ದಿನದ ಸುದ್ದಿ
‘ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ’ ಶೀಘ್ರ ಪೂರ್ಣಗೊಳಿಸುತ್ತೇವೆ : ಹೆಚ್. ಬಿ. ಮಂಜಪ್ಪ ಶಪಥ..!

ಸುದ್ದಿದಿನ,ದಾವಣಗೆರೆ : 2018ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಸನ್ಮಾನ್ಯ ಸಿದ್ದರಾಮಯ್ಯನವರಿಂದ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯನ್ನು ಯೋಜನೆಯು ಶಂಕುಸ್ಥಾಪನೆಯಾಗಿದ್ದು,6 ತಾಲ್ಲೂಕುಗಳ 135 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ.ದಾವಣಗೆರೆ ಜಿಲ್ಲೆಯ 3 ತಾಲೂಕುಗಳ 80 ಕ್ಕೂ ಹೆಚ್ಚು ಕೆರೆಗಳು ಇದರಿಂದ ಸಂಪಧ್ಭರಿತವಾಗುತ್ತವೆ ಎಂದು ದಾವಣಗೆರೆ ಲೋಕಸಭಾ ಮೈತ್ರಿ ಅಭ್ಯರ್ಥಿ ಹೇಳಿದ್ದಾರೆ.
ಫಲಾನುಭವಿ ತಾಲ್ಲೂಕುಗಳು : ದಾವಣಗೆರೆ, ಹೊನ್ನಾಳಿ, ಚನ್ನಗಿರಿ
ಈ ಯೋಜನೆಯಡಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿ ಗ್ರಾಮದ ಹತ್ತಿರ ತುಂಗಭದ್ರಾ ನದಿಯಿಂದ ನೀರನ್ನು ಎತ್ತಿ ದಾವಣಗೆರೆ ಜಿಲ್ಲೆ, ಶಿವಮೊಗ್ಗ ಜಿಲ್ಲೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಹೊನ್ನಾಳಿ, ಭದ್ರಾವತಿ, ಚನ್ನಗಿರಿ, ದಾವಣಗೆರೆ, ಹೊಳಲ್ಕೆರೆ ಹಾಗೂ ಚಿತ್ರದುರ್ಗ ಸೇರಿದಂತೆ ಒಟ್ಟು ಆರು ತಾಲ್ಲೂಕುಗಳ 135 ಕೆರೆಗಳನ್ನು ತುಂಬಿಸಲಾಗುತ್ತದೆ.
ಈ ಯೋಜನೆಯ ಅನುಷ್ಠಾನದಿಂದ ಈ ಭಾಗದ ಜನ, ಜಾನುವಾರುಗಳ ದಿನನಿತ್ಯದ ನೀರಿನ ಅಭಾವ ನೀಗುವುದರ ಜೊತೆಗೆ ಈ ಪ್ರದೇಶದ ಕೃಷಿಯೂ ಅಭಿವೃದ್ಧಿಯಾಗುತ್ತದೆ ಎಂದಿದ್ದಾರೆ.
ದಿನದ ಸುದ್ದಿ
ದಾವಣಗೆರೆ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ

ಸುದ್ದಿದಿನ,ದಾವಣಗೆರೆ :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI) ಹುದ್ದೆ ಭರ್ತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.
ಡಿ.16 ರಿಂದ 24 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಡಿ.16 ರಂದು ಬೆಳಿಗ್ಗೆ 10.30 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ: 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಹೆಡ್ಕಾನ್ಸ್ಟೇಬಲ್ ಹುದ್ದೆಗೆ ‘ಸ್ಪೋಟ್ರ್ಸ್’ ಕೋಟಾದಡಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್(ಸಿಐಎಸ್ಎಫ್)ನಲ್ಲಿ 300 ಹೆಡ್ಕಾನ್ಸ್ಟೇಬಲ್(ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಹ ಪುರುಷ/ಮಹಿಳೆಯರಿಂದ ಸ್ಪೋಟ್ರ್ಸ್ ಕೋಟಾದಡಿ ಅರ್ಜಿ ಆಹ್ವಾನಿಸಲಾಗಿದೆ.
ಪಿ.ಯು.ಸಿ ಯಾವುದೇ ವಿಷಯದಲ್ಲಿ ತೇರ್ಗಡೆಯಾದ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆ ಅಥವಾ ಅಥ್ಲೆಟಿಕ್ಸ್ನ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 18 ರಿಂದ ಗರಿಷ್ಠ 23 ವರ್ಷ (02-08-1996 ರಿಂದ 01-08-2001 ರ ಒಳಗೆ ಜನಿಸಿರಬೇಕು) ವಯೋಮಾನ, ಪ. ಜಾತಿ/ ಪ. ಪಂಗಡದವರಿಗೆ 5 ವರ್ಷ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ವೆಬ್ಸೈಟ್ https://cisfrectt.in
ನಲ್ಲಿ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿಮಾಡಿದ ಅರ್ಜಿಗಳನ್ನು ಡಿ.17 ವೆಬ್ಸೈಟ್ನಲ್ಲಿ ತಿಳಿಸಿದ ವಿಳಾಸಕ್ಕೆ ಕಳುಹಿಸಿಕೊಡಬೇಕು.
ಹೆಚ್ಚಿನ ಮಾಹಿತಿಗಾಗಿ
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ, ದೂರವಾಣಿ ಸಂಖ್ಯೆ: 08192-259446 ಇಲ್ಲಿಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದದಿಂದ ವಾಹನಗಳ ಕಾರ್ಯಾಚರಣೆ

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ, ವಿಭಾಗದಿಂದ ದಾವಣಗೆರೆ-ಜಗಳೂರು ಮಾರ್ಗದಲ್ಲಿ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಸಾರ್ವಜನಿಕರ, ಪ್ರಯಾಣಿಕರ ಹಿತದೃಷ್ಟಿಯಿಂದ ವಾಹನ ಕಾರ್ಯಾಚರಣೆ ಮಾಡಲಾಗುತ್ತಿದೆ.
ಈ ವಾಹನಗಳ ಕಾರ್ಯಾಚರಣೆಯನ್ನು ಕೆಎಸ್ಆರ್ಟಿಸಿ ದಾವಣಗೆರೆ ಹೊಸ ಬಸ್ ನಿಲ್ದಾಣದಿಂದ ಮಾಡಲಾಗುತ್ತಿದ್ದು, ದಾವಣಗೆರೆಯಿಂದ-ಜಗಳೂರಿಗೆ ಮತ್ತು ಜಗಳೂರಿನಿಂದ–ದಾವಣಗೆರೆಗೆ ಪ್ರತಿ 15 ನಿಮಿಷಗಳಿಗೊಮ್ಮೆ ವಾಹನ ಸೌಲಭ್ಯವಿರುತ್ತದೆ.
ಸಾರ್ವಜನಿಕ ಪ್ರಯಾಣಿಕರು ಬಸ್ ನಿಲ್ದಾಣದಿಂದ ಕಾರ್ಯಾಚರಣೆಯಾಗುವ ನಿಗಮದ ವಾಹನಗಳಲ್ಲಿ ಪ್ರಯಾಣಿಸಬೇಕೆಂದು ದಾವಣಗೆರೆ ವಿಭಾಗದ ಕ.ರಾ.ರ.ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ : ಎನ್ಕೌಂಟರ್ ಆದ ಆರೋಪಿಯ ಪತ್ನಿ
-
ಬಹಿರಂಗ5 days ago
ಜಾತಿಯಲ್ಲಿ ಕರಗಿಹೋದ ಮತ್ತೊಬ್ಬಳು ‘ಪ್ರಿಯಾಂಕ’
-
ಅಂತರಂಗ4 days ago
ತನ್ನಿಮಿತ್ತ : ಪುಸ್ತಕಗಳ ಮಧ್ಯೆ ಪ್ರಾಣ ಬಿಟ್ಟ ಅಂಬೇಡ್ಕರ್
-
ಭಾವ ಭೈರಾಗಿ5 days ago
ಕಾಳಾರಾಮ ದೇವಾಲಯ ಪ್ರವೇಶ ಮತ್ತು ಕುವೆಂಪು ‘ಜಲಗಾರ’ ನಾಟಕ : 90 ವರ್ಷಾಚರಣೆಯ ಹೊತ್ತಿನಲ್ಲಿ
-
ಬಹಿರಂಗ5 days ago
ಬಾಬಾಸಾಹೇಬ್ ಅಂಬೇಡ್ಕರರ ಸಾವು ಸಹಜವೋ ಅಥವಾ ಅಸಹಜವೋ?: ಹೀಗೊಂದು ವಿಷಾದದ ಪ್ರಶ್ನೆ
-
ದಿನದ ಸುದ್ದಿ5 days ago
ಪಶುವೈದ್ಯೆ ಅತ್ಯಾಚಾರ, ಕೊಲೆ : ನಾಲ್ವರು ಆರೋಪಿಗಳ ಎನ್ ಕೌಂಟರ್ | ಪ್ರತಿಕ್ರಿಯೆಗಳು
-
ಭಾವ ಭೈರಾಗಿ4 days ago
ಕವಿತೆ | ಗರ್ಭದೊಳಗೆ
-
ಕ್ರೀಡೆ4 days ago
ದಾವಣಗೆರೆ | ವಾರ್ಷಿಕ ಪೊಲೀಸ್ ಕ್ರೀಡಾಕೂಟ-2019