Connect with us

ದಿನದ ಸುದ್ದಿ

ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ಚಲನಚಿತ್ರ ಪ್ರದರ್ಶನಕ್ಕೆ ದೂರದರ್ಶನದಲ್ಲಿ ಮಾತ್ರ ನಿರ್ಬಂಧ

Published

on

ಸುದ್ದಿದಿನ,ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಸಂಬಂಧ ಚುನಾವಣೆಯಲ್ಲಿ ನಟರು ಸ್ಪರ್ಧಿಸುತ್ತಿರುವುದರಿಂದ ಅವರು ನಟಿಸಿರುವ ಚಲನಚಿತ್ರಗಳು ಪ್ರದರ್ಶನವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕೆಳಕಂಡಂತೆ ಸ್ಪಷ್ಟಿಕರಣ ನೀಡಿರುತ್ತಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪತ್ರ ಸಂ 437/6ಜಿಜೆ-ಹೆಚ್‍ಪಿ/2014 ಅನ್ವಯ ಖಾಸಗಿ ಚಾನೆಲ್‍ಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ವಾಣಿಜ್ಯ ಜಾಹಿರಾತು, ಚಲನಚಿತ್ರಗಳ ಪ್ರದರ್ಶನ ಹಾಗೂ ಸಿನಿಮಾ ಮಂದಿರಗಳಲ್ಲಿ ಚಲನಚಿತ್ರಗಳನ್ನು ಪ್ರದರ್ಶಿಸಲು ಯಾವುದೇ ನಿರ್ಬಂಧ ಇರುವುದಿಲ್ಲ.

ಆದರೆ ಲೋಕಸಭೆ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್‍ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ಚಲನಚಿತ್ರಗಳನ್ನು (ವಾಣಿಜ್ಯ ಜಾಹಿರಾತು ಹೊರತುಪಡಿಸಿ) ಪ್ರದರ್ಶಿಸಲು ನಿರ್ಬಂಧವಿರುತ್ತದೆ ಎಂದು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಎಸ್‌.ಎಂ.ಕೃಷ್ಣ ಸಹೋದರ ಶಂಕರ್ ವಿಧಿವಶ

Published

on

ಸುದ್ದಿದಿನ,ಮಂಡ್ಯ : ಮಾಜಿ ವಿದೇಶಾಂಗ ಸಚಿವ ಎಸ್‌.ಎಂ.ಕೃಷ್ಣ ಸಹೋದರ ಹಾಗೂ ಮಾಜಿ‌ ವಿಧಾನ ಪರಿಷತ್ ಸದಸ್ಯ ಎಸ್.ಎಂ ಶಂಕರ್(83) ರವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಎಸ್.ಎಂ.ಕೃಷ್ಣರವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎಸ್.ಎಂ.ಶಂಕರ್ ಎಂ.ಎಲ್.ಸಿ. ಆಗಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ, ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ವರದಿ , ಗಿರೀಶ್ ರಾಜ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಿವಮೊಗ್ಗ : ಪತ್ರಿಕೋದ್ಯಮ ಮಹಿಳಾ ಪದವೀಧರರಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳನ್ನು ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು.

ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ವಯೋಮಿತಿ 40ವರ್ಷ ಮೀರಿರಬಾರದು.

ಆಯ್ಕೆಯಾದವರಿಗೆ ಮಾಸಿಕ 15 ಸಾವಿರ ರೂಪಾಯಿ ಗೌರವ ಧನ ನೀಡಲಾಗುವುದು. ತರಬೇತಿ ಅವಧಿ 9 ತಿಂಗಳು. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಜುಲೈ 4 ಕಡೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನೆಹರು ಸ್ಟೇಡಿಯಂ ಹತ್ತಿರ, ಸವಳಂಗ ರಸ್ತೆ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182- 278638 ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪತ್ರಿಕೋದ್ಯಮ ಮಹಿಳಾ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಮಂಡ್ಯ : ರಾಜ್ಯ ಸರ್ಕಾರದ ಮಹಿಳಾ ಉದ್ದೇಶಿತ 2019-2020 ರ ಅಯವ್ಯಯದ ಕಾರ್ಯಕ್ರಮಗಳಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಿಕೋದ್ಯಮದ ಮಹಿಳಾ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಕನ್ನಡ ಭಾಷೆ ಬಳಸುವ ಪ್ರಬುದ್ಧತೆ ಹೊಂದಿರುವ ಇಬ್ಬರು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಂಡ್ಯ ಜಿಲ್ಲಾ ಕಛೇರಿಯ ಕ್ಷೇತ್ರ ಹಾಗೂ ಮಾಧ್ಯಮ ಪ್ರಚಾರ ಕಾರ್ಯನಿರ್ವಹಿಸಲು ಹಾಗೂ ಅಪ್ರೆಂಟಿಸ್ ತರಬೇತಿಗಾಗಿ ಆಯ್ಕೆಯಾಗುವ ಇಬ್ಬರು ಮಹಿಳಾ ಅಭ್ಯರ್ಥಿಗಳ ತರಬೇತಿ ಅವಧಿ 9 ತಿಂಗಳುಗಳಾಗಿದ್ದು, ತರಬೇತಿ ಸಂಭಾವನೆ ನೀಡಲಾಗುವುದು.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ 40 ರ ವಯೋಮಿತಿಯಲ್ಲಿರುವ ಮಂಡ್ಯ ಜಿಲ್ಲೆಯ ನಿವಾಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಜಿಲ್ಲೆಯಲ್ಲಿ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಮಾತ್ರ ಪಕ್ಕದ ಇತರೆ ಜಿಲ್ಲೆಗಳ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

ಜಿಲ್ಲಾ ಸಮಿತಿಯು ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಅಭ್ಯರ್ಥಿಗಳು ಅರ್ಜಿಯೊಂದಿಗೆ ಸ್ನಾತಕೋತ್ತರ ಪದವಿ ಅಂಕಪಟ್ಟಿ, ಅಭ್ಯರ್ಥಿಗಳು ಆಯ್ಕೆಯಾದಲ್ಲಿ ಮೂಲ ಪ್ರಮಾಣ ಪತ್ರಗಳನ್ನು ಜಿಲ್ಲಾ ಕಚೇರಿಗೆ ತರಬೇತಿ ಅವಧಿಯವರೆಗೆ ಇಟ್ಟುಕೊಳ್ಳಲು ನೀಡುವುದು ಕಡ್ಡಾಯವಾಗಿದೆ.
ಕೇಂದ್ರ ಕಚೇರಿ ನಿರ್ದೇಶನದಂತೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹೆಚ್.ಕೆ.ವೀರಣ್ಣಗೌಡ ರಸ್ತೆ ಮಂಡ್ಯ ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 29 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹೆಚ್.ಕೆ.ವೀರಣ್ಣಗೌಡ ರಸ್ತೆ ಮಂಡ್ಯ ಅಥವಾ ಕಚೇರಿ ದೂರವಾಣಿ ಸಂಖ್ಯೆ:08232-224153 ನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Trending