.

ಪಿಎಂ ಕೇರ್ಸ್ ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ಪ್ರಧಾನಿಗಳು ಅದರ ಖರ್ಚು-ವೆಚ್ಚದ ಸಂಪೂರ್ಣ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು ಎಂದು ಹೇಳಿದರು.

ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರಿಂದ ಆಹಾರಧಾನ್ಯ, ತರಕಾರಿ, ಹಣ್ಣು ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲಬೆಲೆ ಏರಿಕೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು.

ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗುವುದಿಲ್ಲ ಎಂದು ಘೋಷಿಸಿದ್ದ ಪ್ರಧಾನಿ ಮೋದಿಯವರು, ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು. ಈ ಘಟನೆಯ ಪ್ರಸ್ತಾವವನ್ನೇ ಮಾಡದೆ ನಿರ್ಲಕ್ಷಿಸಿರುವುದು ವಿಷಾದನೀಯ ಎಂದು ಕಿಡಿಕಾರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯದಲ್ಲಿ ಒಟ್ಟು 18016 ಕೊರೋನಾ ಸೋಂಕಿತರು, ಗುರುವಾರ 1502 ಕೇಸ್ ಪತ್ತೆ..!

Published

on

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ದಿನೇ ದಿನೇ ಶರವೇಗದಲ್ಲಿ ಹೆಚ್ಚುತ್ತಿದೆ. ನಾಡಿನ ಜನತೆಯಂತೂ ಭಯದಲ್ಲಿ ಬದುಕು ಸಾಗಿಸುವ ಅನಿವಾರ್ಯತೆ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಗಳಿಗೂ ಕೊರೋನಾ ಸೋಂಕು ಹರಡಿದ್ದು ಸೋಂಕು ಹರಡದಂತೆ ತಡೆಹಿಡಿಯಲು ಇನ್ನು ಎಷ್ಟು ದಿನಗಳಾಗುತ್ತದೋ‌ ಎಂಬ ಪ್ರಶ್ನೆ ಜನ ಸಾಮಾನ್ಯನ್ನು ಕಾಡುತ್ತಿದೆ.

ಕೋವಿಡ್19 ಮಾಹಿತಿ: 2ನೇ ಜುಲೈ 2020

  • ಒಟ್ಟು ಪ್ರಕರಣಗಳು: 18016
  • ಮೃತಪಟ್ಟವರು: 272
  • ಗುಣಮುಖರಾದವರು: 8334
  • ಹೊಸ ಪ್ರಕರಣಗಳು: 1502

ಇತರೆ ಮಾಹಿತಿ

ಜಿಲ್ಲಾವಾರು ಸೋಂಕಿತರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್ : ಯಡಿಯೂರಪ್ಪ

Published

on

ಸುದ್ದಿದಿನ, ಬೆಂಗಳೂರು: ಅಪರೂಪದ ಪರಿಸರ ಕಾಳಜಿಯ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರಿಗೆ, ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜೀವಿತಾವಧಿ ಉಚಿತ ಬಸ್ ಪಾಸ್ ನೀಡಿದೆ.

ಮಾಧ್ಯಮವೊಂದರಲ್ಲಿ ಈ ಬಗ್ಗೆ ತಮ್ಮ ಆಸೆ ವ್ಯಕ್ತಪಡಿಸಿದ್ದ ಕಾಮೇಗೌಡರ ಅಭಿಲಾಷೆಯಂತೆ, ಉಚಿತ ಪಾಸ್ ವಿತರಿಸಲು ಮಾನ್ಯ ಮುಖ್ಯಮಂತ್ರಿಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದರು.

ಗೌಡರ ಪರಿಸರ ಕಾಳಜಿಗೆ ಮತ್ತೊಮ್ಮೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾಮೇಗೌಡರ ಪರಿಸರ ಸೇವೆ ಬಗ್ಗೆ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ತಮ್ಮ ‘ಮನ್ ಕಿ ಬಾತ್ ‘ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದನ್ನು ಸ್ಮರಿಸಿಕೊಂಡಿದ್ದಾರೆ.

ಕಾಮೇಗೌಡ ಅವರಂತಹ, ಬೆಲೆ ಕಟ್ಟಲಾಗದ ಪರಿಸರ ಕಾಳಜಿಯುಳ್ಳವರ ಸಂತತಿ ಇನ್ನೂ ಹೆಚ್ಚಾಗಲಿ ಎಂದು ಅಶಿಸುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending