Connect with us

ದಿನದ ಸುದ್ದಿ

ದಾವಣಗೆರೆ | ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಿರಿ : ಎಸ್.ಆರ್. ಉಮಾಶಂಕರ್

Published

on

ಸುದ್ದಿದಿನ,ದಾವಣಗೆರೆ : ಬರಪೀಡಿತ ತಾಲೂಕುಗಳೆಂದು ಗುರುತಿಸಿರುವ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರೆಯಲು ಹೈಕೋರ್ಟ್ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಜಗಳೂರು ತಾಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಒಂದೊಂದು ಗೋಶಾಲೆ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಿಲಾಗಿದ್ದ ಬರ ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಗಳೂರು ತಾಲ್ಲೂಕಿನಲ್ಲಿ ಈಗಾಗಲೇ ಗೋಶಾಲೆ ತೆರೆಯಲಾಗಿದೆ. ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದೆ, ಇತರೆ ತಾಲೂಕಗಳಲ್ಲಿ ಮೇವಿನ ಕೊರತೆಯಾಗಿರಬಹುದು. ಅಧಿಕಾರಿಗಳು ನೇರವಾಗಿ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮೇವಿನ ಕೊರೆತಯ ಬಗ್ಗೆ ಮಾಹಿತಿ ಪಡೆದು ಮೇವು ಒದಗಿಸುವ ಕಾರ್ಯ ಮಾಡಬೇಕು ಎಂದರು.

ಹೈಕೋರ್ಟ್ ಆದೇಶದಂತೆ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದು, ಎರಡು ಲೋಡ್‍ಗಳಷ್ಟು ಮೇವು ಸ್ಟಾಕ್ ಮಾಡಬೇಕು. ಎರಡು ವಾರಗಳ ಕಾಲ ಕಾಯಿರಿ. ರೈತರು ಗೋಶಾಲೆಗೆ ಬಂದು ಮೇವು ತೆಗೆದುಕೊಂಡು ಹೋದರೆ ಸರಿ ಇಲ್ಲವಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ. ಗೋಶಾಲೆ ಅವಶ್ಯಕತೆ ಇಲ್ಲದಿದ್ದಲ್ಲಿ ಮುಚ್ಚುವ ಕೆಲಸ ಮಾಡಬೇಕು ಎಂದರು.

ಜಗಳೂರು ತಾಲೂಕಿನ ತಹಶೀಲ್ದಾರ್ ತಿಮ್ಮಣ್ಣ ಮಾತನಾಡಿ, ತಾಲೂಕಿನಲ್ಲಿ ಮೇವಿನ ಕೊರತೆ ಹೆಚ್ಚಿರುವ ಮೂರು ಪ್ರದೇಶಗಳಲ್ಲಿ ಗೋಶಾಲೆ ತೆರೆಯಲಾಗಿದೆ. ಇನ್ನುಳಿದ ಎರಡು ಕಡೆಗಳಲ್ಲಿ ಮೇವಿನಬ್ಯಾಂಕ್ ತೆರೆದು ಮೇವಿನ ಕೊರತೆಯನ್ನು ನೀಗಿಸಲಾಗುತ್ತಿದೆ. ಬಳ್ಳಾರಿ, ಕೊಪ್ಪಳ, ರಾಯದುರ್ಗ ಪ್ರದೇಶಗಳಿಂದ ಸಜ್ಜೆ, ಮೆಕ್ಕೆಜೋಳ ಸಪ್ಪೆಯ ಹಸಿ ಮೇವನ್ನು ಪೂರೈಸಲಾಗುತ್ತಿದೆ. ತಾಲೂಕಿನಲ್ಲಿ ಮುಂದಿನ 08 ವಾರಗಳಿಗೆ ಆಗುವಷ್ಟು ಮೇವಿದ್ದು, ಮಳೆ ಬಂದು ಅಲ್ಲಲ್ಲಿ ಮೇವು ಚಿಗುರುತ್ತಿರುವ ಪರಿಣಾಮ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಆಗುವ ಸಂಭವವಿಲ್ಲ ಎಂದರು.

ಅಗತ್ಯವಿದ್ದರೆ ಜಗಳೂರು ತಾಲೂಕಿನಲ್ಲಿ ಇನ್ನೊಂದು ಮೇವಿನ ಬ್ಯಾಂಕ್ ತೆರೆದು ರೈತರಿಗೆ ಮೇವು ನೀಡಿ. ಅನುದಾನಕ್ಕಂತೂ ಕೊರತೆಯಿಲ್ಲ. ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರಯಲು ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ಮುಂಜಾಗ್ರತ ಕ್ರಮವಾಗಿ ಒಂದು ಅಥವಾ ಎರಡು ಟನ್‍ಗಳಷ್ಟು ಮೇವು ಸಂಗ್ರಹಿಸಿ ಎರಡು ಸಿಬ್ಬಂದಿಗಳನ್ನು ನಿಯೋಜಿಸಿ ರೈತರು ಬಂದರೆ ಮೇವು ನೀಡಿ. ರೈತರು ಬಾರದಿದ್ದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದರು.
ಪ್ರತಿ ತಾಲೂಕಿನ ಇಓ ಮತ್ತು ತಹಶೀಲ್ದಾರ್‍ಗಳು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಮೇವಿನ ಕೊರೆತೆ-ಲಭ್ಯತೆ ಕುರಿತು ಪರಿಶೀಲಿಸಿ. ಮೇವು ಬೇಕು ಎನ್ನುವ ರೈತರ ಹೆಸರು ನೊಂದಾಯಿಸಿಕೊಂಡು ಮೊಬೈಲ್‍ಬ್ಯಾಂಕ್ ಮೂಲಕ ಮೇವು ಒದಗಿಸಿ. ಅಲ್ಲದೇ ಅಲ್ಲಿಯ ರೈತರೊಂದಿಗೆ ಮಿನಿಕಿಟ್‍ನ ಮಾಹಿತಿ ನೀಡಿ, ಮಿನಿಕಿಟ್‍ಗಳನ್ನು ವಿತರಿಸಿ. ಮುಂದಿನ ದಿನಗಳಲ್ಲಿ ಅಲ್ಲಿನ ರೈತರಿಂದಲೇ ಮೇವು ಖರೀದಿಸುವ ವ್ಯವಸ್ಥೆ ಮಾಡಿಕೊಳ್ಳಿ. ಇದರಿಂದ ಹಣವು ಉಳಿತಾಯವಾಗಲಿದೆ ಎಂದು ಉಮಾಶಂಕರ್ ಸಲಹೆ ನೀಡಿದರು.

ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ ಮುದುಗಲ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಯ ಮಳೆಗಿಂತ ಶೇ.34 ರಷ್ಟು ಮಳೆ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ನೀರಾವರಿ ಪ್ರದೇಶದಲ್ಲಿ ಶೇ.5 ಹಾಗೂ ಬೆದ್ದಲು ಪ್ರದೇಶದಲ್ಲಿ ಶೇ.86 ರಷ್ಟು ಬಿತ್ತನೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯು ಮುಸುಕಿನ ಜೋಳ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ ನಂತರ ಭತ್ತ, ತೋಟಗಾರಿಕೆಯಲ್ಲಿ ತೆಂಗು ಮತ್ತು ಅಡಿಕೆ ಹೆಚ್ಚಿನ ಬಿತ್ತನೆಯಾಗಿದೆ. ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಬೆಳೆವಿಮೆ ಯೋಜನೆಯಡಿ ಈ ಬಾರಿ ಜಿಲ್ಲೆಯಲ್ಲಿ 28 ಸಾವಿರ ರೈತರು ನೊಂದಾಯಿಸಿದ್ದಾರೆ. ಹಿಂದಿನ ವರ್ಷಗಳ ಬೆಳೆವಿಮೆಯ ಮಾಹಿತಿ ಹಾಗೂ ಬಾಕಿ ಹಣದ ಮಾಹಿತಿ ಮತ್ತು ಕಿಸಾನ್ ಸಮ್ಮಾನ್ ಯೋಜನೆ ಕುರಿತು ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.
ನಗರ ಪ್ರದೇಶಗಳ ಕುಡಿಯುವ ನೀರು ಸರಬರಾಜು ಕುರಿತು ಮಾಹಿತಿ ನೀಡಿದ ಡಿ.ಯು.ಡಿ.ಸಿಯ ಯೋಜನಾ ನಿರ್ದೇಶಕಿ ನಜ್ಮಾ, ನಗರ ಪ್ರದೇಶಗಳಲ್ಲಿ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ಸದ್ಯಕ್ಕೆ ದಾವಣಗೆರೆ ನಗರದಲ್ಲಿ 41 ವಾರ್ಡ್‍ಗಳಿಗೆ ವಾರಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನುಳಿದ ಪ್ರದೇಶಗಳಲ್ಲಿ 5 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ನೀರಿನ ಹಾಹಾಕಾರವಂತೂ ಇಲ್ಲ ಎಂದರು.

ಜಗಳೂರು ತಾಲೂಕಿನಲ್ಲಿ ಇಂದಿಗೂ 77 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕವೇ ನೀರು ಸರಬರಾಜು ಮಾಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪ್ರದೇಶಗಳಲ್ಲಿ ಚಾನೆಲ್‍ಗಳಿಗೆ ಭದ್ರಾ ಜಲಾಶಯದ ನೀರು ಬಿಡದ ಪರಿಣಾಮ 27 ಪ್ರದೇಶಗಳಲ್ಲಿ (ಅಣಜಿ, ಆನಗೋಡು, ಮಾಯಕೊಂಡ ಇತರೆ ಪ್ರದೇಶಗಳಲ್ಲಿ) ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತಿತ್ತು. ಕೆಲವು ಪ್ರದೇಶಗಳಲ್ಲಿ ಬೋರ್‍ವೆಲ್ ಕೊರಸಲಾಗಿದ್ದು, ನೀರು ಸಿಕ್ಕಿದ ತಕ್ಷಣ ಪೈಪ್‍ಲೈನ್ ಮೂಲಕ ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.

ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಬಿಲ್ ಪಾವತಿಯಾಗಿದೆ. ಕೆಲವು ಜಿ.ಪಿ.ಎಸ್ ಸರಿಯಾಗಿ ಇಲ್ಲದಿರುವ ಕಡೆ ಹಣ ಮಂಜೂರು ಮಾಡಿಲ್ಲ. ಈಗಾಗಲೇ ಜಿಲ್ಲಾಡಳಿತ ತಂಡದಿಂದ ಪರಿಶೀಲನೆ ನಡೆಸಿದ್ದು ಮತ್ತೋಮ್ಮೆ ಪುನಃ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಮ್ಮಣ್ಣ ತಿಳಿಸಿದರು.

ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ಕೇಳಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಂಚಣಿ ಅದಾಲತ್ ನಡೆಸಿ ಸರ್ಕಾರಿ ಯೋಜನೆಗಳ ಮಾಹಿತಿ ಮತ್ತು ಸೌಲಭ್ಯವನ್ನು ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಜಗಳೂರು ತಾಲೂಕಿನಲ್ಲಿ ಗ್ರಾಮಭೇಟಿ ಕಾರ್ಯಕ್ರಮದ ಮೂಲಕ ಅಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಮೂಲಕ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅವಹಾಲು ಸ್ವೀಕರಿಸಿ ಅವುಗಳಿಗೆ ಪರಿಹಾರವನ್ನು ವಾರದಲ್ಲಿಯೇ ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಅಂದಿನ ದಿನಕ್ಕೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಹೆಚ್ಚಿನ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನುಳಿದ ತಾಲೂಕುಗಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಜಲಶಕ್ತಿ ಮತ್ತು ಜಲಾಮೃತ ಕಾರ್ಯಕ್ರಮಗಳಡಿಯಲ್ಲಿ ಶಾಲೆ, ಹಾಸ್ಟೆಲ್ ಹಾಗೂ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸಿ ಜಿಲ್ಲೆಯ ಹಸಿರೀಕರಣಕ್ಕೆ ಒತ್ತು ನೀಡಿ. ಜಲಾಮೃತ ಕಾರ್ಯಕ್ರಮದಡಿಯಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗೆ 5000 ಅನುದಾನ ನೀಡಲಿದ್ದು, ಈ ಅನುದಾನದಲ್ಲಿ ಕಿಚನ್‍ಗಾರ್ಡ್‍ನ್ನು ನಿರ್ಮಿಸಿ ಅಲ್ಲಿನ ಮಕ್ಕಳಿಗೆ ಅನುಕೂಲವಾಗುವಂತೆ ಪಪ್ಪಾಯ, ನುಗ್ಗೆಕಾಯಿ, ಸಫೋಟ, ಮಾವು, ಹುಣಸೆ, ನೇರಳೆ ಮರಗಳನ್ನು ಬೆಳೆಯಬೇಕು. ಈ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಡಿ.ಡಿ.ಪಿ.ಐ ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಹಿಂದಿನ ದಿನಗಳಲ್ಲಿ ಬರ ನಿರ್ವಹಣೆಯನ್ನು ನಿರ್ವಹಿಸಿದ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಇನ್ನು ಉತ್ತಮವಾಗಿ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸಭೆಯಲಿದ್ದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ಷರೀಫ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ಸಂಖ್ಯಾಧಿಕಾರಿ ರಾಜೇಶ್ವರಿ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರ್‍ಗಳು ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ. ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು...

ದಿನದ ಸುದ್ದಿ1 day ago

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty...

ದಿನದ ಸುದ್ದಿ5 days ago

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ...

ದಿನದ ಸುದ್ದಿ1 week ago

ದಾವಣಗೆರೆ ವಿವಿ ಘಟಿಕೋತ್ಸವ ; ಮೂವರಿಗೆ ಗೌರವ ಡಾಕ್ಟರೇಟ್

ಸುದ್ದಿದಿನ, ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಶಿವರಾಜ ಪಾಟೀಲ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ...

ದಿನದ ಸುದ್ದಿ1 week ago

ದಾವಣಗೆರೆ ವಿಶ್ವವಿದ್ಯಾಲಯ | 11ನೇ ಘಟಿಕೋತ್ಸವ :ದೀಪ್ತಿಗೆ ಐದು ; ಸಿಂಧುಬಾಯಿಗೆ ಮೂರು ಚಿನ್ನದ ಪದಕ

ಸುದ್ದಿದಿನ,ದಾವಣಗೆರೆ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,357ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯದ ಹನ್ನೊಂದನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲಿದ್ದಾರೆ. 45ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದರೆ, 64 ಸಂಶೋಧನಾ ವಿದ್ಯಾರ್ಥಿಗಳು...

ದಿನದ ಸುದ್ದಿ1 week ago

ಪಿಎಚ್ ಡಿ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾ.19 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವ ವಿದ್ಯಾನಿಲಯದ ವೆಬ್‍ಸೈಟ್...

ದಿನದ ಸುದ್ದಿ1 week ago

ವಿಶ್ವ ಫ್ಲಂಬರ್ ದಿನಾಚರಣೆ

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕಾವೇರಿ ಮಾತಾ ಪ್ಲಂಬರ್ಸ್ ಕಾರ್ಮಿಕರ ಸಂಘದಿಂದ ಸಂಘದ ಕಚೇರಿಯಲ್ಲಿ ವಿಶ್ವ ಪ್ಲಂಬರ್ ದಿನಾಚರಣೆ ಹಾಗೂ ವಿಶ್ವ ಜಲ ಸಂಗ್ರಹಣಾ ದಿನವನ್ನು ಸರಳವಾಗಿ ಆಚರಿಸಲಾಯಿತು. ಈ...

ದಿನದ ಸುದ್ದಿ1 week ago

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು...

ಕ್ರೀಡೆ1 week ago

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ....

ದಿನದ ಸುದ್ದಿ1 week ago

ನರೇಂದ್ರ ಮೋದಿ ಹರಿಯಾಣದ ಗುರುಗ್ರಾಮಕ್ಕೆ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ...

Trending