Connect with us

ದಿನದ ಸುದ್ದಿ

ದಾವಣಗೆರೆ | ವಿಶ್ವ ತಂಬಾಕುರಹಿತ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆ

Published

on

ಸುದ್ದಿದಿನ,ದಾವಣಗೆರೆ: ಪ್ರತಿ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಯೋಜಿಸಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲಾಗುತ್ತದೆ.

ಈ ವರ್ಷ ಕೋವಿಡ್-19 ಇರುವ ಕಾರಣದಿಂದಾಗಿ ಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಈ ಬಾರಿ ರಾಜ್ಯ ತಂಬಾಕು ಘಟಕದ ವತಿಯಿಂದ ಈ ವರ್ಷದ ಧ್ಯೇಯವಾಕ್ಯವಾದ ‘ಯುವ ಪೀಳೀಗೆಯನ್ನು ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು ಮತ್ತು ನಿಕೋಟಿನ್ ಬಳಕೆಯಿಂದ ರಕ್ಷಣೆ ಮಾಡುವುದು’ (protecting youth from industry manipulation and preventing them from Tobacco & Nicotine use )ಈ ವಿಷಯ ಕುರಿತು 20 ವರ್ಷದೊಳಗಿನ ಮಕ್ಕಳಿಗೆ ಕನ್ನಡ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಈ ವಿಷಯವನ್ನು ಉತ್ತಮವಾಗಿ ಹಾಗೂ ಅಂದವಾಗಿ ಬರೆದಂತಹ ಮಕ್ಕಳಿಗೆ ಪ್ರಥಮ ಬಹುಮಾನವಾಗಿ ರೂ.3000, ದ್ವಿತೀಯ ಬಹುಮಾನವಾಗಿ ರೂ. 2000 ಹಾಗೂ ತೃತೀಯ ಬಹುಮಾನವಾಗಿ ರೂ. 1000 ಮೊತ್ತವನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ನಗದು ರೂಪದಲ್ಲಿ ವಿತರಿಸಲಾಗುವುದು. ಪ್ರಬಂಧವು 4 ಪುಟ ಮೀರದಂತಿರಬೇಕು.

ಪ್ರಬಂಧ ಬರೆದು ಕಳುಹಿಸಲು ಜೂ. 5 ಕೊನೆಯ ದಿನಾಂಕವಾಗಿದ್ದು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣ, ದಾವಣಗೆರೆ -577004. ಇ-ಮೇಲ್ ವಿಳಾಸ ntcpdavangere@gmail.com ವಾಟ್ಸ್‍ಪ್ ನಂ.9986618696 ಈ ವಿಳಾಸಕ್ಕೆ ಪ್ರಬಂಧವನ್ನು ಕಳುಹಿಸಬೇಕು.

ಅಭ್ಯರ್ಥಿಗಳು ಪ್ರಬಂಧದ ಮೇಲ್ಭಾಗದಲ್ಲಿ ಹೆಸರು, ವಯಸ್ಸು, ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಮತ್ತು ಕಲ್ಯಾಣ ಅಧಿಕಾರಿ ಡಾ.ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಲೋಕಸಭಾ ಚುನಾವಣೆ | ಮತದಾನ ದಿನ ಕರ್ತವ್ಯ ನಿರತ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ

Published

on

ಸುದ್ದಿದಿನ,ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ 7 ರಂದು ಮತದಾನ ದಿನದಂದು ಕರ್ತವ್ಯ ನಿರತ ಮತದಾರರಿಗೆ ಮೇ 4 ರಿಂದ 6 ರ ವರೆಗೆ ಸ್ಮಾರ್ಟ್ ಸಿಟಿ ಬಿಲ್ಡಿಂಗ್‍ನಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತ ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಸ ಕಟ್ಟಡಕ್ಕೆ ಸ್ಥಳಾಂತರ

Published

on

ಸುದ್ದಿದಿನ,ದಾವಣಗೆರೆ : ಹೈಸ್ಕೂಲ್ ಮೈದಾನದಲ್ಲಿ ಮೇ 4 ರಂದು ಚುನಾವಣಾ ರ್ಯಾಲಿಯಲ್ಲಿ ಎಐಸಿಸಿ, ಕಾರ್ಯದರ್ಶಿಯವರಾದ ಪ್ರಿಯಾಂಕ ಗಾಂಧಿ ವಾದ್ರ, ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹೈಸ್ಕೂಲ್ ಮೈದಾನದಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಒಂದು ದಿನ ಮಾತ್ರ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಕರಾದ ಶ್ರೀನಿವಾಸ್‍ಮೂರ್ತಿ ಸಿ.ಇ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆ | ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ; ಸಕಲ ಸಿದ್ಧತೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ತೋಳಹುಣಸೆಯಲ್ಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ನಡೆಯಲಿದ್ದು ಇವಿಎಂ ಭದ್ರತಾ ಕೊಠಡಿ ಮತ್ತು ಎಣಿಕೆ ಕೇಂದ್ರದ ಸಿದ್ದತೆಯನ್ನು ಏಪ್ರಿಲ್ 29 ರಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಪರಿಶೀಲಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಹರಪನಹಳ್ಳಿ ಸೇರಿದಂತೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಬರಲಿದೆ. ಎಲ್ಲಾ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಶಿವಗಂಗೋತ್ರಿಯಲ್ಲಿ ನಡೆಯಲಿದೆ. ಇಲ್ಲಿನ ಕಾಮರ್ಸ್ ಬ್ಲಾಕ್ ನೆಲಮಹಡಿಯಲ್ಲಿ 4 ಕ್ಷೇತ್ರ ಮತ್ತು ರಾಜ್ಯಶಾಸ್ತ್ರ ಬ್ಲಾಕ್‍ನ ಮೊದಲ ಮಹಡಿಯಲ್ಲಿ 4 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಮೇ 7 ರಂದು ಮತದಾನ ನಡೆಯುವುದರಿಂದ ಮತದಾನ ನಂತರ ಇವಿಎಂಗಳನ್ನು ಡಿಮಸ್ಟರಿಂಗ್ ಕೇಂದ್ರದಿಂದ ಭದ್ರತೆಯೊಂದಿಗೆ ಎಣಿಕೆ ಕೇಂದ್ರಕ್ಕೆ ತಂದು ಭದ್ರತಾ ಕೊಠಡಿಯಲ್ಲಿ ಮತಪೆಟ್ಟಿಗೆಯನ್ನು ಕಾಯ್ದಿರಿಸಲಾಗುತ್ತದೆ. ಮೇ 8 ರಿಂದ ಎಣಿಕೆ ನಡೆಯುವವರೆಗೆ ಅರೆ ಸೇನಾಪಡೆಯ ಭದ್ರತೆಯೊಂದಿಗೆ ಜೂನ್ 4 ರಂದು ನಡೆಯುವ ಎಣಿಕೆವರೆಗೆ ಸಂಪೂರ್ಣ ಸರ್ಪಗಾವಲಿನ ಭದ್ರತಾ ವ್ಯವಸ್ಥೆ ಮಾಡಲಾಗಿರುತ್ತದೆ. ಮತದಾನದ ನಂತರ ಇವಿಎಂ ಭದ್ರತಾ ಕೊಠಡಿಯಲ್ಲಿ ಸಂಗ್ರಹಿಸುವುದರಿಂದ ಎಣಿಕೆ ಸಿದ್ದತೆಯನ್ನು ಈಗಲೇ ಮಾಡಿಕೊಳ್ಳಬೇಕಾಗಿದ್ದು ಸಿದ್ದತೆಯನ್ನು ಪರಿಶೀಲಿಸಲಾಯಿತು.

ಎಣಿಕೆ ಪೂರ್ವ ಇವಿಎಂ ಭದ್ರತೆಗೆ ಟುಟೈರ್ ಪದ್ದತಿ

ಮತದಾನ ನಂತರ ಇವಿಎಂ ಸಂಗ್ರಹಿಸಲಾದ ಎಣಿಕೆ ಕೇಂದ್ರದಲ್ಲಿ ಸಿಸಿಟಿವಿ ಕಣ್ಗಾವಲು ಜೊತೆಗೆ 100 ಮೀಟರ್ ವ್ಯಾಪ್ತಿಯೊಳಗೆ ಸಿಎಪಿಎಫ್ ಕೇಂದ್ರ ಸಶಸ್ತ್ರ ಪೊಲೀಸ್ ಫೋರ್ಸ್ ಭದ್ರತೆಯನ್ನು ನೀಡಲಾಗುತ್ತದೆ. ಮತ್ತು ನಂತರ ರಾಜ್ಯ ಸಶಸ್ತ್ರ ಮೀಸಲು ಪಡೆಯ ಭದ್ರತೆ ಒದಗಿಸಲಾಗಿರುತ್ತದೆ. ಚುನಾವಣಾಧಿಕಾರಿಗಳು ಪ್ರತಿದಿನ ಎರಡು ಭಾರಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುವರು.

ಇವಿಎಂ ಭದ್ರತಾ ಕೊಠಡಿ ಪರಿಶೀಲನೆಗೆ ಅಭ್ಯರ್ಥಿಗಳಿಗೂ ಅವಕಾಶ; ಮೇ 7 ರಂದು ನಡೆಯುವ ಮತದಾನ ನಂತರ 1946 ಮತಗಟ್ಟೆಗಳಲ್ಲಿನ ಮತಪೆಟ್ಟಿಗೆಗಳನ್ನು ಎಣಿಕೆ ಕೇಂದ್ರದಲ್ಲಿನ ಭದ್ರತಾ ಕೊಠಡಿಗಳಲ್ಲಿ ಕ್ಷೇತ್ರವಾರು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತದೆ. ಎಲ್ಲಾ ಭದ್ರತಾ ಕೊಠಡಿಗಳ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಎಲ್ಲಾ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಸೀಲ್ ಮಾಡಲಾಗಿರುತ್ತದೆ. ಮತ್ತು ಪ್ರತಿ ಭದ್ರತಾ ಕೊಠಡಿಗೂ ಕೇಂದ್ರ ಸಶಸ್ತ್ರ ಪೊಲೀಸ್ ಫೋರ್ಸ್ ಕಾವಲಿರುತ್ತದೆ. ಭದ್ರತಾ ವ್ಯವಸ್ಥೆ ಪರಿಶೀಲಿಸಲು ಸಿಸಿಟಿವಿ ಅಳವಡಿಸಲಾಗಿದ್ದು ಇದೆಲ್ಲವನ್ನು ನಿಯಂತ್ರಣಕ್ಕಾಗಿ ಕಂಟ್ರೋಲ್ ರೂಂ ಸ್ಥಾಪಿಸಲಾಗುತ್ತದೆ. ಇಲ್ಲಿ ಎಲ್ಲಾ ಕಡೆಯ ಸಿಸಿಟಿವಿಗಳ ಪ್ರದರ್ಶನ ಇರಲಿದೆ.

ಅಭ್ಯರ್ಥಿಗಳು ಕಂಟ್ರೋಲ್ ರೂಂಗೆ ಬಂದು ಪರಿಶೀಲಿಸಬಹುದಾಗಿದೆ. ಆದರೆ ಆಗಮಿಸುವ ಬಗ್ಗೆ 24 ಗಂಟೆ ಮುಂಚಿತವಾಗಿ ಮಾಹಿತಿ ನೀಡಿ ಬರಬೇಕಾಗುತ್ತದೆ. ಅವರು ಅಲ್ಲಿಯೇ ಇದ್ದು ನೋಡಲು ಸಹ ಅವಕಾಶ ಇರುತ್ತದೆ.
ಪರಿಶೀಲನೆ ವೇಳೆ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending