Connect with us

ದಿನದ ಸುದ್ದಿ

‘ಅಪ್ನಾ ಟೈಮ್ ಆಯೇಗ’ ಅಂತ ಟ್ವೀಟ್ ಮಾಡಿದ್ರು ರಮ್ಯಾ..!?

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ‌ ನಡೆಯಲಿದೆ. ರಾಜ್ಯ ರಾಜಕಾರಣದಲ್ಲಿ‌ ದಿನದಿಂದ ದಿನಕ್ಕೆ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಇದರ ನಡುವೆ ಮಾಜಿ‌ ಸಂಸದೆ, ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿರುವ ರಮ್ಯಾ ಅವರು ಮತ್ತೊಮ್ಮೆ ಈಗ ಸುದ್ದಿಯಲ್ಲಿದ್ದಾರೆ.

ರಮ್ಯಾ ಅವರು ಯಾಕೆ ಈಗ ಸುದ್ದಿಯಲ್ಲಿದ್ದಾರೆ ಗೊತ್ತಾ..? ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ‘ಅಪ್ನಾ ಟೈಮ್ ಆಯೇಗಾ’ ಎಂದು ರಾಹುಲ್ ಗಾಂಧಿ ನಗುನಗುತ್ತಾ ಕೈ ಮುಗಿಯುತ್ತಿರುವ ಪೋಟೋವನ್ನು ಪೋಸ್ಟ್ ಮಾಡುವುದರ ಮೂಲಕ ನಮ್ಮ ಸಮಯ ಈಗ ಬರುತ್ತಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬಾಯಿ ಬಿಟ್ಟರೆ ಬಣ್ಣಗೇಡಿನಂತಾಗಿದೆ ಮೋದಿ ಭಾಷಣಗಳು : ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು:ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಿಸಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ಧಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಅಸಹಾಯಕ ನಾಯಕನ ಗೋಳಾಟದಂತಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆಯನ್ನು ನವಂಬರ್ ತಿಂಗಳ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು.

ಕೊರೊನಾ ಸೋಂಕಿನ ತೀವ್ರತೆಯನ್ನು ಅವಲೋಕಿಸಿದರೆ ಇದು ಮುಂದಿನ 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಸಿವಿನ ಸಮಸ್ಯೆ ಭೀಕರವಾಗಲಿದೆ. ಆದ್ದರಿಂದ ನಮ್ಮ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ ಅನ್ನಭಾಗ್ಯದ ಮಾದರಿಯಲ್ಲಿ ಇಡೀ ರಾಷ್ಟ್ರದಲ್ಲಿ ಬಡವರಿಗೆ ಉಚಿತ ಆಹಾರಧಾನ್ಯ ಪೂರೈಸುವ ಶಾಶ್ವತ ಯೋಜನೆಯನ್ನು ಜಾರಿಗೆ ತರಬೇಕೆಂದು ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ ಎಂದರು.

ದೇಶದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್ ಗಳ ತೀವ್ರ ಕೊರತೆ ಇದೆ. ವೈದ್ಯರು,ದಾದಿಯರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದ ಜನ ಕೊರೊನಾ ಸೋಂಕಿಗಿಂತ ಕೊರೊನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.

ಪಿಎಂ ಕೇರ್ಸ್ ನಿಧಿಗೆ ನೆರವಾಗಲು ದೇಶದ ಜನರನ್ನು ವಿನಂತಿಸಿದ್ದ ಪ್ರಧಾನಿಗಳು ಅದರ ಖರ್ಚು-ವೆಚ್ಚದ ಸಂಪೂರ್ಣ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು ಎಂದು ಹೇಳಿದರು.

ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರಿಂದ ಆಹಾರಧಾನ್ಯ, ತರಕಾರಿ, ಹಣ್ಣು ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲಬೆಲೆ ಏರಿಕೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ದವಾಗುತ್ತಿದ್ದರು.

ಹುತಾತ್ಮ 20 ವೀರಯೋಧರ ಬಲಿದಾನ ವ್ಯರ್ಥವಾಗುವುದಿಲ್ಲ ಎಂದು ಘೋಷಿಸಿದ್ದ ಪ್ರಧಾನಿ ಮೋದಿಯವರು, ಇದಕ್ಕಾಗಿ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿಸಿದ್ದರೆ ನೊಂದ ದೇಶದ ಜನತೆ ಮತ್ತು ವೀರಯೋಧರ ಕುಟುಂಬಕ್ಕೆ ಸಾಂತ್ವನ ಮಾಡಿದ ಹಾಗಾಗುತ್ತಿತ್ತು. ಈ ಘಟನೆಯ ಪ್ರಸ್ತಾವವನ್ನೇ ಮಾಡದೆ ನಿರ್ಲಕ್ಷಿಸಿರುವುದು ವಿಷಾದನೀಯ ಎಂದು ಕಿಡಿಕಾರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯದಲ್ಲಿ ಒಟ್ಟು 18016 ಕೊರೋನಾ ಸೋಂಕಿತರು, ಗುರುವಾರ 1502 ಕೇಸ್ ಪತ್ತೆ..!

Published

on

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ದಿನೇ ದಿನೇ ಶರವೇಗದಲ್ಲಿ ಹೆಚ್ಚುತ್ತಿದೆ. ನಾಡಿನ ಜನತೆಯಂತೂ ಭಯದಲ್ಲಿ ಬದುಕು ಸಾಗಿಸುವ ಅನಿವಾರ್ಯತೆ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಗಳಿಗೂ ಕೊರೋನಾ ಸೋಂಕು ಹರಡಿದ್ದು ಸೋಂಕು ಹರಡದಂತೆ ತಡೆಹಿಡಿಯಲು ಇನ್ನು ಎಷ್ಟು ದಿನಗಳಾಗುತ್ತದೋ‌ ಎಂಬ ಪ್ರಶ್ನೆ ಜನ ಸಾಮಾನ್ಯನ್ನು ಕಾಡುತ್ತಿದೆ.

ಕೋವಿಡ್19 ಮಾಹಿತಿ: 2ನೇ ಜುಲೈ 2020

  • ಒಟ್ಟು ಪ್ರಕರಣಗಳು: 18016
  • ಮೃತಪಟ್ಟವರು: 272
  • ಗುಣಮುಖರಾದವರು: 8334
  • ಹೊಸ ಪ್ರಕರಣಗಳು: 1502

ಇತರೆ ಮಾಹಿತಿ

ಜಿಲ್ಲಾವಾರು ಸೋಂಕಿತರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್ : ಯಡಿಯೂರಪ್ಪ

Published

on

ಸುದ್ದಿದಿನ, ಬೆಂಗಳೂರು: ಅಪರೂಪದ ಪರಿಸರ ಕಾಳಜಿಯ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರಿಗೆ, ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜೀವಿತಾವಧಿ ಉಚಿತ ಬಸ್ ಪಾಸ್ ನೀಡಿದೆ.

ಮಾಧ್ಯಮವೊಂದರಲ್ಲಿ ಈ ಬಗ್ಗೆ ತಮ್ಮ ಆಸೆ ವ್ಯಕ್ತಪಡಿಸಿದ್ದ ಕಾಮೇಗೌಡರ ಅಭಿಲಾಷೆಯಂತೆ, ಉಚಿತ ಪಾಸ್ ವಿತರಿಸಲು ಮಾನ್ಯ ಮುಖ್ಯಮಂತ್ರಿಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದರು.

ಗೌಡರ ಪರಿಸರ ಕಾಳಜಿಗೆ ಮತ್ತೊಮ್ಮೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾಮೇಗೌಡರ ಪರಿಸರ ಸೇವೆ ಬಗ್ಗೆ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ತಮ್ಮ ‘ಮನ್ ಕಿ ಬಾತ್ ‘ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದನ್ನು ಸ್ಮರಿಸಿಕೊಂಡಿದ್ದಾರೆ.

ಕಾಮೇಗೌಡ ಅವರಂತಹ, ಬೆಲೆ ಕಟ್ಟಲಾಗದ ಪರಿಸರ ಕಾಳಜಿಯುಳ್ಳವರ ಸಂತತಿ ಇನ್ನೂ ಹೆಚ್ಚಾಗಲಿ ಎಂದು ಅಶಿಸುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಬಾಯಿ ಬಿಟ್ಟರೆ ಬಣ್ಣಗೇಡಿನಂತಾಗಿದೆ ಮೋದಿ ಭಾಷಣಗಳು : ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು:ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಿಸಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ಧಿಷ್ಟ...

ನೆಲದನಿ1 day ago

ನುಡಿಯ ಒಡಲು -04 | ಭಾಷಾ ವೈವಿಧ್ಯತೆಯನ್ನು ಕಾಪಾಡುವುದೆಂದರೇನು?

ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಭಾಗ -02 ಭಾಷೆಯನ್ನು ಮನುಷ್ಯನ ಅಂತಸ್ಥ ಸ್ವಭಾವದ ಅಭಿವ್ಯಕ್ತಿಯನ್ನಾಗಿ ನೋಡುವ ತಾತ್ವಿಕತೆ ಇವತ್ತು ಪ್ರಬಲವಾಗಿದೆ....

ನಿತ್ಯ ಭವಿಷ್ಯ1 day ago

ವ್ಯವಹಾರ ಮತ್ತು ಆರ್ಥಿಕ ಅಡಚಣೆಗಳಿಗೆ ಪರಿಹಾರ ಮಾರ್ಗ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂಜ್ಯೋತಿಷ್ಯರು ಪ್ರದಾನ ತಾಂತ್ರಿಕ್ ಶ್ರೀ ಗಿರಿಧರ ಭಟ್:9945410150 ವ್ಯವಹಾರದಲ್ಲಿ ನಿಮ್ಮ ಹಣ ಅಥವಾ ಸರಿಯಾದ ಪಾಲು ಸಿಗುತ್ತಿಲ್ಲ ಎಂಬ ಭಾವನೆ ನಿಮ್ಮಲ್ಲಿ ಇರುವುದು, ಆದರೆ...

ಅಂತರಂಗ1 day ago

ಶುಕ್ರವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ

ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು...

ದಿನದ ಸುದ್ದಿ2 days ago

ರಾಜ್ಯದಲ್ಲಿ ಒಟ್ಟು 18016 ಕೊರೋನಾ ಸೋಂಕಿತರು, ಗುರುವಾರ 1502 ಕೇಸ್ ಪತ್ತೆ..!

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ದಿನೇ ದಿನೇ ಶರವೇಗದಲ್ಲಿ ಹೆಚ್ಚುತ್ತಿದೆ. ನಾಡಿನ ಜನತೆಯಂತೂ ಭಯದಲ್ಲಿ ಬದುಕು ಸಾಗಿಸುವ ಅನಿವಾರ್ಯತೆ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಗಳಿಗೂ ಕೊರೋನಾ...

ದಿನದ ಸುದ್ದಿ2 days ago

ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್ : ಯಡಿಯೂರಪ್ಪ

ಸುದ್ದಿದಿನ, ಬೆಂಗಳೂರು: ಅಪರೂಪದ ಪರಿಸರ ಕಾಳಜಿಯ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರಿಗೆ, ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜೀವಿತಾವಧಿ...

ದಿನದ ಸುದ್ದಿ2 days ago

ದಾವಣಗೆರೆ | 60 ವರ್ಷ ಮೇಲ್ಪಟ್ಟವರು ಆರ್ ಟಿ ಓ ಕಛೇರಿಗೆ ಬರೋಹಾಗಿಲ್ಲ..!

ಸುದ್ದಿದಿನ,ದಾವಣಗೆರೆ : ಕೋವಿಡ್-19 ವೈರಾಣು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆದೇಶದಂತೆ ಮೋಟಾರು ವಾಹನ ಕಾಯ್ದೆ 1988 ಮತ್ತು...

ದಿನದ ಸುದ್ದಿ2 days ago

ದಾವಣಗೆರೆ | ಸರ್ಕಾರದ ವೆಬ್‍ಪೋರ್ಟಲ್‍ನಲ್ಲಿ ಐಎಲ್‍ಐ, ಎಸ್‍ಎಆರ್‍ಐ ಪ್ರಕರಣ ಅಪ್‍ಡೇಟ್ ಮಾಡದಿರುವ ಆಸ್ಪತ್ರೆ-ನರ್ಸಿಂಗ್‍ಹೋಂಗಳ ತಾತ್ಕಾಲಿಕ ಸೀಜ್

ಸುದ್ದಿದಿನ,ದಾವಣಗೆರೆ : ಸರ್ಕಾರದ ಆದೇಶದಂತೆ ಆಸ್ಪತ್ರೆಗಳಿಗೆ ಬರುವವರಲ್ಲಿ ಶೀತ, ಜ್ವರದಂತಹ (ಐಎಲ್‍ಐ) ಮತ್ತು ತೀವ್ರ ಉಸಿರಾಟದ ತೊಂದರೆ(ಎಸ್‍ಎಆರ್‍ಐ) ಪ್ರಕರಣಗಳನ್ನು ಪ್ರತಿದಿನ ಆರೋಗ್ಯ ಇಲಾಖೆಯ ವೆಬ್‍ಪೋರ್ಟಲ್‍ಗೆ ಅಪ್‍ಡೇಟ್ ಮಾಡದೇ...

ದಿನದ ಸುದ್ದಿ2 days ago

ಉಡುಪಿಯ ಪದ್ಮಪ್ರಿಯಾ ಆತ್ಮಕ್ಕೆ ಶಾಂತಿ ಸಿಕ್ತು..! ಶಾಸಕರ ಪತ್ನಿ ಸಾವಿಗೆ ಕಾರಣವಾದ ಟಿವಿ ಅ್ಯಂಕರ್ ಗೂ ಅದೇ ಗತಿಯಾಯ್ತು..!

ಪ್ರದೀಪ್ ಕುಮಾರ್, ಪತ್ರಕರ್ತ ನಿಮಗೆ ಉಡುಪಿ ಪದ್ಮಪ್ರಿಯ ಪ್ರಕರಣ ಮರೆತು ಹೋಗಿರಬಹುದು. ನಾಲ್ಕೈದು ದಿನ ಟಿವಿಯಲ್ಲಿ ಪದ್ಮಪ್ರಿಯಾ ಸಾವಿನ ತರಾವರಿ ಕತೆ ಕೇಳಿ ಖುಷಿಯಲ್ಲೇ ಆಕ್ರೋಶ ವ್ಯಕ್ತಪಡಿಸಿ...

ದಿನದ ಸುದ್ದಿ2 days ago

ಬೆಳೆ ವಿಮೆ ಪಾವತಿಸಲು ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2020-21 ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಅವಧಿಗಳಿಗೆ ವಿಮೆ ಕಟ್ಟಲು ಜುಲೈ 10 ರವರೆಗೆ...

Trending