Connect with us

ದಿನದ ಸುದ್ದಿ

ಹೂ ಮಳೆ ಬೇಡ : ಸುರಕ್ಷತೆ ಬೇಕು, ಅದಕ್ಕಾಗಿ ಪಿಎಂ ಕೇರ್ಸ್ ನಿಧಿ ಬಳಸಿ

Published

on

ಸುದ್ದಿದಿನ ಡೆಸ್ಕ್ : ಕೊರೊನ ವಾರಿಯರ್ ಗಳಾಗಿ ದುಡಿಯುತ್ತಿರುವ ವೈದ್ಯರು, ದಾದಿಯರು, ಅಂಗನವಾಡಿ, ಆಶಾ, ಆಸ್ಪತ್ರೆ ಸಿಬ್ಬಂದಿ ಮತ್ತು ನೈರ್ಮಲ್ಯೀಕರಣದಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಹೂ ಮಳೆ ಸಾಕು, ಸುರಕ್ಷತೆ ಮತ್ತು ವಿಮೆ ಬೇಕು, ಪಿಎಂ ಕೇರ್ ನಿಧಿ ಬಳಸಬೇಕೆಂದು ಒತ್ತಾಯಿಸಿ ಸಿಐಟಿಯು ಸಂಘಟನೆ ಮೇ 14 ರಂದು ಬೇಡಿಕೆ ದಿನವನ್ನು ಆಚರಿಸಲು ಸಿದ್ದತೆ ನಡೆದಿದೆ.

ಹೊರೊನ ಹೋರಾದಲ್ಲಿ ತೊಡಗಿರುವವರು ಕೂಡ ಸೋಂಕು ಪೀಡಿತರಾಗಿದ್ದಾರೆ. ಹಾಗಾಗಿ ಹಲವಾರು ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ. ಸರಿಸುಮಾರು 10 ಲಕ್ಷ ಆಶಾ ಕಾರ್ಯಕರ್ತೆಯರು ಮನೆಮನೆಗಳ ಬಾಗಿಲಿಗೆ ಹೋಗಿ ಸಮೀಕ್ಷೆ ಹೋಗುತ್ತಿದ್ದು ಅವರು ಕೊರೊನ ಸೋಂಕಿಗೆ ಒಳಗಾಗಿದ್ದಾರೆ. ಅವರಿಗೆ ವೈಯಕ್ತಿಕ ಸುರಕ್ಷ ಸಲಕರಣೆಗಳು, ಎನ್.95 ಮಾಸ್ಕ್, ಸ್ಯಾನಿಟೈಸರ್ ಗಳನ್ನು ಸರ್ಕಾರ ಇದುವರೆಗೂ ಒದಗಿಸಿಲ್ಲ. ಎಂದು CITU ದೂರಿದೆ.

ರಾಜ್ಯದ 26 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸುರಕ್ಷತಾ ಸಲಕರಣೆಗಳಿಲ್ಲದೆ ಮನೆಮನೆಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಕುಡ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.ಗುತ್ತಿಗೆ ಆಧಾರೆದಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ, ಕಿರಿಯ ಮಹಯಿಳಾ ಆರೋಗ್ಯ ಸಹಾಯಕಿಯರು, ಆರೋಗ್ಯ ಸ್ವಯಂ ಸೇವಕರು ಹೀಗೆ ಎಲ್ಲರೂ ಕೆಲಸ ಮಾಡುತ್ತಿದ್ದು ಅವರಿಗೆ ಸೌಲಭ್ಯಗಳನ್ನು ಸರ್ಕಾರ ನೀಡಿಲ್ಲ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಮತ್ತು ಕೆಂಪು ವಲಯದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಸುರಕ್ಷತೆಗೆ ಪಿಪಿಇ ಕಿಟ್ ಕೊಡಬೇಕು. ಎಲ್ಲಾ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಉಚಿತವಾಗಿ ಮಾಡಬೇಕು.

ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದರೆ 50 ಲಕ್ಷ ವಿಮೆ ನೀಡಬೇಕು. ಕುಟುಂಬದ ಸದಸ್ಯರಿಗೂ ಕೊಡಬೇಕು ಕರ್ತವ್ಯದಲ್ಲಿರುವ ಎಲ್ಲಾ ಎನ್ಎಚ್ಎಂ ಗುತ್ತಿಗೆ/ಸ್ಕೀಂ ಜೌಕರರಿಗೆ ಪ್ರತಿ ತಿಂಗಳು 25 ಸಾವಿರ ಪ್ರೋತ್ಸಾಹ ಧನ ಕೊಡಬೇಕು ಮತ್ತು ಉಚಿತ ಪಡಿತರ ಕೊಡಬೇಕು. ಕೋವಿಡ್ ಸೋಂಕಿತ ಸಿಬ್ಬಂದಿಗಳಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು.

ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಕುಟುಂಬಗಳಿಗೆ 7500 ರೂ ಕೊಡಬೇಕು. ಆರೋಗ್ಯ ವ್ಯವಸ್ಥೆ ಸರಿಪಡಿಸಲು ಜಿಡಿಪಿಯ ಶೇ.5ರಷ್ಟು ಸಾರ್ವಜನಿಕ ಆರೋಗ್ಯ ವಲಯಕ್ಕೆ ಮೀಸಲಿಡಬೇಕು. ಮೇ 10ರಂದು ಮೃತರಾದ ಆಶಾ ಕಾರ್ಯಕರ್ತೆ ಭೀಮಕ್ಕ ಅವರಿಗೆ 50 ಲಕ್ಷ ಪಿರಹಾರ ನೀಡಬೇಕು CITU ಒತ್ತಾಯಿಸಿದೆ.

ವರದಿ : ಸಿದ್ಧಾರ್ಥ ಕೆ ಗಿರಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಎಸ್ ಎಸ್ ಎಲ್ ಸಿ ಪರೀಕ್ಷೆ, ಜಿಲ್ಲೆಯಲ್ಲಿ 1150 ಕೊಠಡಿ ವ್ಯವಸ್ಥೆ ; ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ಅವಕಾಶ : ಡಿಡಿಪಿಐ ಪರಮೇಶ್ವರಪ್ಪ

Published

on

ಸುದ್ದಿದಿನ,ದಾವಣಗೆರೆ: ಸರ್ಕಾರದ ಆದೇಶದಂತೆ ಜೂ.25 ರಿಂದ ಜು.4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಬೇಕು ಎಂದು ನಿರ್ಧರಿಸಿದ್ದೆವೇ. ಜಿಲ್ಲೆಯಲ್ಲಿ ಒಟ್ಟು 435 ಸರ್ಕಾರಿ ಶಾಲೆಗಳಿದ್ದು, 1150 ಕೊಠಡಿಗಳ ವ್ಯವಸ್ಥೆ ಇದೆ, ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪರಮೇಶ್ವರಪ್ಪ ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವ ಸಿದ್ಧತೆಗಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾದರು.

ಜಿಲ್ಲೆಯಲ್ಲಿ ಒಟ್ಟು 20.927 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದಾರೆ. ಅದರಲ್ಲಿ 10.311 ಗಂಡು ಮಕ್ಕಳು ಹಾಗೂ 10.616 ಹೆಣ್ಣು ಮಕ್ಕಳು ಇದ್ದಾರೆ. ವಿದ್ಯಾರ್ಥಿಗಳು ಭಯ ಪಡದ ರೀತಿಯಲ್ಲಿ ಪತ್ರಿಕೆಗಳಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಲಾಗಿದೆ, ಮತ್ತು ಚಂದನ ವಾಹಿನಿಯ ಪುನರ್ ಮನನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿ ಸಮಸ್ಯೆಗೆ ಪರಿಹಾರ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲು ಸಭೆಯಲ್ಲಿ ತಿರ್ಮಾನಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಥರ್ಮಲ್ ಸ್ಕ್ರೀನಿಂಗ್ ನಡೆಸಿ ನಂತರ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುತ್ತದೆ. ಸ್ಕೌಟ್ ಅಂಡ್ ಗೈಡ್ಸ್‍ನವರು ವಿದ್ಯಾರ್ಥಿಗಳಿಗೆ ಒಟ್ಟು 22.000 ಮಾಸ್ಕ್‍ಗಳ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರ

  1. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಲಾ ಇಬ್ಬರು ಆರೋಗ್ಯ ಕಾರ್ಯಕರ್ತರ ನಿಯೋಜನೆ.
  2. ಕಂಟೈನ್‍ಮೆಂಟ್ ಜೋನ್ ಪ್ರದೇಶದಲ್ಲಿರುವ ಮಕ್ಕಳಿಗೆ ಪೂರಕ ಕೊಠಡಿ ನಿಯೋಜನೆ.
  3. ಕಂಟೈನ್‍ಮೆಂಟ್ ಜೋನ್ ಪ್ರದೇಶದ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ವಿತರಣೆ.
  4. ಪ್ರತಿ 200 ವಿದ್ಯಾರ್ಥಿಗಳಿಗೆ ಒಂದು ಥರ್ಮಲ್ ಸ್ಕ್ರೀನಿಂಗ್ ಯಂತ್ರ.
  5. ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ 2 ಮಾಸ್ಕ್ ವಿತರಣೆ.
  6. ಪ್ರತಿ ಒಂದು ಕೊಠಡಿಗೆ 18 ರಿಂದ 20 ವಿದ್ಯಾರ್ಥಿಗಳು.
  7. ಯಾವುದೇ ವಿದ್ಯಾರ್ಥಿ ಕ್ವಾರಂಟೈನ್‍ಲ್ಲಿದ್ದರೆ ಅವರಿಗೆ ಮುಂದಿನ ಆಗಸ್ಟ್ ತಿಂಗಳಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಹೊಸ ವಿದ್ಯಾರ್ಥಿ ಎಂದು ಪರಿಗಣಿಸಿ ಅವಕಾಶ ನೀಡಲಾಗುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಬಿತ ಕುಂಟುಬದ ಸದಸ್ಯರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ, ಸಮೃದ್ದಿ, ಉನ್ನತಿ, ಪ್ರೇರಣಾ, ಐರಾವತ, ಸ್ಪೂರ್ತಿ, ಪ್ರಬುದ್ದ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು 2019-20ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹಿಂದೆ ಅರ್ಜಿ ಸಲ್ಲಿಸಲು ಮೇ 30 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಕೋವಿಡ್-19 ಸಾಂಕ್ರ್ರಾಮಿಕ ರೋಗ ನಿಯಂತ್ರಿಸುವ ಸಲುವಾಗಿ ಸರ್ಕಾರವು ಕೈಗೊಂಡಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೀಗ ಜೂನ್ 30 ರವರೆಗೆ ವಿಸ್ತರಿಸಲು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದವರು ಸೂಚಿಸಿರುವ ಮೇರೆಗೆ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಜೂ.30 ರ ಒಳಗೆ www.kssds.kar.nic.in ಆನ್‍ಲೈನ್‍ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ, ಪಿ.ಬಿ ರೋಡ್, #337/16-16, ಗಣೇಶ ಲೇ ಔಟ್ 1ನೇ ಕ್ರಾಸ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ| ಅಂಡರ್ ಪಾಸ್ ನಿರ್ಮಿಸಲು ಗ್ರಾಮಸ್ಥರಿಂದ ಅಡ್ಡಿ: ಡಿಸಿ,ಎಸ್ಪಿಯಿಂದ ಮನವೊಲಿಕೆ

Published

on

‌ಸುದ್ದಿದಿನ,ದಾವಣಗೆರೆ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂಬಂಧ ಸಾರ್ವಜನಿಕ ಅಹವಾಲು ಹಾಗೂ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನೆಲೆ ಮಂಗಳವಾರ ಸ್ಥಳ ತನಿಖೆ ಮಾಡಿದರು.

ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಸಂಬಂಧ ಅಡ್ಡಿಪಡಿಸುತ್ತಿರುವ ಕುರಿತು ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ, ಹೊನ್ನೂರು ಮತ್ತು ಲಕ್ಕಮುತ್ತೇನಹಳ್ಳಿ ಇಲ್ಲಿ ಹೊಸದಾಗಿ ಅಂಡರ್‍ಪಾಸ್ ನಿರ್ಮಿಸುವ ಕುರಿತಂತೆ ಸಾರ್ವಜನಿಕರ ಅಹವಾಲು ಹಾಗೂ ಕಾಮಗಾರಿ ಸ್ಥಗಿತಗೊಂಡಿರುವ ಕಾರಣಕ್ಕಾಗಿ ಇಂದು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಈ ಗ್ರಾಮಗಳ ಗ್ರಾಮಸ್ಥರು ಉತ್ತಮ ದರ್ಜೆಯ ಮತ್ತು ವಿಶಾಲವಾದ ಅಂಡರ್‍ಪಾಸ್ ನಿರ್ಮಿಸುವ ಕುರಿತಂತೆ ತೀವ್ರತರವಾದ ಬೇಡಿಕೆ ಇಡಲಾಗಿತ್ತು. ಆದ ಕಾರಣ ಕಾಮಗಾರಿ ಕೈಗೊಳ್ಳದಂತೆ ಅಡ್ಡಿಪಡಿಸುವುದಾಗಿ ತಿಳಿಸಿದರು.

ಡಿಸಿ ಮತ್ತು ಎಸ್‍ಪಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳಂತೆ ಈ ಹಂತದಲ್ಲಿ ಗ್ರಾಮಸ್ಥರ ಬೇಡಿಕೆಗೆ ತಕ್ಕಂತೆ ವಿಶಾಲವಾದ ಅಂಡರ್‍ಪಾಸ್ ನಿರ್ಮಿಸಲು ಅವಕಾಶವಿಲ್ಲವೆಂಬ ವಿಷಯನ್ನು ಗ್ರಾಮಸ್ಥರಿಗೆ ಮನವೊಲಿಸಿ, ಕಲ್ಪನಹಳ್ಳಿ, ಮಲ್ಲಶೆಟ್ಟಿಹಳ್ಳಿ ಗ್ರಾಮಗಳಲ್ಲಿ ಕಾಮಗಾರಿಯನ್ನು ಕೂಡಲೇ ಮುಕ್ತಾಯಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending