Connect with us

ದಿನದ ಸುದ್ದಿ

ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ನಿಂದ ವಲಸೆ ಬಂದವರನ್ನು ಸಿ ಎ ಎ ಯಿಂದ ಹೊರಗಿಡಲು ಕಾರಣವೇನು? : ಸಿದ್ದರಾಮಯ್ಯ ಪ್ರಶ್ನೆ

Published

on

ಸುದ್ದಿದಿನ, ಬೆಂಗಳೂರು : ಸಿಎಎ ಇಂದ ದೇಶದ ಯಾವೊಬ್ಬ ಪ್ರಜೆಗೂ ತೊಂದರೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಇವು ಒಂದಕ್ಕೊಂದು ಸಂಬಂಧ ಹೊಂದಿವೆ. ಇವು ಒಂದು ಸಮುದಾಯದ ಜನರನ್ನು ಮಾತ್ರ ಗುರಿಯಾಗಿರಿಸಿಕೊಂಡು ಜಾರಿಗೆ ತರಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲವಾದರು.

ಗುರುವಾರ ಕೆಪಿಸಿಸಿ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರದೇಶಗಳಲ್ಲಿ ದೌರ್ಜನ್ಯಕ್ಕೊಳಗಾದ ಜನರಿಗೆ ಭಾರತದ ಪೌರತ್ವ ಕೊಡುವುದಕ್ಕಾಗಲೀ, ಇಲ್ಲಿನ ಅಕ್ರಮ ವಲಸಿಗರಿಗೆ ಪೌರತ್ವ ನೀಡಿ ಅವರನ್ನು ಈ ದೇಶದ ಪ್ರಜೆಗಳಾಗಿಸುವುದಕ್ಕಾಗಲೀ‌ ನಮ್ಮ ವಿರೋಧವಿಲ್ಲ.

ಹೀಗೆ ಪೌರತ್ವ ನೀಡುವುದರಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ನಿಯಮ ಜಾರಿಗೊಳಿಸಲು ಹೊರಟಿರುವುದಕ್ಕಷ್ಟೇ ನಮ್ಮ ವಿರೋಧ. 2014 ಡಿಸೆಂಬರ್ 31ರ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಬಂದ ಮುಸ್ಲಿಂ ಹೊರತಾದ ಧರ್ಮಗಳ ಜನರಿಗೆ ಪೌರತ್ವ ನೀಡುವುದೇನೋ‌ ಸರಿ, ಆದರೆ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ಈ ದೇಶಗಳಿಂದ ಭಾರತಕ್ಕೆ ವಲಸೆ ಬಂದವರನ್ನು ಈ ಕಾಯ್ದೆಯಿಂದ ಹೊರಗಿಡಲು ಕಾರಣವೇನು? ಎಂದು ಪ್ರಶ್ನಿಸಿದರು.

ಸಂವಿಧಾನ ರಚನಾ ಸಮಿತಿಯ 289 ಜನ ಸದಸ್ಯರಲ್ಲಿ ಆರ್‌ಎಸ್‌ಎಸ್ ಸಂಘಪರಿವಾರದವರು ಇದ್ದರು. ಮನುಸ್ಮೃತಿ ಆಧಾರದ ಮೇಲೆ ಸಂವಿಧಾನ ರಚನೆಯಾಗಬೇಕೆಂಬುದು ಅವರ ಆಲೋಚನೆಯಾಗಿತ್ತು, ಅಂದು ಈ ಆಲೋಚನೆಗೆ ಅವಕಾಶ ಸಿಗಲಿಲ್ಲ ಹಾಗಾಗಿ ಇಂದು ಅದನ್ನು ಕಾಯ್ದೆ ರೂಪದಲ್ಲಿ ಜಾರಿಮಾಡಲು ಹೊರಟಿದ್ದಾರೆ.

ಒಂದು ಕಾಯ್ದೆ ಸಂಸತ್ತಿನ ಬಹುಮತ ಗಳಿಸಿ ಕಾನೂನಾಗಿ ಜಾರಿಗೆ ಬರಲು ಸಿದ್ಧವಾದರೂ, ಆ ಕಾನೂನು ನ್ಯಾಯಸಮ್ಮತವಲ್ಲ ಎಂದೆನಿದರೆ ಜೈಲಿಗೆ ಹೋದರೂ ಪರವಾಗಿಲ್ಲ ಅದಕ್ಕೆ ಅಸಹಕಾರ ತೋರಿ ಎಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು.

ರವೀಂದ್ರನಾಥ್ ಠಾಗೋರ್ ಅವರು ಭಾರತ ಸರ್ವಧರ್ಮ ಸಹಿಷ್ಣು ದೇಶವಾಗಬೇಕು, ಮುಕ್ತವಾದ ಶಿಕ್ಷಣ ಮತ್ತು ಅಭಿವ್ಯಕ್ತಿಗೆ ಅವಕಾಶಗಳಿರಬೇಕು, ಇಲ್ಲಿನ ಪ್ರತಿ ಪ್ರಜೆ ಧೈರ್ಯದಿಂದ, ಸ್ವಾಭಿಮಾನದ ಬದುಕು ಬಾಳಬೇಕು ಎಂದು ಹೇಳಿದ್ದರು, ಆದರೆ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಹುನ್ನಾರದೊಂದಿಗೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಕಿಡಿಕಾರಿದರು.

ಕಾಯ್ದೆಯ ವಿರುದ್ಧ ದೇಶವ್ಯಾಪಿ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಅವರಲ್ಲಿ ಬರೀ ಮುಸ್ಲಿಂರಷ್ಟೇ ಅಲ್ಲ, ವಿದ್ಯಾರ್ಥಿಗಳು, ಕಾರ್ಮಿಕರು, ಪ್ರಗತಿಪರರು, ಮಹಿಳೆಯರು ಹೀಗೆ ಎಲ್ಲ ವರ್ಗದ ಜನರು ಇದ್ದಾರೆ. ಕಾಯ್ದೆ ಜಾರಿಯಿಂದ ಮುಸ್ಲಿಂಮರಿಗೆ ಮಾತ್ರವಲ್ಲ, ಆದಿವಾಸಿಗಳು, ಬುಡಕಟ್ಟು ಜನಾಂಗದವರಿಗೂ ತೊಂದರೆ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.

ಮನುಸ್ಮೃತಿಯನ್ನು ಬೆಂಬಲಿಸುತ್ತಾ,ದಲಿತರು, ಹಿಂದುಳಿದವರನ್ನು ಅಸ್ಪೃಶ್ಯರನ್ನಾಗಿ ಮಾಡಿ, ಸಮಾಜದಿಂದ ದೂರ ಇಟ್ಟು, ನಮ್ಮದು ಅಖಂಡ ಹಿಂದುತ್ವ, ‘ಸರ್ವೇ ಜನಾಃ ಸುಖಿನೋ ಭವಂತು’ ಅಂದುಬಿಟ್ರೆ ಅದನ್ನು ನಂಬುವಷ್ಟು ಜನ ಮೂರ್ಖರಲ್ಲ. ಸರ್ಕಾರ ಮೊದಲು ಈಗಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲಿ, ಮತ್ತೆ ಉಳಿದದ್ದು ನೋಡೋಣ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending