Connect with us

ದಿನದ ಸುದ್ದಿ

ದಾವಣಗೆರೆ | ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಸೋಂಕು ಇಲ್ಲ : ಜಿಲ್ಲಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ : ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ (covid-19)ನ್ನು 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯು 2020 ರ ಮಾರ್ಚ್ 11 ರಂದು ಕೋವಿಡ್-19 ನ್ನು ಸರ್ವವ್ಯಾಪಿ ರೋಗ ಎಂದು ನಿರೂಪಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ರೋಗ ತಡೆಗಟ್ಟುವ ಕ್ರಮಗಳನ್ನು ಎಲ್ಲ ರೀತಿಯ ಸರ್ವೇಕ್ಷಣೆಯನ್ನು ಮತ್ತು ಸಮೂಹ ನಿಯಂತ್ರಣ ಕಾರ್ಯತಂತ್ರಗಳನ್ನು ಬಲಪಡಿಸಿದೆ.

ಜಿಲ್ಲೆಯಿಂದ ಅಂತರಾಷ್ಟ್ರೀಯ ಪ್ರಯಾಣಿಕರ ಸಾರ್ವತ್ರಿಕ ತಪಾಸಣಾ ವರದಿ : ಮಾರ್ಚ್ 04 ರಿಂದ ಇಲ್ಲಿಯವರೆಗೆ: ಸಂಗ್ರಹ ವರದಿ 23.03.2020

  1. ಅವಲೋಕನೆಗಾಗಿ ಪಟ್ಟಿ ಮಾಡಲ್ಪಟ್ಟವರು 26 220
  2. 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದವರು 00 01
  3. 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದವರು 00 16
  4. ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟವರು 24 202
  5. ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಇರಿಸಲ್ಪಟ್ಟವರು 02 16
  6. ನಮ್ಮ ಜಿಲ್ಲೆಯಿಂದ ಹೊರ ದೇಶಗಳಿಗೆ ಹೋದವರು (ಅಲ್ಲಿಯೇ ನೆಲೆಸಿರುವವರು) 00 05
  7. ನಮ್ಮ ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಹೋದವರು (ಬೇರೆ ದೇಶಕ್ಕೆ ಹೋಗಿ ಬಂದವರು) 00 07
  8. ಪರೀಕ್ಷೆ ಮಾಡಲು ಸಂಗ್ರಹಿಸಲಾದ ಒಟ್ಟು ಮಾದರಿಗಳು 02 22
  9. ನೆಗೆಟಿವ್ ಎಂದು ವರದಿಯಾದ ಒಟ್ಟು ಫಲಿತಾಂಗಳು 12 20
  10. ಖಚಿತಪಟ್ಟ ಫಲಿತಾಂಶಗಳು 00 00

ಇದುವರೆಗೆ ಜಿಲ್ಲೆಯಲ್ಲಿ ಈ ದಿನದವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ. 2020 ರ ಮಾರ್ಚ್ 04 ರಿಂದ ಇದುವರೆಗೆ 220 ಜನರು ಜಿಲ್ಲೆಯಿಂದ ವಿದೇಶ ಪ್ರಯಾಣ ಮಾಡಿ ಬಂದಿದ್ದು, ಒಬ್ಬರು 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಹಾಗೂ 16 ಜನರು 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 202 ಜನರನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟಿದ್ದು, 16 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.

ಹೊರದೇಶಗಳಲ್ಲಿ ಶಾಶ್ವತವಾಗಿ ನೆಲೆಸಿರುವ ವಿದೇಶಿಗರು ಜಿಲ್ಲೆಗೆ ಬಂದು ಮತ್ತೆ ಹೊರದೇಶಗಳಿಗೆ ಇದುವರೆಗೆ 05 ಜನರು ತೆರಳಿದ್ದಾರೆ. ವಿದೇಶಗಳಿಗೆ ಭೇಟಿ ನೀಡಿ ನಮ್ಮ ಜಿಲ್ಲೆಗೆ ಬಂದು ಇತರೆ ಜಿಲ್ಲೆಗಳಿಗೆ ಇದುವರೆಗೆ 07 ಜನ ತೆರಳಿರುತ್ತಾರೆ. ಕೊರೋನಾ ವೈರಸ್ ಪರೀಕ್ಷೆಗಾಗಿ 22 ಮಾದರಿಗಳನ್ನು ಇದುವರೆಗೆ ಕಳುಹಿಸಲಾಗಿದ್ದು, 20 ಮಾದರಿಗಳು ನೆಗೆಟಿವ್ ಎಂದು ಫಲಿತಾಂಶ ಬಂದಿರುತ್ತದೆ. ಇದುವರೆಗೆ ಯಾವುದೇ ಖಚಿತಪಟ್ಟ ಪ್ರಕರಣಗಳು ಇರುವುದಿಲ್ಲ.

ಸಾರ್ವಜನಿಕರಿಗೆ ಮನವಿ

ಕೊವಿಡ್-19 ಪೀಡಿತ ಪ್ರದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರೂ ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು. ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಅಥವಾ 104 ಸಹಾಯವಾಣಿಗೆ ಕರೆ ಮಾಡುವುದು. ವೈಯುಕ್ತಿಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ, ಕೈ ಸಚ್ಚಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವಿಕೆಯನ್ನು ಮಾಡಬಾರದು.

ಎಲ್ಲಾ ರೀತಿಯ ಮಾರ್ಗಸೂಚಿಗಳು ಮತ್ತು ಸಲಹೆಗಳು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಜಾಲತಾಣದಲ್ಲಿ ಲಭ್ಯವಿದ್ದು, ಜಾಲತಾಣದ ವಿಳಾಸ https://karunadu.karnataka.gov.in/hfw/kannada/pages/nCov-iec.aspx ಇಲ್ಲಿ ಪಡೆಯ ಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending