Connect with us

ದಿನದ ಸುದ್ದಿ

ದಾವಣಗೆರೆ | ಪೊಲೀಸರಿಂದ ಪತ್ರಕರ್ತನ ಮೇಲೆ ಹಲ್ಲೆ : ಪ್ರತಿಭಟನೆ

Published

on

ಸುದ್ದಿದಿನ, ದಾವಣಗೆರೆ : ನಗರದ ಕೊಲೆಕೇಸ್ ಸಂಬಂಧ ಮಹಜರು ನಡೆಸುವಾಗ ಸ್ಥಳದಲ್ಲಿದ್ದ ಪತ್ರಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ಮಹಜರು ನಡೆಸುವ ಸಂದರ್ಭದಲ್ಲಿ ಸ್ಥಳೀಯ ಪತ್ರಿಕೆ ‘ನಗರವಾಣಿ’ಯ ವರದಿಗಾರ ಶಂಬು ಎಂಬುವರ ಮೇಲೆ ದಫೇದಾರ್ ಮಂಜುನಾಥ ನಾಯ್ಕ ಎಂಬುವವರು ಹಲ್ಲೆನಡೆದಿದ್ದು, ಸಿಪಿಐ ಆನಂದ ರಿಂದ ಪತ್ರಕರ್ತನಿಗೆ ಧಮಕಿ ಹಾಕಲಾಗಿದೆ.

ಈ ಸಂಬಂಧ ಜಿಲ್ಲಾ ಪತ್ರಕರ್ತರು ಬಡಾವಣೆ ಠಾಣೆ ಎದುರು ಮೌನ ಪ್ರತಿಭಟನೆಯಲ್ಲಿ ತೊಡಗಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ

Published

on

ಸುದ್ದಿದಿನ,ದಾವಣಗೆರೆ :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (PSI) ಹುದ್ದೆ ಭರ್ತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.

ಡಿ.16 ರಿಂದ 24 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಡಿ.16 ರಂದು ಬೆಳಿಗ್ಗೆ 10.30 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂ: 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹೆಡ್‍ಕಾನ್ಸ್ಟೇಬಲ್ ಹುದ್ದೆಗೆ ‘ಸ್ಪೋಟ್ರ್ಸ್’ ಕೋಟಾದಡಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್(ಸಿಐಎಸ್‍ಎಫ್)ನಲ್ಲಿ 300 ಹೆಡ್‍ಕಾನ್ಸ್‍ಟೇಬಲ್(ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಹ ಪುರುಷ/ಮಹಿಳೆಯರಿಂದ ಸ್ಪೋಟ್ರ್ಸ್ ಕೋಟಾದಡಿ ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯು.ಸಿ ಯಾವುದೇ ವಿಷಯದಲ್ಲಿ ತೇರ್ಗಡೆಯಾದ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕ್ರೀಡೆ ಅಥವಾ ಅಥ್ಲೆಟಿಕ್ಸ್‍ನ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 18 ರಿಂದ ಗರಿಷ್ಠ 23 ವರ್ಷ (02-08-1996 ರಿಂದ 01-08-2001 ರ ಒಳಗೆ ಜನಿಸಿರಬೇಕು) ವಯೋಮಾನ, ಪ. ಜಾತಿ/ ಪ. ಪಂಗಡದವರಿಗೆ 5 ವರ್ಷ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಹ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ವೆಬ್‍ಸೈಟ್ https://cisfrectt.in
ನಲ್ಲಿ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಂಡು, ಭರ್ತಿಮಾಡಿದ ಅರ್ಜಿಗಳನ್ನು ಡಿ.17 ವೆಬ್‍ಸೈಟ್‍ನಲ್ಲಿ ತಿಳಿಸಿದ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಹೆಚ್ಚಿನ ಮಾಹಿತಿಗಾಗಿ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ, ದೂರವಾಣಿ ಸಂಖ್ಯೆ: 08192-259446 ಇಲ್ಲಿಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದದಿಂದ ವಾಹನಗಳ ಕಾರ್ಯಾಚರಣೆ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ, ವಿಭಾಗದಿಂದ ದಾವಣಗೆರೆ-ಜಗಳೂರು ಮಾರ್ಗದಲ್ಲಿ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಸಾರ್ವಜನಿಕರ, ಪ್ರಯಾಣಿಕರ ಹಿತದೃಷ್ಟಿಯಿಂದ ವಾಹನ ಕಾರ್ಯಾಚರಣೆ ಮಾಡಲಾಗುತ್ತಿದೆ.

ಈ ವಾಹನಗಳ ಕಾರ್ಯಾಚರಣೆಯನ್ನು ಕೆಎಸ್‍ಆರ್‍ಟಿಸಿ ದಾವಣಗೆರೆ ಹೊಸ ಬಸ್ ನಿಲ್ದಾಣದಿಂದ ಮಾಡಲಾಗುತ್ತಿದ್ದು, ದಾವಣಗೆರೆಯಿಂದ-ಜಗಳೂರಿಗೆ ಮತ್ತು ಜಗಳೂರಿನಿಂದ–ದಾವಣಗೆರೆಗೆ ಪ್ರತಿ 15 ನಿಮಿಷಗಳಿಗೊಮ್ಮೆ ವಾಹನ ಸೌಲಭ್ಯವಿರುತ್ತದೆ.

ಸಾರ್ವಜನಿಕ ಪ್ರಯಾಣಿಕರು ಬಸ್ ನಿಲ್ದಾಣದಿಂದ ಕಾರ್ಯಾಚರಣೆಯಾಗುವ ನಿಗಮದ ವಾಹನಗಳಲ್ಲಿ ಪ್ರಯಾಣಿಸಬೇಕೆಂದು ದಾವಣಗೆರೆ ವಿಭಾಗದ ಕ.ರಾ.ರ.ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Trending