Connect with us

ದಿನದ ಸುದ್ದಿ

ಬಳ್ಳಾರಿ | ಸೊಂಕಿತರ ಸಂಖ್ಯೆ 181ಕ್ಕೇರಿಕೆ : ಟಿಬಿ ಡ್ಯಾಂ ಸಿಪಿಐ ಸೇರಿ 6ಜನ ಡಿಸ್ಚಾರ್ಜ್

Published

on

ಸುದ್ದಿದಿನ,ಬಳ್ಳಾರಿ : ಬಳ್ಳಾರಿಯಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದ‌ ಹಿನ್ನೆಲೆ ತುಂಗಾಭದ್ರಾ ಡ್ಯಾಂ‌ ಸಿಪಿಐ ಸೇರಿದಂತೆ 6ಜನರನ್ನು ಕೋವಿಡ್ ಆಸ್ಪತ್ರೆಯಿಂದ ಶನಿವಾರ ಸಂಜೆ ಬಿಡುಗಡೆ ಮಾಡಲಾಯಿತು.

ಬಳ್ಳಾರಿ ಜಿಲ್ಲೆಯಲ್ಲಿ 11 ಕೊರೊನಾ ಸೊಂಕು ದೃಢಪಟ್ಟಿರುವುದು ಸೇರಿದಂತೆ ಕೋವಿಡ್ ಸೊಂಕಿತರ ಸಂಖ್ಯೆ 181ಕ್ಕೇರಿದೆ. ಅವರಲ್ಲಿ ಈ 6ಜನ ಬಿಡುಗಡೆಯಾದವರು ಸೇರಿ ಇದುವರೆಗೆ 55ಜನರು ಬಿಡುಗಡೆಯಾದಂತಾಗಿದೆ. ಓರ್ವ ಸಾವನ್ನಪ್ಪಿದ್ದು,125ಪ್ರಕರಣಗಳು ಸಕ್ರಿಯವಾಗಿದ್ದು,ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಈ ಒಟ್ಟು ಪ್ರಕರಣಗಳಲ್ಲಿ ಜಿಂದಾಲ್ ಸಿಬ್ಬಂದಿ ಹಾಗೂ ಸಂಪರ್ಕಿತರ ಸಂಖ್ಯೆ 103 ಇದೆ.

ಕೋವಿಡ್ ಆಸ್ಪತ್ರೆಯಿಂದ ‌ಬಿಡುಗಡೆಯಾದವರ‌ ವಿವರ

P-3246 40ವರ್ಷದ ಪುರುಷ ಮೂಲತಃ ಹೋಸಪೇಟೆಯವರು, P-4350 42 ವರ್ಷದ ಪುರುಷ ಮೂಲತಃ ತೋರಣಗಲ್ಲಿನ JSW ಉದ್ಯೋಗಿ ಸೊಂಕಿತ ವ್ಯಕ್ತಿಯ ಸಂಪರ್ಕಿತ, P-5573 45 ಮಹಿಳೆ ಮೂಲತಃ ಬಳ್ಳಾರಿಯವರು JSW ಉದ್ಯೋಗಿ ಸೊಂಕಿತ ವ್ಯಕ್ತಿಯ ಸಂಪರ್ಕಿತ, P-5574 54ವರ್ಷದ ಪುರುಷ ಮೂಲತಃ ಕರ್ನೂಲ್ ಜಿಲ್ಲೆಯವರು ಸೊಂಕಿತ ಪ್ರದೇಶದಿಂದ ಚಿಕಿತ್ಸೆಗಾಗಿ ಬಂದವರು,P- 5377 50ವರ್ಷದ ಪುರುಷ ಮೂಲತಃ ಟಿ.ಬಿ. ಡ್ಯಾಂ ಆರಕ್ಷಕ ವೃತ್ತ ನಿರೀಕ್ಷಕರು ಕರ್ತವ್ಯ ನಿರ್ವಹಿಸುವಾಗ ಸೊಂಕಿತರು, P-5379 39ವರ್ಷದ ಪುರುಷ ಮೂಲತಃ ಬಳ್ಳಾರಿಯವರಾಗಿದ್ದಾರೆ.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದವರಿಗೆ ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಕಂದಾಯ ಇಲಾಖೆ ವತಿಯಿಂದ ನೀಡಲಾಗುವ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು, ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿದೆವು. ಆತ್ಮಸ್ಥೈರ್ಯವನ್ನು ತುಂಬಿ ಅವರನ್ನು ಗುಣಮುಖರಾಗಲು ಬಹಳ ಶ್ರಮವಹಿಸಿದೆವು; 6 ಜನರು ಒಂದೇ ಬಾರಿಗೆ ಗುಣಮುಖರಾಗಿರುವುದು ನಮಗೆ ತುಂಬಾ ಸಂತೋಷವಾಗಿದ್ದು ಇನ್ನು ಉಳಿದವರನ್ನು ಆದಷ್ಟು ಬೇಗ ಗುಣಮುಖರನ್ನಾಗಿ ಮಾಡಿ ಬಳ್ಳಾರಿಯನ್ನು ಕರೋನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದರು.

ಗುಣಮುಖರಾಗಿ ಹೊರಬಂದವರಲ್ಲಿ ಟಿಬಿ ಡ್ಯಾ ಸಿಪಿಐ ಸೇರಿದಂತೆ ಕೆಲವರು ಮಾತನಾಡಿ, ಆಸ್ಪತ್ರೆಗೆ ದಾಖಲಾಗಿ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ನೀಡಿದರು ಮತ್ತು ಮನಃ ಸ್ಥೈರ್ಯ ಕಳೆದುಕೊಂಡಿದ್ದ ನಮ್ಮನ್ನು ಮಾನಸಿಕವಾಗಿಯೂ ಸಜ್ಜುಗೊಳಿಸಿ ವೈರಸ್ ವಿರುದ್ಧ ಹೋರಾಡಲು ಬಲತುಂಬಿದರು ಹಾಗೂ ಗುಣಮಟ್ಟ ಆಹಾರ ಒದಗಿಸಿದರು. ವೈದ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಯ ಈ ಕಾರ್ಯಕ್ಕೆ ನಾವು ಎಂದಿಗೂ ಋಣಿಯಾಗಿರುತ್ತೇವೆ ಎಂದರು.

ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ದೈವೀಕ್, ಡಾ.ನಿಖಿಲ್, ಡಾ.ಶಂಕರ್ ನಾಯಕ್, ಡಾ.ಪ್ರಕಾಶ್, ಡಾ.ಉದಯ್ ಶಂಕರ್, ಡಾ.ಚಿತ್ರಶೇಖರ ಸೇರಿದಂತೆ ಪೊಲೀಸ್ ‌ಇಲಾಖೆಯ ವಿವಿಧ ಹಂತದ ಅಧಿಕಾರಿಗಳು, ಡಾ.ಪ್ರಕಾಶ, ಅಂಜನೇಯ ಹಾಗೂ ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರ ಸಿಬ್ಬಂದಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending