Connect with us

ದಿನದ ಸುದ್ದಿ

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Published

on

ಸುದ್ದಿದಿನ ಡೆಸ್ಕ್ : ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮ ಹತ್ಯೆ ಮಾಡಿಕೊಂಡಿರು ಘಟನೆ ಬೆಳಕಿಗೆ ಬಂದಿದೆ.

ಗಂಡ ಶೇಷ ಶಯನ, ಹೆಂಡತಿ ಉಷಾ ,ಮತ್ತು ತಾಯಿ ಸುಧಾ ಎಂಬುವವರು ಕೌಟುಂಬಿಕ ಸಮಸ್ಯೆ ಹಿನ್ನಲೆ ವಿಷ ಸೇವಿಸಿ ತಮ್ಮ ಮುತ್ಯಾಲನಗರದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರ ಶವವನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಚಿತ್ರದುರ್ಗ : ‘ಭೂಮಿಯ ಹಕ್ಕು ಪತ್ರ’ಕ್ಕಾಗಿ ಇಂದಿನಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

Published

on

ಸುದ್ದಿದಿನ ಡೆಸ್ಕ್ : ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಭೂಹೀನ ದಲಿತರು, ಬುಡಕಟ್ಟು ಜನರು, ಹಿಂದುಳಿದಿರುವ, ಆರ್ಥಿಕವಾಗಿ ದುರ್ಬಲ ಸಮುದಾಯಗಳು ತಾವು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕುಪತ್ರಕ್ಕಾಗಿ ನಾಲ್ಕು ದಶಕದಿಂದಲೂ ಹೋರಾಡುತ್ತಿದ್ದಾರೆ.

ರಾಜಕಾರಣಿಗಳಿಂದ ಚುನಾವಣೆಯ ಸಂದರ್ಭದಲ್ಲಿ ಜನರಿಗೆ ಭರವಸೆ ಮಾತುಗಳು ಬಿಟ್ಟರೆ ಬೇರೆ ಏನೂ ಸಿಕ್ಕಿಲ್ಲ. ಬಡವರಿಗೆ ಈ ಜಿಲ್ಲೆಯಲ್ಲಿ ಭೂಮಿ ಮರಿಚಿಕೆಯಾಗಿಯೇ ಉಳಿದಿದೆ. ದುರಂಕಾರದಿಂದ ಮೆರೆಯುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ನಿರ್ಲಕ್ಷ್ಯ ದ ಕಂದಾಯ ಅಧಿಕಾರಿಗಳು ಇವರ ನಡುವೆ ಸಿಲುಕಿರುವ ಜನರ ಬದುಕುಗಳು ತತ್ತರಿಸಿ ಹೋಗುತ್ತಿವೆ.

ಭೂಮಿಗಾಗಿ ಜೀವನವನ್ನೇ ಸವೆಸುತ್ತಿದ್ದರೂ ಇದನ್ನು ಕಂಡೂ ಕಾಣದಂತೆ ಇರುವ ರಾಜಕಾರಣಿಗಳ ಹೃದಯ ಅದೆಷ್ಟು ಕಟುಕತನದ್ದೆಂದು ಅರ್ಥವಾಗುತ್ತಿದೆ. ಜನರು ಹೋರಾಟ, ಜೈಲುಪಾಲು, ಅಧಿಕಾರಿಗಳೊಂದಿಗೆ ಜಗಳದಲ್ಲೇ ಬದುಕಿಗಾಗಿನ ಭೂಮಿಯು ನಮ್ಮ ಈ ತಲೆಮಾರಿಗೆ ದೊರಕೀತೆ? ಎಂದು ಯೋಚಿಸುತ್ತಲೇ ಇದ್ದಾರೆ. ನಿರಂತರವಾಗಿ ನೂರಾರು ಹೋರಾಟ, ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಅದರೂ ಜನರ‌ ಭೂಮಿಯ ಕನಸಿಗೆ ತಣ್ಣೀರೆರಚುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ.

ಬೇಡಿಕೆಗಳು

  1. ಸರ್ಕಾರದ‌ ವಿವಿಧ ಹೆಸರಿನಲ್ಲಿರು ಭೂಮಿಯಲ್ಲಿ
    ಸಾಗುವಳಿ ಮಾಡುತ್ತಿದ್ದು ಫಾರಂ.ನಂ. 50,53ರಲ್ಲಿ ಅರ್ಜಿ ಸಲ್ಲಿರುವ ಭೂಹೀನರಿಗೆ ಹಕ್ಕುಪತ್ರ ಕೊಡಬೇಕು,
  2. ಅರಣ್ಯ ಹಕ್ಕುಕಾಯ್ದೆಯನ್ವಯ ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಕ್ಕುಪತ್ರ ನೀಡಬೇಕು.
  3. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದು ಅರ್ಜಿ ಸಲ್ಲಿಸದೇ ಇರುವವರಿಗೆ ಅರಣ್ಯ ಹಕ್ಕು ಕಾಯ್ದೆ ಅನ್ವಯ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು.
  4. 94ಸಿ, 94ಸಿಸಿ. ಅರ್ಜಿಸಲ್ಲಿಸಿದ ಎಲ್ಲರಿಗೂ ಜಾಗದ ಹಕ್ಕುಪತ್ರ ವಿತರಿಸಬೇಕು.
  5. ಕಂದಾಯ-ಅರಣ್ಯ ಭೂಮಿಯ ಜಂಟಿ‌ಸರ್ವೆ ನಡೆಸಿ ಗೊಂದಲವನ್ನು ನಿವಾರಿಸಬೇಕು.
  6. ಬಲಾಡ್ಯರ ವಶದಲ್ಲಿರುವ ಸರ್ಕಾರಿ ಗೋಮಾಳ ಇನ್ನಿತರೆ ಭೂಮಿಯನ್ನು ವಶಪಡಿಸಿಕೊಂಡು ಭೂಹೀನರಿಗೆ ಹಂಚಿಕೆ ಮಾಡಬೇಕು.
  7. ಜಿಲ್ಲೆಯ ಭೂಮಿ-ವಸತಿ ಸಮಸ್ಯೆಗಳನ್ನು ಕಾಲಕಾಲಕ್ಕೆ ಬಗೆ ಹರಿಸಲು ಜಿಲ್ಲಾಧಿಕಾರಿಗಳ ಅದ್ಯಕ್ಷತೆಯಲ್ಲಿ ಹೋರಾದ ಪ್ರತಿನಿಧಿಗಳನ್ನೊಳಗೊಂಡ ಜಿಲ್ಲಾ ಸಮಿತಿಯನ್ನು ರಚಿಸಬೇಕು.

ಈ ಮೇಲಿನ ಬೇಡಿಕೆಗಳನ್ನು ಇಟ್ಟುಕೊಂಡು ಸೋಮವಾರದಿಂದ (ಇಂದಿನಿಂದ) ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಆರಂಭಿಸಲಾಗುತ್ತಿದೆ. ಬಡವರ ನ್ಯಾಯಯುತವಾದ ಈ ಹೋರಾಟಕ್ಕೆ ನಾಡಿನ ಎಲ್ಲಾ ಪ್ರಜ್ಞಾವಂತರು ಸಹಕರಿಸಿ ಹೋರಾಟದ ಬೆಂಬಲಕ್ಕೆ ನಿಲ್ಲಬೇಕೆಂದು ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಮನವಿ ಮಾಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಿವಮೊಗ್ಗ : ‘ಭಾವ ಸಂಗಮ’ ರಾಜ್ಯಮಟ್ಟದ ಸಾಂಸ್ಕೃತಿಕ ಸಮಾಗಮ

Published

on

ಸುದ್ದಿದಿನ,ಶಿವಮೊಗ್ಗ : ಇಲ್ಲಿನ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಸಂಘದ ಸಭಾಂಗಣದಲ್ಲಿ‌ ಆಗಸ್ಟ್ 18 ರಂದು ಬೆಳಗ್ಗೆ 9.30 ರಿಂದ ಸಂಜೆ 5 ರವರೆಗೆ ರಾಜ್ಯಮಟ್ಟದ ಭಾವ ಸಂಗಮ ಸಾಂಸ್ಕೃತಿಕ ಸಮಾಗಮ ನಡೆಯಲಿದೆ ಎಂದು ಕಾರ್ಯಕ್ರಮ‌ ಸಂಯೋಜಕರಾದ ಹರೀಶ್ ಬೇದ್ರೆ , ಶೀಲಾ ಸುರೇಶ್ ಮತ್ತು ವಿಜಯಾ ಆರ್ ಬಾಯರಿ ತಿಳಿಸಿದ್ದಾರೆ.

ಭಾವ ಸಂಗಮ‌ ಸಮಾಗಮದಲ್ಲಿ ಕವಿಗೋಷ್ಠಿ, ಹಾಸ್ಯರಸಗವಳ, ಕವನ ರಚನಾ ಸ್ಪರ್ಧೆ,‌ಸಾಧಕರಿಗೆ ಸನ್ಮಾನ, ವ್ಯಂಗ್ಯ‌ಚಿತ್ರಗಳ ಪ್ರದರ್ಶನ, ಪುಸ್ತಕ ಪ್ರದರ್ಶನ ಮತ್ತು ಮಾರಾಟ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

ಸಮಾಗಮ ಮತ್ತು ಕವಿಗೋಷ್ಠಿಯಲ್ಲಿ ಹಾಗೂ ಇತರೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಯಸುವವರು ಇದೇ ಜೂನ್ 30 ರೊಳಗೆ ತಮ್ಮ ಹೆಸರು ಮತ್ತಿತರ ಮಾಹಿತಿಯೊಂದಿಗೆ ವಾಟ್ಸಾಪ್‌‌ ನಂಬರ್ 9591323453 ಗೆ ಮೆಸೇಜ್‌ ಕಳುಹಿಸಿ ಹೆಸರು ನೋಂದಾಯಿಸಲು ಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿ.ಆರ್‌. ಜೋಯಪ್ಪ ಅವರ ‘ಕಾಟಿಬೆಟ್ಟದ ಕಥೆಗಳು’ ಪುಸ್ತಕ ಲೋಕಾರ್ಪಣೆ

Published

on

ಸುದ್ದಿದಿನ, ಮಡಿಕೇರಿ : ಕೊಡಗು ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ಬಿ.ಆರ್.ಜೋಯಪ್ಪ ಅವರು ಬರೆದ ‘ಕಾಟಿಬೆಟ್ಟದ ಕಥೆಗಳು’ ಪುಸ್ತಕ ಲೋಕಾರ್ಪಣೆ ಸಮಾರಂಭವು ಶನಿವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.

ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ರಂಗಕರ್ಮಿ ಶಿವಮೊಗ್ಗದ ಕವಿ ಕಾವ್ಯ ಟ್ರಸ್ಟ್‍ನ ಪ್ರಸನ್ನ ಅವರು ಸಣ್ಣ ಊರಿನಲ್ಲಿದ್ದು, ಸಣ್ಣ ಸಣ್ಣ ವಿಚಾರಗಳನ್ನು ಅದ್ಭುತ ಸಾಹಿತ್ಯ ರೂಪದಲ್ಲಿ ಪುಸ್ತಕದಲ್ಲಿ ಅನಾವರಣ ಮಾಡಿದ್ದಾರೆ ಎಂದರು. ಬಿ.ಆರ್.ಜೋಯಪ್ಪ ಅವರ ಬಾಲ್ಯದಲ್ಲಿ ಕಂಡಂತಹ ಅನುಭವವು ಕಥೆ ರೂಪದಲ್ಲಿ ಮೂಡಿ ಬಂದಿರುವುದು ಸಂತಸದ ವಿಷಯವಾಗಿದೆ ಎಂದರು.

ಮನುಷ್ಯನ ಜೀವನದಲ್ಲಿ ಪ್ರಕೃತಿ ಮತ್ತು ಪುರುಷ ಸಂಬಂಧದ ಬಾಂಧವ್ಯವನ್ನು ಈ ಪುಸ್ತಕವು ತೋರಿಸಿಕೊಡುತ್ತದೆ. ಸಭ್ಯತೆಯ ಬಾಲ್ಯ ಕಾಲದಲ್ಲಿ ಪ್ರಕೃತಿ ಮತ್ತು ಮನುಷ್ಯನ ಒಡನಾಟ ಮತ್ತು ಮನುಷ್ಯ ಬೆಳೆದಂತೆ ಪ್ರಕೃತಿಯ ಮೇಲೆ ಅತಿಕ್ರಮಣವಾಗುತ್ತ ಪ್ರಕೃತಿಯನ್ನು ವಿಕಾರಗೊಳಿಸುವ ಘಟನೆಗಳು ಈ ಪುಸ್ತಕದಲ್ಲಿ ಮೂಡಿಬಂದಿದೆ ಎಂದು ಅವರು ನುಡಿದರು.

ಶಿಕ್ಷಣ ಬೌದ್ಧಿಕ ಜ್ಞಾನವೂ ಹೌದು ಹಾಗೂ ಹೃದಯದ ಅನುಭವವು ಹೌದು. ಇಂದಿನ ವಿದ್ಯಾರ್ಥಿಗಳು ಅವಸರದ ಬದುಕಿನಿಂದ ಹೊರಬಂದು ತಮ್ಮ ಪರಿಸರವನ್ನು ಗಮನಿಸಿ ನೆರೆ ಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿ ನಮ್ಮ ಭಾಷೆ, ನಮ್ಮ ಪರಿಸರದ ಬಗ್ಗೆ ಕೆಲಸ ಮಾಡಬೇಕು. ಬೇಕಾದದ್ದನ್ನು ಇಟ್ಟುಕೊಂಡು ಬೇಡವಾದದನ್ನು ಬಿಟ್ಟು ಸಮೃದ್ಧ ನಾಡನ್ನು ಕಟ್ಟುವಂತಹ ಕೆಲಸಗಳು ಮುಂದುವರೆಯಬೇಕು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಹೆಸರಾಂತ ಕಥೆಗಾರರು ಹಾಗೂ ಮೈಸೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾದ ಅಬ್ದುಲ್ ರಶೀದ್ ಅವರು ಮಾತನಾಡಿ ಕಾಟಿಬೆಟ್ಟದ ಕಥೆಗಳು ಪುಸ್ತಕದಲ್ಲಿ ಬಿ.ಆರ್.ಜೋಯಪ್ಪ ಅವರು ತಮ್ಮ ಬಾಲ್ಯದ ತಮ್ಮ ಮನೆಯ ಪರಿಸರದ ಸುತ್ತಮುತ್ತಲಿನ ಆಗು ಹೋಗುಗಳು ಕಥೆಯ ರೂಪದಲ್ಲಿ ಅನಾವರಣಗೊಳಿಸಿದ್ದಾರೆ. ಕೊಡಗಿನ ಜೀವನ ಶೈಲಿ, ತಮ್ಮ ಸುತ್ತಮುತ್ತಲಿನ ಅನುಭವ, ಜೀವನ ಶಿಕ್ಷಣವನ್ನು ಕೃತಿಯಲ್ಲಿ ತೋರಿಸಿಕೊಟ್ಟಿದ್ದಾರೆ.

ವಿದ್ಯಾರ್ಥಿ ದಿನದಲ್ಲಿ ಸಾಹಿತ್ಯದ ಪ್ರಭಾವದಿಂದ ತಮಗಾದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತ ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿ ಇರುವ ಸಾಹಿತ್ಯದ ಅಭಿರುಚಿಯನ್ನು ವೃದ್ಧಿಪಡಿಸಿಕೊಂಡು ತಂತ್ರಜ್ಞಾನವನ್ನು ತಮ್ಮ ಬೆಳವಣಿಗೆಗೆ ಉಪಯುಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಪ್ರಯತ್ನಶೀಲ ಬದುಕಿನಲ್ಲಿ ಯಶಸ್ಸಿನ ಗುಟ್ಟು ಅಡಗಿದೆ ಎಂಬುದನ್ನು ಕಾಟಿಬೆಟ್ಟದ ಕಥೆಗಳು ಪುಸ್ತಕದಲ್ಲಿ ಅಡಕವಾಗಿದೆ. ಬಿ.ಆರ್.ಜೋಯಪ್ಪ ಅವರು ಶಿಕ್ಷಕರಾಗಿ, ಲೇಖಕರಾಗಿ, ಅವರ ಪರಿಶ್ರಮದ ಅನಾವರಣ, ಗ್ರಾಮೀಣ ಪರಿಸರ, ಬಡತನದ ಅನಾವರಣ, ನಾಟಿ ಔಷಧಿಯ ಮಹತ್ವ, ಅವರ ಕಾಲಘಟ್ಟದ ಬದುಕಿನ ಚಿತ್ರಣವನ್ನು ಸೊಗಸಾಗಿ ಈ ಪುಸ್ತಕದಲ್ಲಿ ಅನಾವರಣಗೊಳಿಸಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಕಥೆಗಳ ಲೇಖಕರಾದ ಬಿ.ಆರ್.ಜೋಯಪ್ಪ ಅವರುಕಾಟಿಬೆಟ್ಟದ ಈ ಪುಸ್ತಕ ರಚಿಸಲು ತಮಗೆ ಪ್ರೇರಣೆ ನೀಡಿದ ಮಹನೀಯರಿಗೆ ಕೃತಜ್ಞತೆ ಸಲ್ಲಿಸುತ್ತಾ ಕಥೆ ಬರೆಯುವ ಸಂದರ್ಭವನ್ನು ಹಂಚಿಕೊಳ್ಳುತ್ತಾ ತಮ್ಮ ಕುಟುಂಬ ಸದಸ್ಯರ ಸಹಕಾರ ಈ ಮುಂಚೆ ತಾವು ಬರೆದ ಪುಸ್ತಕಗಳ ಮಾಹಿತಿಗಳನ್ನು ನೀಡಿ ಪುಸ್ತಕವು ಉತ್ತಮ ರೀತಿಯಲ್ಲಿ ಮೂಡಿಬರಲು ಸಹಕಾರ ನೀಡಿದ ಎಲ್ಲಾ ಮಾರ್ಗದರ್ಶಕರಿಗೆ ವಿಮರ್ಶಕರಿಗೆ ಧನ್ಯವಾದ ತಿಳಿಸಿದರು.

ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಶಾಲಾ ಕಾಲೇಜುಗಳಲ್ಲಿ ಸಾಹಿತ್ಯದ ಬೆಳವಣಿಗೆ ಆಗಬೇಕೆಂಬ ಉದ್ದೇಶದಿಂದ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ, ಚಿಂತನ-ಚಿತ್ತಾರ ಪ್ರಕಾಶನದ ಡಿ.ನಿಂಗರಾಜು ಚಿತ್ತಣ್ಣನವರ್, ಲೇಖಕರ ಕುಟುಂಬಸ್ಥರು ಇತರರು ಇದ್ದರು. ಕೊಡಗು ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಪರ್ಡ್ ಕ್ರಾಸ್ತಾ ನಿರೂಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Trending