Connect with us

ದಿನದ ಸುದ್ದಿ

ಪ್ರವಾಹ ಸಮೀಕ್ಷೆ | ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ : ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ಹಾನಿ

Published

on

ಸುದ್ದಿದಿನ,ಬೆಳಗಾವಿ : ಪ್ರವಾಹದಿಂದಾಗಿ ರಾಜ್ಯದಲ್ಲಿ 10 ಸಾವಿರ ಕೋಟಿ ರೂಪಾಯಿ ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿಗಳು ವಿವರಿಸಿದರು. ಕೇಂದ್ರ ಗೃಹಸಚಿವರು ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಬಳಿಕ ಸಾಂಬ್ರಾ ವಿಮಾನ ನಿಲ್ದಾಣ ದಲ್ಲಿ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ರಾಜ್ಯದಲ್ಲಿ ಪ್ರವಾಹ ಬಾಧಿತ ಜಿಲ್ಲೆಗಳಲ್ಲಿ 4.81 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದ್ದು, 22431 ಮನೆಗಳ ಹಾನಿಯಾಗಿದೆ. ಪ್ರಾಥಮಿಕ ಸಮೀಕ್ಷೆಯ ಪ್ರಕಾರ 10 ಸಾವಿರ ಕೋಟಿ ರೂಪಾಯಿ ಹಾನಿ ಅಂದಾಜಿಸಲಾಗಿದೆ. ಇಡೀ ರಾಜ್ಯದ ಪ್ರವಾಹ ಸ್ಥಿತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ.ವಿಜಯ್ ಭಾಸ್ಕರ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿವರಿಸಿದರು.‌ 19 ಎನ್.ಡಿ.ಆರ್.ಎಫ್. ತಂಡಗಳನ್ನು ನಿಯೋಜಿಸಲಾಗಿದ್ದು, ಕೊಡುಗು ಜಿಲ್ಲೆಯಲ್ಲಿ ಇನ್ನೂ ಎರಡು ಹೆಲಿಕಾಪ್ಟರ್ ಅಗತ್ಯವಿದೆ ಎಂದು ತಿಳಿಸಿದರು.

ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಎರಡು ದಿನಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಿದೆ ಎಂದು ತಿಳಿಸಿದರು. ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ತಿಳಿಸಿದರು.

ಛಾಯಾ ಚಿತ್ರಗಳ ವೀಕ್ಷಣೆ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಿರುವ ಅನಾಹುತಗಳ ಛಾಯಾಚಿತ್ರ ಪ್ರದರ್ಶನವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ವೀಕ್ಷಿಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು, ಜಿಲ್ಲೆಯಲ್ಲಿ ಆಗಿರುವ ಹಾನಿಯ ಕುರಿತು ಮಾಹಿತಿಯನ್ನು ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಉಮೇಶ್ ಕತ್ತಿ, ಅಭಯ್ ಪಾಟೀಲ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾದೇಪ್ಪ ಯಾದವಾಡ, ರಾಜ್ಯಸಭಾ ಸದಸ್ ಡಾ.ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಿ. ಚಿದಂಬರಂ ಐದು ದಿನಗಳ ವಶಕ್ಕೆ ಸಿಬಿಐ ಮನವಿ

Published

on

ಸುದ್ದಿದಿನ,ದೆಹಲಿ: ನಿನ್ನೆ ಐಎನ್ಎಕ್ಸ್ ಹಗಣದ ಆರೋಪದಲ್ಲಿ ಬಂಧಿಸಲಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಇಂದು ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದರು. ಚಿದಂಬರಂ ಅವರನ್ನು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಬಿಐ ಮನವಿ ಮಾಡಿತು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಿಬಿಐ ಪರ ವಾದ ಮಂಡಿಸಿ, ಪಿ. ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿಲ್ಲ. ಯಾವುದೇ ತನಿಖೆಗೂ ಏನನ್ನೂ ಪ್ರತಿಕ್ರಿಯಿಸುತ್ತಿಲ್ಲ. ಮೌನ ಅವರ ಸಾಂವಿಧಾನಿಕ ಹಕ್ಕು, ಆದರೆ, ಯಾವುದಕ್ಕೂ ಪ್ರತಿಕ್ರಿಯಿಸುತ್ತಿಲ್ಲ ಎಂದರು.

ಇತರ ಆರೋಪಿಗಳೊಂದಿಗೆ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸುವ ಅಗತ್ಯವಿರುವುದರಿಂದ ಅವರನ್ನು ಸಿಬಿಐ ವಶಕ್ಕೆ ನೀಡುವಂತೆ ಮೆಹ್ತಾ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.‌ ಇಂದಿನ ವಿಚಾರಣೆ ಹಿನ್ನೆಲೆಯಲ್ಲಿ ದೆಹಲಿಯ ಸಿಬಿಐ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

Continue Reading

ದಿನದ ಸುದ್ದಿ

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸಿಬಿಐ ವಶಕ್ಕೆ…!

Published

on

ಸುದ್ದಿದಿನ ಡೆಸ್ಕ್ : ಐಎನ್‌ಎಕ್ಸ್‌ ಮೀಡಿಯಾ ಹೌಸ್‌ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ನಿನ್ನೆ ರಾತ್ರಿ ಸಿನಿಮೀಯ ರೀತಿಯಲ್ಲಿ ಅರೆಸ್ಟ್ ಆಗಿದ್ದಾರೆ.

ಚಿದಂಬರಂರನ್ನು ಹೊಸದಿಲ್ಲಿಯ ಜೋರ್‌ಭಾಗ್‌ನಲ್ಲಿ ಸಿಬಿಐ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಕರೆದೊಯ್ಯಲಾಗಿದೆ. ನಿನ್ನೆ ಇಡೀ ರಾತ್ರಿ ಚಿದಂಬರಂ ಇಲ್ಲಿಯೇ ಕಳೆಯಬೇಕಾಗಿದೆ. ಇನ್ನು
ವಿಪರ್ಯಾಸ ಎಂದರೆ ಇದೇ ಮುಖ್ಯ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ್ದೇ ಚಿದಂಬರಂ. 2011ರಲ್ಲಿ ಈ ಕಚೇರಿಯನ್ನು ಚಿದಂಬರಂ ಉದ್ಘಾಟಿಸಿದ್ದರು. ಈಗ ಅದೇ ಕಟ್ಟಡದಲ್ಲಿ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

2010ರಲ್ಲಿ ಚಿದಂಬರಂ ಗೃಹ ಸಚಿವರಾಗಿದ್ದಾಗ ಸೊಹ್ರಾಬುದ್ದೀನ್‌ ಶೇಖ್‌ ನಕಲಿ ಎನ್‌ಕೌಂಟರ್‌ ಪ್ರಕರಣ ಸಂಬಂಧ ಅಮಿತ್‌ ಶಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಈಗ 2019ರಲ್ಲಿ ಚಿದಂಬರಂ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದಾರೆ. ಕೇಂದ್ರ ಗೃಹ ಸಚಿವರಾಗಿರುವವರು ಅಮಿತ್‌ ಶಾ.

Continue Reading

ದಿನದ ಸುದ್ದಿ

ದಾವಣಗೆರೆ | ನೂತನ ಜಿಲ್ಲಾಧಿಕಾರಿಗಳಾಗಿ ‘ಮಹಾಂತೇಶ್ ಜಿ. ಬೀಳಗಿ’ ಅಧಿಕಾರ ಸ್ವೀಕಾರ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಮಹಾಂತೇಶ್ ಜಿ. ಬೀಳಗಿ ಇವರು ಇಂದು ಅಧಿಕಾರ ವಹಿಸಿಕೊಂಡರು. ಇಂದು ಬೆಳಿಗ್ಗೆ ಕಚೇರಿಗೆ ಆಗಮಿಸಿದ ಅವರನ್ನು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಅವರು ಪುಷ್ಪ ಗುಚ್ಚ ನೀಡಿ ಸ್ವಾಗತಿಸಿದರು. ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಶ್ರೀಯುತರು ಬೀದರ್ ಜಿ.ಪಂ ನ ಕಾರ್ಯನಿರ್ವಾಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

Continue Reading

Trending