Connect with us

ದಿನದ ಸುದ್ದಿ

ಚನ್ನಗಿರಿ | ಕದ್ದ ಮಾಲು ಮಾರಲು ಬಂದು ಸಿಕ್ಕಿ ಬಿದ್ದ ಕಳ್ಳರು : ಪೋಲಿಸರಿಗೆ ಎಸ್ಪಿ ಹನುಮಂತರಾಯ ಶ್ಲಾಘನೆ

Published

on

ಸುದ್ದಿದಿನ,ಚನ್ನಗಿರಿ: ಪಟ್ಟಣದ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳರನ್ನು ವೃತ್ತ ನಿರೀಕ್ಷಕ ಆರ್,ಆರ್, ಪಾಟೀಲ್ ನೇತೃತ್ವದದ ತಂಡವು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿಗಳಾದ ಹನುಮಂತರಾಯ ತಿಳಿಸಿದರು.

ಸಂತೇಬೆನ್ನೂರು ಪೋಲೀಸ್ ಠಾಣೆಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳು ಏಪ್ರಿಲ್ 16 ರಂದು ಕಳುವು ಮಾಡಿ ಪರಾರಿಯಾಗಿದ್ದರು. ಆರೋಪಿಗಳನ್ನು ಅಮ್ಜಾದ್ ಖಾನ್  ಮತ್ತು ಸುಹೀಲ್ ಖಾನ್ ಎಂದು ಗುರುತಿಸಿದ ನಮ್ಮ ಪೋಲೀಸರ ತಂಡವು ಅವರು ಕದ್ದ ಆಭರಣಗಳನ್ನು ಮಾರಟ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಬಂಧಿಸಿದೆ ಎಂದರು.

ಕಳ್ಳರು ಮನೆಯಲ್ಲಿಟ್ಟಿದ 92 ಗ್ರಾಂ ತೂಕದ ಬಂಗಾರದ, 380 ಗ್ರಾಂ ತೂಕದ ಬೆಳ್ಳಿ ಆಭರಣಳನ್ನು ಕಳ್ಳತನ ಮಾಡಿದ್ದರು. ದ್ವಿಚಕ್ರ ವಾಹನವನ್ನು ಕದ್ದಿದ್ದರು. ಒಟ್ಟು ಸುಮಾರು 4 ಲಕ್ಷ ಮೌಲ್ಯದ  ಈ ವಸ್ತುಗಳನ್ನು ಪೋಲೀಸರು ಆರೋಪಿಗಳಿಂದ ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದರು.

ವೃತ್ತನಿರೀಕ್ಷ ಆರ್ ಆರ್ ಪಾಟೀಲ್ ನೇತೃತ್ವದ ತಂಡ

ಚನ್ನಗಿರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅರೋಪಿಗಳ ಪತ್ತೆಗಾಗಿ ಚನ್ನಗಿರಿ ವಿಭಾಗದ ಉಪಾದೀಕ್ಷರಾದ ಪ್ರಶಾಂತ್ ಮುನ್ನೊಳಿ ರವರ ಮಾರ್ಗದರ್ಶನದಲ್ಲಿ ಸಂತೇಬೆನ್ನೂರು ಪೋಲೀಸ್ ಠಾಣೆಯ ಪಿಎಸ್ಐ ಶಿವರುದ್ರಪ್ಪ ಎಸ್ ಎಸ್ ಮೇಟಿ ರವರನ್ನೊಳಗೊಂಡ ಕ್ರೈಂ ವಿಭಾಗದ ಪಿಎಸ್ಐ ಶ್ರೀಮತಿ ರೂಪ್ಲಿಬಾಯಿ ಹಾಗೂ ಸಿಬ್ಬಂದಿಗಳಾದ ಧರ್ಮಪ್ಪ . ರುದ್ರೇಶ್ ಹೆಚ್ ಸಿ . ರುದ್ರೇಶ್ ಎಸ್ಆರ್ . ಮಂಜುನಾಥ್ ಪ್ರಸಾದ್ . ಕೊಟ್ರೇಶ್ . ಮಹಮದ್ ರಫೀಕ್ . ಪರಶುರಾಮ್ ಸೇರಿದಂತೆ ತಂಡವನ್ನು ರಚಿಸಿದ ವೃತ್ತನಿರೀಕ್ಷರಾದ ಆರ್ ಆರ್ ಪಾಟೀಲ್ ನೇತೃತ್ವದದ ತಂಡ ಆರೋಪಿಗಳನ್ನು ಬಂಧಿಸಿದೆ ಎಂದು ಹೇಳಿದರು.


ಇದುವರೆಗೆ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು

  1. 2018 ರಲ್ಲಿ 254 ಪ್ರಕರಣಗಳು
  2. 2019 ರಲ್ಲಿ 218 ಪ್ರಕರಣಗಳು
  3. 2020 ರಲ್ಲಿ 251 ಎಪ್ರಿಲ್ ವರೆಗೆ ಪ್ರಕರಣಗಳು ದಾಖಲಾಗಿವೆ.

|ಎಸ್ಪಿ ಹನುಮಂತರಾಯ


ವರದಿ :ಕೋಗಲೂರು ಕುಮಾರ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ| ಇಸ್ಪೀಟ್ ಆಡಿ ಸಿಕ್ಕಿಬಿದ್ದ ಶಿಕ್ಷಣ ಇಲಾಖೆಯ 7 ಸಿಬ್ಬಂದಿ ಅಮಾನತು

Published

on

ಸುದ್ದಿದಿನ, ದಾವಣಗೆರೆ: ಕೊರೊನಾ ಕರ್ತವ್ಯಕ್ಕೆ ನಿಯೋಜಿಸಿದ್ದಾಗ ಇಸ್ಪೀಟ್ ಜೂಜಾಟ ಆಡಿ ಸಿಕ್ಕಿ ಬಿದ್ದಿದ್ದ ದಾವಣಗೆರೆ ಉತ್ತರವಲಯದ ಬಿಇಓ ಕಚೇರಿಯ ಏಳು ಜನ ಸಿಬ್ಬಂದಿಯನ್ನು ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ ಜಿ ಜಗದೀಶ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಉತ್ತರವಲಯದ ಆದೀಕ್ಷಕ ಹೆಚ್.ಎಸ್ ಬಸವರಾಜ, ಪ್ರಥಮ ದರ್ಜೆ ಸಹಾಯಕ ಎಂ ಸುಧಾಕರ್, ದ್ವಿತೀಯ ದರ್ಜೆ ಸಹಾಯಕ ಕೊಟ್ರೋಶ್ ಸೇರಿದಂತೆ ಏಳು ಜನರನ್ನು ಅಮಾನತು ಮಾಡಲಾಗಿದೆ. ಒಂದು ತಿಂಗಳ ಹಿಂದೆ ಲಾಕ್ ಡೌನ್ ಸಮಯದಲ್ಲಿ ಇಸ್ಪೀಟ್ ಆಡುವಾಗ ಸಿಕ್ಕಿ ಬಿದ್ದಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಎಸ್ ಎಸ್ ಎಲ್ ಸಿ ಪರೀಕ್ಷೆ, ಜಿಲ್ಲೆಯಲ್ಲಿ 1150 ಕೊಠಡಿ ವ್ಯವಸ್ಥೆ ; ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ಅವಕಾಶ : ಡಿಡಿಪಿಐ ಪರಮೇಶ್ವರಪ್ಪ

Published

on

ಸುದ್ದಿದಿನ,ದಾವಣಗೆರೆ: ಸರ್ಕಾರದ ಆದೇಶದಂತೆ ಜೂ.25 ರಿಂದ ಜು.4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಬೇಕು ಎಂದು ನಿರ್ಧರಿಸಿದ್ದೆವೇ. ಜಿಲ್ಲೆಯಲ್ಲಿ ಒಟ್ಟು 435 ಸರ್ಕಾರಿ ಶಾಲೆಗಳಿದ್ದು, 1150 ಕೊಠಡಿಗಳ ವ್ಯವಸ್ಥೆ ಇದೆ, ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪರಮೇಶ್ವರಪ್ಪ ಹೇಳಿದರು.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವ ಸಿದ್ಧತೆಗಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾದರು.

ಜಿಲ್ಲೆಯಲ್ಲಿ ಒಟ್ಟು 20.927 ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದಾರೆ. ಅದರಲ್ಲಿ 10.311 ಗಂಡು ಮಕ್ಕಳು ಹಾಗೂ 10.616 ಹೆಣ್ಣು ಮಕ್ಕಳು ಇದ್ದಾರೆ. ವಿದ್ಯಾರ್ಥಿಗಳು ಭಯ ಪಡದ ರೀತಿಯಲ್ಲಿ ಪತ್ರಿಕೆಗಳಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಲಾಗಿದೆ, ಮತ್ತು ಚಂದನ ವಾಹಿನಿಯ ಪುನರ್ ಮನನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿ ಸಮಸ್ಯೆಗೆ ಪರಿಹಾರ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲು ಸಭೆಯಲ್ಲಿ ತಿರ್ಮಾನಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಥರ್ಮಲ್ ಸ್ಕ್ರೀನಿಂಗ್ ನಡೆಸಿ ನಂತರ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗುತ್ತದೆ. ಸ್ಕೌಟ್ ಅಂಡ್ ಗೈಡ್ಸ್‍ನವರು ವಿದ್ಯಾರ್ಥಿಗಳಿಗೆ ಒಟ್ಟು 22.000 ಮಾಸ್ಕ್‍ಗಳ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರ

  1. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಲಾ ಇಬ್ಬರು ಆರೋಗ್ಯ ಕಾರ್ಯಕರ್ತರ ನಿಯೋಜನೆ.
  2. ಕಂಟೈನ್‍ಮೆಂಟ್ ಜೋನ್ ಪ್ರದೇಶದಲ್ಲಿರುವ ಮಕ್ಕಳಿಗೆ ಪೂರಕ ಕೊಠಡಿ ನಿಯೋಜನೆ.
  3. ಕಂಟೈನ್‍ಮೆಂಟ್ ಜೋನ್ ಪ್ರದೇಶದ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ವಿತರಣೆ.
  4. ಪ್ರತಿ 200 ವಿದ್ಯಾರ್ಥಿಗಳಿಗೆ ಒಂದು ಥರ್ಮಲ್ ಸ್ಕ್ರೀನಿಂಗ್ ಯಂತ್ರ.
  5. ಪರೀಕ್ಷೆ ಬರೆಯುವ ಎಲ್ಲಾ ಮಕ್ಕಳಿಗೆ 2 ಮಾಸ್ಕ್ ವಿತರಣೆ.
  6. ಪ್ರತಿ ಒಂದು ಕೊಠಡಿಗೆ 18 ರಿಂದ 20 ವಿದ್ಯಾರ್ಥಿಗಳು.
  7. ಯಾವುದೇ ವಿದ್ಯಾರ್ಥಿ ಕ್ವಾರಂಟೈನ್‍ಲ್ಲಿದ್ದರೆ ಅವರಿಗೆ ಮುಂದಿನ ಆಗಸ್ಟ್ ತಿಂಗಳಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಹೊಸ ವಿದ್ಯಾರ್ಥಿ ಎಂದು ಪರಿಗಣಿಸಿ ಅವಕಾಶ ನೀಡಲಾಗುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಬಿತ ಕುಂಟುಬದ ಸದಸ್ಯರಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ, ಸಮೃದ್ದಿ, ಉನ್ನತಿ, ಪ್ರೇರಣಾ, ಐರಾವತ, ಸ್ಪೂರ್ತಿ, ಪ್ರಬುದ್ದ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು 2019-20ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹಿಂದೆ ಅರ್ಜಿ ಸಲ್ಲಿಸಲು ಮೇ 30 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು. ಕೋವಿಡ್-19 ಸಾಂಕ್ರ್ರಾಮಿಕ ರೋಗ ನಿಯಂತ್ರಿಸುವ ಸಲುವಾಗಿ ಸರ್ಕಾರವು ಕೈಗೊಂಡಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೀಗ ಜೂನ್ 30 ರವರೆಗೆ ವಿಸ್ತರಿಸಲು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದವರು ಸೂಚಿಸಿರುವ ಮೇರೆಗೆ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಜೂ.30 ರ ಒಳಗೆ www.kssds.kar.nic.in ಆನ್‍ಲೈನ್‍ನಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮ, ಪಿ.ಬಿ ರೋಡ್, #337/16-16, ಗಣೇಶ ಲೇ ಔಟ್ 1ನೇ ಕ್ರಾಸ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending