Connect with us

ದಿನದ ಸುದ್ದಿ

ಇಂದಿಗೆ 11 ವರ್ಷವಾಯ್ತು ಒಂದು ಓವರಿಗೆ ಯುವರಾಜ್ ಸಿಂಗ್ ಆರು ಸಿಕ್ಸ್ ಬಾರಿಸಿದ್ದು

Published

on

ಸುದ್ದಿದಿನ ಡೆಸ್ಕ್: ಆಲ್ ರೌಂಡರ್ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ಭರವಸೆಯ ಆಟಗಾರ. ಯುವರಾಜ್ ಸಿಂಗ್ ಬ್ಯಾಟಿಂಗ್ ಅಬ್ಬರಕ್ಕೆ ಅದೆಷ್ಟೋ ಬೌಲರ್‌ಗಳು ತತ್ತಸಿದ ಹೋಗಿದ್ದಾರೆ‌. ಇದರಿಂದ ಯುವರಾಜ್ ಸಿಂಗ್ ಅದೆಷ್ಟೋ ದಾಖಲೆಗಳನ್ನು ವಿಶ್ವ ಕ್ರಿಕೆಟ್ ನಲ್ಲಿ ನಿರ್ಮಿಸಿದ್ದಾರೆ. ಇಂದಿಗೂ ಅವರ ದಾಖಲೆ ಮುರಿಯುವ ಪ್ರಯತ್ನ ಯಾರಿಂದಲೂ ಸಾಧ್ಯವಾಗಿಲ್ಲ. ಇದಕ್ಕೆ ಸಾಕ್ಷಿ 2007ರ ಸೆಪ್ಟೆಂಬರ್ 19ರಂದು ಒಂದೇ ಆರು ಸಿಕ್ಸರ್ ಬಾರಿಸಿ ದಾಖಲೆ ನಿರ್ಮಿಸಿದ್ದರು.

ದಕ್ಷಿಣ ಆಫ್ರಿಕಾದ ಡರ್ಬನ್ನಲ್ಲಿರುವ ಕಿಂಗ್ಸ್ಮೀಡ್ ಕ್ರಿಕೆಟ್ ಮೈದಾನದಲ್ಲಿ 2007ರಲ್ಲಿ ಐಸಿಸಿ ಟಿ20 ವಿಶ್ವ ಕಪ್ ಪಂದ್ಯದ 19ನೇ ಓವರಿನಲ್ಲಿ ಬೌಲಿಂಗ್‌ ಮಾಡಲು ಸ್ಟುವರ್ಟ್ ಬ್ರಾಡ್ ಆರು ಎಸೆತಕ್ಕೂ ಯುವರಾಜ್ ಸಿಂಗ್ ಮೈದಾನ ಸುತ್ತಲೂ ಸಿಕ್ಸರ್ ಬಾರಿಸಿ ಬ್ರಾಡ್ ನ ಬೆವರಿಸಿದರು. ಟಿ20 ವಿಶ್ವ ಕಪ್ ಆರು ಬಾಲಿಗೂ ಸಿಕ್ಸರ್ ಬಾರಿಸಿದ ಮೊದಲಿಗರಾದರು. ಈಗ ಇಂದಿಗೆ ಅಂದರೆ ಸೆಪ್ಟೆಂಬರ್ 19ಕ್ಕೆ ಹನ್ನೊಂದು ವರ್ಷವಾಗಿದೆ.

ದಿನದ ಸುದ್ದಿ

ಆತ್ಮೀಯ ಮುಸ್ಲಿಂ ಗೆಳೆಯರಿಗಾಗಿ, ಗೌರವಪೂರ್ವಕವಾಗಿ..!

Published

on

  • ವಿವೇಕಾನಂದ. ಹೆಚ್.ಕೆ.

ಹೌದು, ನಿಮಗೆ ತ್ರಿವಳಿ ತಲ್ಲಾಖ್ ವಿಷಯದಲ್ಲಿ, ಬಾಬರಿ ಮಸೀದಿ ವಿವಾದದ ತೀರ್ಪಿನ ವಿಷಯದಲ್ಲಿ, ಗೋ ಮಾಂಸ ನಿಷೇಧದ ವಿಚಾರದಲ್ಲಿ, ಸಿಎಎ – ಎನ್ ಆರ್ ಸಿ ತಿದ್ದುಪಡಿಯಲ್ಲಿ ಒಟ್ಟಾರೆಯಾಗಿ ಭಾರತದ ಈಗಿನ ಸರ್ಕಾರದ ಧೋರಣೆಯ ಬಗ್ಗೆ ಅಸಮಾಧಾನ ಇರಬಹುದು ಅಥವಾ ಇದೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಅದರ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ಸಹ ಇತ್ತೀಚಿನ ವರೆಗೂ ನಡೆಯುತ್ತಿತ್ತು. ಅದು ನಿಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ಹಕ್ಕು.

ಆದರೆ ಈ ನಡುವೆ ಅನಿರೀಕ್ಷಿತವಾಗಿ ಕೊರೋನಾ ವೈರಸ್ ಇಡೀ ದೇಶವನ್ನು ಆಕ್ರಮಿಸಿ ಜೀವ ಉಳಿಸಿಕೊಳ್ಳುವುದೇ ಒಂದು ದೊಡ್ಡ ಸಾಹಸವಾಗಿದೆ. ಜಾತಿ ಧರ್ಮ ಭಾಷೆ ಪಕ್ಷ ಪಂಥ ದೇವರು ಎಲ್ಲವೂ ಹಿನ್ನೆಲೆಗೆ ಸರಿದಿದೆ ಮತ್ತು ಸರಿಯಲೇಬೇಕು.

ಮಾಧ್ಯಮಗಳಲ್ಲಿ ಸ್ವಲ್ಪ ಪಕ್ಷಪಾತ, ದುಡುಕುತನ, ಅತಿರಂಜಿತ ವರದಿಗಳು ಇದೆ ಎಂದೇ ಭಾವಿಸಿದರೂ,ಇತರೆ ಧರ್ಮದ ಕೆಲವು ಕಾರ್ಯಕ್ರಮಗಳು ಸಹ ನಡೆದವು ಎಂಬುದು ನಿಜವಾದರೂ ಇಲ್ಲಿ ಯಾವುದೇ ನೆಪ ಹೇಳದೆ, ಯಾವುದೇ ಕಾರಣ ನೀಡದೆ ವೈದ್ಯಕೀಯ ಕ್ಷೇತ್ರದ ಸಲಹೆಯಂತೆ ಸರ್ಕಾರಗಳು ತೆಗೆದುಕೊಳ್ಳುವ ತೀರ್ಮಾನಗಳನ್ನು ಸಂಪೂರ್ಣ ಬೆಂಬಲಿಸುವ ಕರ್ತವ್ಯ ಮತ್ತು ಜವಾಬ್ದಾರಿ ಎಲ್ಲರಿಗೂ ಇದೆ.

ವಿರೋಧಿ ಗುಂಪಿನವರು ಒಂದಷ್ಟು ರಾಜಕೀಯ ಗೊಳಿಸುವುದು, ಪ್ರಚೋದಿಸುವುದು ಇದ್ದರೂ ಅದಕ್ಕೆ ಈಗ ಹೆಚ್ಚಿನ ಮಹತ್ವ ಕೊಡಬಾರದು. ಈ ದೇಶದ ಹಕ್ಕು ಮತ್ತು ಕರ್ತವ್ಯಗಳು ನಿಮಗೂ ಸಹ ಸಮ ಪ್ರಮಾಣದಲ್ಲಿ ಇದೆ. ಇದನ್ನು ಈಗ ಏಕೆ ಹೇಳಬೇಕಾಯಿತೆಂದರೆ ಮಸೀದಿಗಳಲ್ಲಿ ಈಗಲೂ ಸಾಮೂಹಿಕ ಪ್ರಾರ್ಥನೆಯ‌ ವರದಿಗಳು ಅಲ್ಲಲ್ಲಿ‌ ಕೇಳಿ ಬರುತ್ತಿರುವುದರಿಂದ.

ಇದು ಸಾವು ಬದುಕಿನ ಮತ್ತು ಹಸಿವು ಅಸ್ತಿತ್ವದ ಪ್ರಶ್ನೆ. ಇಡೀ ಭಾರತೀಯ ಜನ ಸಮುದಾಯ ಆತಂಕದಿಂದ ಇದ್ದು ಪ್ರತಿ ಕ್ಷಣವನ್ನೂ ತುಂಬಾ ಎಚ್ಚರಿಕೆಯಿಂದ ಗಮನಿಸುತ್ತಿದೆ. ಈಗ ಇಡುವ ಪ್ರತಿ ಹೆಜ್ಜೆಯೂ ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತದೆ ಮತ್ತು ಜನರ ಮನಸ್ಸಿನಲ್ಲಿ ಉಳಿಯುತ್ತದೆ.

ಈಗಾಗಲೇ ಮನಸ್ಸುಗಳು ಒಡೆದಿವೆ. ಎರಡೂ ಕಡೆ ಪ್ರಚೋದನಾತ್ಮಕ ಮಾತುಗಳು ಪರಿಸ್ಥಿತಿ ಕೈ ಮೀರುವಂತೆ ಮಾಡಿದೆ. ಧರ್ಮ, ರಾಜಕೀಯ ಮನೆಯೊಳಗೆ ಮನಸ್ಸುಗಳೊಳಗೆ ಬಂದಾಗಿದೆ. ಧರ್ಮಾಂಧತೆ ದೇಶವನ್ನು ಆಕ್ರಮಿಸಿಕೊಂಡಿದೆ. ಮೊದಲಿನಿಂದಲೂ ಇದ್ದ ಹಿಂದೂ ಮುಸ್ಲಿಂ ವೈಮನಸ್ಯ ಈಗ ಇನ್ನೂ ದೊಡ್ಡದಾಗಿದೆ.

ಮುಸ್ಲಿಂ ಭಾಂಧವರೆ ನಿಮ್ಮ ಆತ್ಮಾವಲೋಕನಕ್ಕಾಗಿ ಇತ್ತೀಚಿನ ಒಂದು ವರದಿ

38.40 ಲಕ್ಷ ಜನರ ಸಾವು. ಕೇವಲ 9 ವರ್ಷಗಳಲ್ಲಿ.2011 ರಿಂದ ಇಲ್ಲಿಯವರೆಗೆ.ಸಿರಿಯಾ ದೇಶದ ಆಂತರಿಕ ಯುದ್ಧದಿಂದಾಗಿ.ಗಂಡಸರೆಷ್ಟೋ, ಹೆಂಗಸರೆಷ್ಟೋ, ಮಕ್ಕಳೆಷ್ಟೋ,.ಯಾವ ಯಾವ ಭೀಕರ ರೀತಿಯಲ್ಲಿ ಯಾತನೆ ಅನುಭವಿಸಿ ಸತ್ತರೋ. ಬಹುತೇಕ ತಮ್ಮ ಅರ್ಧ ಆಯಸ್ಸನ್ನೂ ಮುಗಿಸದೇ ತೀರಿ ಹೋದರು.ಅವರನ್ನು ಅಲ್ಲಾ ಎಂಬ ದೇವರು ಸೃಷ್ಟಿಸಿದ್ದರು, ಇಸ್ಲಾಂ ಎಂಬ ಧರ್ಮ ಬೆಳೆಸಿತ್ತು, ಷಿಯಾ ಸುನ್ನಿ ಖುರ್ದ್ ಎಂಬ ಹೆಸರುಗಳು ವಿಭಜಿಸಿದ್ದವು ಎಂದು ನಂಬಲಾಗುತ್ತದೆ. ಆದರೆ ಯಾವುದೂ ಅವರ ರಕ್ಷಣೆಗೆ ಬರಲಿಲ್ಲ, ಕೇವಲ ಸುಮಾರು 1.80 ಕೋಟಿ ಜನಸಂಖ್ಯೆಯ ದೇಶದಲ್ಲಿ ಘರ್ಷಣೆಗೆ ಸತ್ತವರು 38.40 ಲಕ್ಷ ಜನರು.

ನನಗವರು ಮನುಷ್ಯರು ಮಾತ್ರ

ಸೃಷ್ಟಿಯಲ್ಲಿ ಗಂಡು ಹೆಣ್ಣಿನ ಮಿಲನದಿಂದ ಮತ್ತೊಂದು ಜೀವ ಜನ್ಮ ತಾಳುತ್ತದೆ.‌ಸಿರಿಯಾದಲ್ಲಿ ಮಗು ಜನಸಿದರೆ ಮುಸ್ಲಿಂ ಎನ್ನುತ್ತಾರೆ. ಇಂಗ್ಲೆಂಡ್ ನಲ್ಲಿ ಜನಸಿದರೆ ಕ್ರಿಶ್ಚಿಯನ್, ಇಸ್ರೇಲ್ ನಲ್ಲಿ ಯಹೂದಿ, ಜಪಾನ್ ನಲ್ಲಿ ಬೌದ್ದ, ಭಾರತದಲ್ಲಿ ಹಿಂದೂ ಎಂದು ಸಾಮಾನ್ಯವಾಗಿ ಕರೆಯಲಾಗುತ್ತದೆ .ಈ ವ್ಯತ್ಯಾಸಗಳೇ ಮಾನವ ಕುಲಕ್ಕೆ ಶಾಪವಾಗಿ ಪರಿಣಮಿಸಿದೆ.

ಹಿಂದೆ ಕ್ರಿಶ್ಚಿಯನ್ ಧರ್ಮದ ಯೂರೋಪಿಯನ್ ದೇಶಗಳಲ್ಲೂ ಇದಕ್ಕಿಂತ ಭಯಂಕರ ಮಾನವ ಹತ್ಯಾಕಾಂಡಗಳು ನಡೆದಿವೆ.ಫ್ರೆಂಚ್‌ ಕ್ರಾಂತಿಯ ರಕ್ತಪಾತ, ಎರಡು ಮಹಾಯುದ್ಧಗಳು, ಇಟಲಿ ದಂಗೆ, ಹಿಟ್ಲರನ ಸಾವಿನ ಶಿಬಿರಗಳು, ರಷ್ಯಾ ದೌರ್ಜನ್ಯ ಎಲ್ಲವೂ ಇತಿಹಾಸದಲ್ಲಿ ದಾಖಲಾಗಿದೆ.

ಹಾಗೆಯೇ ಹಿಂದೂ ಜೀವನಶೈಲಿಯ ಭಾರತದಲ್ಲೂ ಹಿಂಸೆಯ ಪ್ರಮಾಣ ಕಡಿಮೆ ಏನಿಲ್ಲ. ಕ್ರಿಸ್ತ ಪೂರ್ವದಲ್ಲೇ ಬುದ್ದ ಮಹಾವೀರರು ಅಹಿಂಸೆಯ ಬಗ್ಗೆ ಗಂಭೀರವಾಗಿ ಮಾತನಾಡಿದ್ದಾರೆ ಎಂದರೆ ಆಗಲೇ ಹಿಂಸೆಯ ಪ್ರಮಾಣ ಎಷ್ಟಿತ್ತು ಎಂದು ಊಹಿಸಬಹುದು.

ಕಾರಣಗಳು ಏನೇ ಇರಲಿ
ಈ ಕ್ಷಣದಲ್ಲಿ ಪಾಕಿಸ್ತಾನ, ಇರಾನ್, ಇರಾಕ್, ಸಿರಿಯಾ, ಆಪ್ಘನಿಸ್ತಾನ, ಯೆಮೆನ್, ಟರ್ಕಿ ಮುಂತಾದ ಇಸ್ಲಾಮಿಕ್ ದೇಶಗಳೇ ಹೆಚ್ಚು ಸಾವು ನೋವಿಗೆ, ಆಂತರಿಕ ಕಲಹಗಳಿಗೆ ತುತ್ತಾಗುತ್ತಿವೆ.

ಈಗ ಗಂಭೀರವಾಗಿ ಯೋಚಿಸುವ ಸಮಯ ಬಂದಿದೆ. ಎಲ್ಲಾ ಧರ್ಮಗಳ ಮೂಲ ಆಶಯ ಮೂಲೆಗುಂಪಾಗಿ ಕೇವಲ ಆಚರಣೆಗಳು ಮಾತ್ರ ಜಾರಿಯಲ್ಲಿವೆ. ಇದಕ್ಕೆ ಇಸ್ಲಾಂ ಸಹ ಹೊರತಲ್ಲ.

ಹೌದು, ಭಾರತೀಯ ಮುಸ್ಲಿಮರಲ್ಲಿ ಬಡತನ ಅಜ್ಞಾನ ಗಾಢ ಧಾರ್ಮಿಕ ನಂಬಿಕೆಗಳು ಮನೆ ಮಾಡಿವೆ. ಧರ್ಮ ಗುರುಗಳ ಮಾತಿಗೆ ಅತಿ ಹೆಚ್ಚಿನ ಮಹತ್ವ ನೀಡುತ್ತಾರೆ. ಪ್ರಚೋದನಕಾರಿಯಾಗಿ ಮಾತನಾಡುವ ಹಿಂದೂಗಳು ಸಹ ಇದನ್ನು ಗಮನಿಸಬೇಕು. ಆತಂಕದಿಂದ ಎಲ್ಲಾ ತಪ್ಪುಗಳನ್ನು ಒಂದು ಸಮುದಾಯದ ತಲೆಗೆ ಕಟ್ಟಬಾರದು. ಸಂಯಮ ಅಗತ್ಯ.

ವಿವೇಚನೆ ಅಗತ್ಯ. ಕರೋನ ಬಂದಿದೆ ಎಂಬ ಒಂದೇ ಕಾರಣದಿಂದ ದಿನ ಬೆಳಗಾಗುವುದರಲ್ಲಿ ಎಲ್ಲರಲ್ಲೂ ದಿಡೀರನೇ ಪ್ರಬುದ್ದತೆ ನಿರೀಕ್ಷಿಸಲಾಗುವುದಿಲ್ಲ. ಸಬ್ ಕಾ ಸಾಥ್ ಸಬ್ ವಿಕಾಸ್ ಕೇವಲ ಘೋಷಣೆಯಾಗಬಾರದು. ಅದು ನಡವಳಿಕೆಯಾಗಬೇಕು. ಮಾಧ್ಯಮಗಳಂತೆ ವಿವೇಚನಾರಹಿತವಾಗಿ ಕೂಗಾಡಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳನ್ನು ಹರಡಬಾರದು. ಅದರಿಂದ ದೇಶಕ್ಕೆ ಅಪಾಯವೇ ಹೆಚ್ಚು.

ಎಲ್ಲಾ ಅಲ್ಪಸಂಖ್ಯಾತರಿಗೆ ಇರುವ ಅಭದ್ರತೆಯ ನಡುವೆಯೂ, ಮುಸ್ಲಿಂ ಸಮುದಾಯದಲ್ಲಿ ಪ್ರಗತಿಪರ ಚಿಂತನೆಗಳು ಸಮೂಹ ಪ್ರಜ್ಞೆಯಾಗಿ ಜಾಗೃತವಾಗಬೇಕು. ಧರ್ಮದ ಮೇಲಿನ ಅವಲಂಬಿನೆ ಕಡಿಮೆಯಾಗಬೇಕಿದೆ. ಅದಕ್ಕೆ ಹಿಂದೂಗಳು ಸಹ ಪ್ರೇರಣೆಯಾಗಬೇಕೆ ಹೊರತು ಪ್ರಚೋದಕರಾಗಬಾರದು. ಸುಮಾರು 18 ಕೋಟಿ ಜನಸಂಖ್ಯೆಯ ಒಂದು ಸಮುದಾಯವನ್ನು ಅಭದ್ರತೆಗೆ ತಳ್ಳಿ ದೇಶದ ಅಭಿವೃದ್ಧಿ ಶಾಂತಿ ಸಾಧ್ಯವೇ ಇಲ್ಲ.

ಎರಡೂ ಧರ್ಮಗಳಲ್ಲಿ ಕ್ರಿಯೆ ಪ್ರತಿಕ್ರಿಯೆಗಳು ಪ್ರಚೋದನಾತ್ಮಕವಾಗಿದ್ದು ಇದೇ ಕಾರಣದಿಂದ ಧೈರ್ಯವಾಗಿ ಮಾತನಾಡುವ ಖಂಡಿಸುವ ಸತ್ಯವನ್ನು ಬಯಲಿಗೆ ಎಳೆಯುವ ಜನರು ಕಡಿಮೆಯಾಗಿದ್ದಾರೆ. ಧರ್ಮ ಒಂದು ಸೂಕ್ಷ್ಮ ವಿಷಯ ಎಂಬ ನೆಪದಿಂದ ಮಾತನಾಡಲು ಹೆದರುತ್ತಾರೆ. ತಮ್ಮ ತಮ್ಮ ‌ಧರ್ಮ ದೇವರು ಗ್ರಂಥಗಳಲ್ಲಿ ಅಡಗಿರುವವರನ್ನು ನಾಗರಿಕ ಪ್ರಜ್ಞೆಗೆ ಎಳೆದು ತರಬೇಕಿದೆ. ಇದು ತುಂಬಾ ಕಷ್ಟ. ಆದರೂ ಮನುಷ್ಯನ ಉಳಿವಿಗಾಗಿ ನಿಂತ ನೀರಾಗಿ ಕೊಳೆತು ನಾರುತ್ತಿರುವ ಧಾರ್ಮಿಕತೆಯನ್ನು ಬಯಲಿಗೆ ಎಳೆಯಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳು ಇನ್ನಷ್ಟು ಭಯಂಕರ ಸ್ಥಿತಿ ತಲುಪುತ್ತದೆ. ಬಲವೇ ನ್ಯಾಯ ಎಂಬ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಮೂವರು ಕೊರೋನಾ ಸೋಂಕಿತರ ಪ್ರಾಥಮಿಕ ವರದಿ ನೆಗೆಟಿವ್

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯವಸ್ತುಗಳ ಲಭ್ಯತೆ ಸೇರಿದಂತೆ ಜನಜೀವನ ಸುಗಮವಾಗಿ ನಡೆಯಲು ಆರಂಭದಿಂದಲೂ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದ್ದು, ಇನ್ನು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ಬಾರದಿರಲಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಆಶಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಕೋವಿಡ್ 19 ವೈರಾಣು ನಿಯಂತ್ರಣ ಕುರಿತು ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಈ ಹಿಂದೆ ಆರ್‍ಓ ಪ್ಲಾಂಟ್ ಬಂದಾಗಿನಿಂದ ವೈದ್ಯರಿಗೆ ಕೆಲಸ ಕಡಿಮೆಯಾಗಿತ್ತು. ಇದೇ ರೀತಿ ಕೋವಿಡ್ ನಿಯಂತ್ರಣ ಯಶಸ್ವಿಯಾದಲ್ಲಿ ಜಿಲ್ಲೆಯ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಿ, ಅವರ ಸೇವೆಯನ್ನು ಇತರೆ ಜಿಲ್ಲೆಗಳಲ್ಲಿ ಬಳಸಿಕೊಳ್ಳಬಹುದೆಂದರು.

ಪ್ರಸ್ತುತ ಜಿಲ್ಲೆಯಲ್ಲಿರುವ 3 ಪಾಸಿಟಿವ್ ಪ್ರಕರಣಗಳ ಸೋಂಕಿತರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಚಿಕಿತ್ಸಾ ಅವಧಿಯಲ್ಲಿಯಲ್ಲಿನ ಪ್ರಾಥಮಿಕ ಹಂತದ ಗಂಟಲು ಮಾದರಿ ಪರೀಕ್ಷೆಯಲ್ಲಿ ಈ ಮೂವರು ಸೋಂಕಿತರ ಫಲಿತಾಂಶ ನೆಗೆಟಿವ್ ಎಂದು ಬಂದಿರುವುದು ಸಂತಸದ ವಿಷಯವಾಗಿದ್ದು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ವರದಿಯಾಗುವುದು ಬೇಡವೆಂದು ಹೇಳಿದರು.

ಜಿಲ್ಲೆಯಲ್ಲಿ ಎಪಿಸೆಂಟರ್, ಬಫರ್ ವಲಯಗಳಲ್ಲಿ ಡಿಎಸ್‍ಇನ್ಫೆಕ್ಷನ್ ಕಾರ್ಯ ಉತ್ತಮವಾಗಿ ಕೈಗೊಳ್ಳಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಬೇಕು. ಎಲ್ಲ ಅಗತ್ಯ ಸಾಮಗ್ರಿಗಳ ಜೊತೆಗೆ ಮಾನವ ಸಂಪನ್ಮೂಲವನ್ನು ಸಿದ್ದವಿರಿಸಿಕೊಳ್ಳಬೇಕು. ಹಾಗೂ ಕೋವಿಡ್ ಸ್ಕ್ರೀನಿಂಗ್‍ಗೆ ಆಯುಷ್ ವೈದ್ಯರಿಗೆ ತರಬೇತಿ ನೀಡಿ ಬಳಸಿಕೊಳ್ಳಬಹುದು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿದ್ದ 3 ಕೊರೊನಾ ಪಾಸಿಟಿವ್ ಪ್ರಕರಣಗಳ ಗಂಟಲು ದ್ರವ ಮಾದರಿಯನ್ನು ಪ್ರಾಥಮಿಕ ಹಂತದ ಪರೀಕ್ಷೆಗೆ ಕಳುಹಿಸಲಾಗಿದ್ದು ಈ ಮೂರು ಸೋಂಕಿತರ ವರದಿ ನೆಗೆಟಿವ್ ಎಂದು ಬಂದಿದೆ. ಮತ್ತೊಮ್ಮೆ ಇವರ ಗಂಟಲು ದ್ರವ ಮಾದರಿಯನ್ನು ಎರಡನೇ ಹಂತದಲ್ಲಿ ಕಳುಹಿಸಲಾಗುವುದು. ಎಪಿಸೆಂಟರ್ ವಲಯದಲ್ಲಿರುವ ಮನೆಗಳಿಗೆ ತೆರಳಿ ಫ್ಲೂ ಟೆಸ್ಟ್ ಮಾಡಲಾಗಿದೆ. ಈ ವಲಯಗಳಲ್ಲಿ ಡಿಸ್‍ಇನ್ಫೆಕ್ಷನ್ ಸೇರಿದಂತೆ ಪ್ರೊಟೊಕಾಲ್ ಪ್ರಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಸಮಿತಿಗಳನ್ನು ರಚಿಸಿಕೊಂಡು ಕೆಲಸ ಮಾಡಲಾಗುತ್ತಿದ್ದು ಆರ್‍ಆರ್‍ಟಿ ತಂಡ ಪ್ರತಿದಿನ ಕೋವಿಡ್ ಸರ್ವೆ ಕಾರ್ಯದಲ್ಲಿ ತೊಡಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ನಟರಾಜ್ ಮಾತನಾಡಿ ಚಿಗಟೇರಿ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಿದ್ದು ಪ್ರಸ್ತುತ 70 ಕೋವಿಡ್ ಸೋಂಕಿತರಿಗೆ ಚಿಕಿತ್ಸೆಗೊಳಿಪಡುವಷ್ಟು ಎಲ್ಲ ರೀತಿಯ ವೈದ್ಯಕೀಯ, ಸಾಮಗ್ರಿಗಳು, ಮಾನವ ಸಂಪನ್ಮೂಲವನ್ನು ಸಿದ್ದವಿಟ್ಟುಕೊಳ್ಳಲಾಗಿದೆ. 12 ಫಿವರ್ ಕ್ಲಿನಿಕ್ ಮಾಡಲಾಗುವುದು. ಪ್ರಸ್ತುತ 10 ನ್ನು ಗುರುತಿಸಲಾಗಿದೆ. ಬಾಪೂಜಿ, ಎಸ್.ಎಸ್. ಆಸ್ಪತ್ರೆ ಮತ್ತು 3 ಖಾಸಗಿ ಆಸ್ಪತ್ರೆ ಸೇರಿದಂತೆ 5 ಆಸ್ಪತ್ರೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಗುರಿತಿಸಲಾಗಿದೆ. 100 ಬೆಡ್‍ಗಳುಳ್ಳ ಐಸಿಯು ಗುರುತಿಸಲಾಗಿದೆ. ಹಾಗೂ ಪ್ರಾಥಮಿಕ ಕಾಂಟಾಕ್ಟ್‍ಗಳನ್ನು ಕ್ವಾರಂಟೈನ್ ಮಾಡಲು ನಗರದಲ್ಲಿ 6 ಲಾಡ್ಜ್ ಮತ್ತು ತಾಲ್ಲೂಕುಗಳಲ್ಲಿ ಒಂದೊಂದು ಲಾಡ್ಜ್‍ಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಉಸ್ತುವಾರಿ ಕಾರ್ಯದರ್ಶಿಗಳು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಆಸ್ಪತ್ರೆಗೆ ಅಗತ್ಯವಾದ ಸಲಕರಣೆಗಳನ್ನು ತಮ್ಮ ಹಂತದಲ್ಲೇ ಖರೀದಿಸುವಂತೆ ಡಿಹೆಚ್‍ಓ ಗೆ ತಿಳಿಸಿದ ಅವರು ದೆಹಲಿಯ ನಿಜಾಮುದ್ದೀನ್ ಸಮಾವೇಶದಲ್ಲಿ ಪಾಲ್ಗೊಂಡ ಚನ್ನಗಿರಿಯ 11 ಜನರಿಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಅವರಿಂದ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ, ಇತರರಿಗೆ ಸೋಂಕು ಏನಾದರೂ ಹರಡಿರುವ ಬಗ್ಗೆ ವಿಚಾರಿಸಿದರು.

ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ ಪ್ರತಿಕ್ರಿಯಿಸಿ ಈ ಹನ್ನೊಂದು ಜನರು ಫೆ.28 ಕ್ಕೇ ಜಿಲ್ಲೆಗೆ ವಾಪಾಸ್ಸು ಬಂದಿರುವುದರಿಂದ ಇನ್‍ಕ್ಯುಬೇಷನ್ ಅವಧಿ ಮುಗಿದಿದ್ದು ಅವರನ್ನು ನಿಗಾವಣೆಯಲ್ಲಿ ಇರಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೊರೊನಾ ನಿಯಂತ್ರಣ ಹಿನ್ನೆಲೆ ಪ್ರತಿದಿನ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತಿದೆ. ಜಿಲ್ಲಾಡಳಿತ ಕಚೇರಿಯಲ್ಲಿ ವಾರ್ ರೂಂ ಸ್ಥಾಪಿಸಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ರೈಸ್ ಮಿಲ್, ದಾಲ್ ಮಿಲ್ ಮಾಲೀಕರೊಂದಿಗೆ ಸಭೆ ನಡೆಸಲಾಗಿದ್ದು, ಪ್ರಸ್ತುತ 62 ರೈಸ್‍ಮಿಲ್‍ಗಳು ಕಾರ್ಯ ನಿರ್ವಹಿಸುತ್ತಿವೆ. ಟ್ರಾಫಿಕ್ ಸೇರಿದಂತೆ ವೈದ್ಯಕೀಯ ಇತರೆ ವಸ್ತುಗಳ ವ್ಯವಸ್ಥೆ ಮಾಡಲು ಪ್ರಮೋದ್ ನಾಯಕ್ ನೋಡಲ್ ಅಧಿಕಾರಿಯನ್ನು ನೇಮಿಸಿ ಕ್ರಮ ಕೈಗೊಳ್ಳಲಾಗಿದೆ. ಅಲೆಮಾರಿ, ವಲಸೆ ಕಾರ್ಮಿಕರಿಗೆ ಊಟ ಮತ್ತು ಹಾಲು ವಿತರಿಸಲಾಗುತ್ತಿದೆ. 23235 ಕುಟುಂಬಗಳಿಗೆ ಆಹಾರ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದರು.

ಕಿರಾಣಿ ಅಂಗಡಿಗಳು, ದಿನಸಿ ಅಂಗಡಿಗಳು 24*7 ತೆರೆಯಲು ಕ್ರಮ ವಹಿಸಲಾಗಿದೆ. ಗ್ರಾಮೀಣ ಭಾಗದ ಕಿರಾಣಿ ಅಂಗಡಿಗಳಿಗೆ ಪಡಿತರ ಪೂರೈಕೆ ಮಾಡಲಾಗಿದೆ ಎಂದರು.

ಉಸ್ತುವಾರಿ ಕಾರ್ಯದರ್ಶಿಗಳು ಎಸಿ ಮತ್ತು ತಹಶೀಲ್ದಾರರ ಮೂಲಕ ಸ್ಟ್ಯಾಂಡರ್ಡೈಸ್ಡ್ ವ್ಯವಸ್ಥೆಯಾಗಬೇಕು. ಅಧಿಕ ಬೆಲೆಗೆ ಯಾರೂ ದನಸ-ಧಾನ್ಯ, ಹಣ್ಣು ತರಕಾರಿ ಮಾರಬಾರದಂತೆ ಕ್ರಮ ವಹಿಸಿ ಎಂದರು.

ಎಸ್‍ಪಿ ಹನುಮಂತರಾಯ ಮಾತನಾಡಿ ಅನಗತ್ಯವಾಗಿ ಓಡಾಡುತ್ತಿದ್ದವರ ವಿರುದ್ದ ಕ್ರಮ ಕೈಗೊಳ್ಳಲಾಗಿದ್ದು ಇದುವರೆಗೆ 300 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದರು.

ಔಷಧಗಳನ್ನು ಸಾಗಿಸುತ್ತಿದ್ದ ವಿಆರ್‍ಎಲ್ ಲಾಜಿಸ್ಟಿಕ್ ಬಂದ್ ಆಗಿರುವ ಕಾರಣ ತೊಂದರೆಯಾಗಿದೆ ಎಂದು ಡಿಸಿ ತಿಳಿಸಿದಾಗ, ಉಸ್ತುವಾರಿ ಕಾರ್ಯದರ್ಶಿಗಳು ಈ ಕುರಿತು ಸಾರಿಗೆ ಇಲಾಖೆಯೊಂದಿಗೆ ಮಾತನಾಡುತ್ತೇನೆ. ಆದಷ್ಟು ಹತ್ತಿರದ ಪ್ರದೇಶಗಳಿಂದ ಔಷದಿ ತರಿಸಿಕೊಳ್ಳಿರಿ ಎಂದರು.

ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಬೆಂಗಳೂರು ಮತ್ತು ಇತರೆ ಪ್ರದೇಶಗಳಿಗೆ ಗ್ರಾಮೀಣ ಭಾಗಕ್ಕೆ ಒಟ್ಟು 15600 ಜನರು ಬಂದಿದ್ದು ಕೊರೊನಾ ಹಿನ್ನೆಲೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದಲ್ಲಿ ಕಿರಾಣಿ ಅಂಗಡಿಗಳಿಗೆ, ರೈತರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಕ್ರಮ ವಹಿಸಿದ್ದು, ತಳ್ಳು ಗಾಡಿಗಳ ಮೂಲಕ ತರಕಾರಿ ಖರೀದಿಗೆ ವ್ಯವಸ್ಥೆ ಮಾಡಲಾಗಿದೆ. 1520 ಶಾಲೆಗಳ 15235 ಮಕ್ಕಳ ಪೈಕಿ 11300 ಮಕ್ಕಳಿಗೆ 21 ದಿಗನಳ ಪಡಿತರ ಹಾಗೂ ಅಂಗನವಾಡಿ ಮಕ್ಕಳಿಗೆ ಪಡಿತರ ತಲುಪಿಸಲಾಗಿದೆ ಎಂದರು.

ಡಿಸಿ ಮಾತನಾಡಿ ಮಂಡಕ್ಕಿ ಭಟ್ಟಿ ಆರಂಭಿಸಲು ಆದೇಶಿಸಲಾಗಿದೆ. ಅವಲಕ್ಕಿ ಭಟ್ಟಿ ಆರಂಭವಾಗಿದ್ದು ಎಲ್ಲಾ ಆಹಾರ ತಯಾರಿಕಾ ಕೈಗಾರಿಕೆಗಳನ್ನು ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.

104 ಸಹಾಯವಾಣಿ ಮೂಲಕ 30 ದೂರುಗಳು ಬಂದಿದ್ದು, ಅವುಗಳನ್ನು ಎಫ್‍ಎಸ್‍ಟಿ ತಂಡ ನಿರ್ವಹಣೆ ಮಾಡಿದೆ. ವಾರ್ ರೂಂ ಗೆ ಸ್ಥಳೀಯವಾಗಿ 8 ದೂರುಗಳು ಬಂದಿದ್ದು, ಪ್ರಮುಖವಾಗಿ ಜನರು ರಸ್ತೆಯಲ್ಲಿ ಓಡಾಡುವ ಹಾಗೂ ಹೋಂ ಕ್ವಾರಂಟೈನ್ ಓಡಾಟದ ಬಗ್ಗೆ ಆಗಿದ್ದು ಇವುಗಳನ್ನು ಅಟೆಂಡ್ ಮಾಡಲಾಗಿದೆ ಎಂದರು.

ಒಟ್ಟು 377 ಹೊರ ರಾಜ್ಯದ ಕಾರ್ಮಿಕರು ಮುಖ್ಯವಾಗಿ ಬಿಹಾರ್, ಝಾರ್ಖಂಡ್, ಪಶ್ಚಿಮ ಬಂಗಾಳ, ತಮಿಳುನಾಡು, ಉತ್ತರಪ್ರದೇಶದವರಾಗಿದ್ದು ಇವರಿಗೆಲ್ಲ ಆಹಾರ ನೀಡಲಾಗುತ್ತಿದೆ ಎಂದು ಡಿಸಿ ತಿಳಿಸಿದರು.

ಉಸ್ತುವಾರಿ ಕಾರ್ಯದರ್ಶಿಗಳು ಹಕ್ಕಿಜ್ವರದ ಹಿನ್ನೆಲೆ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟ ಕುರಿತು ಕೇಳಿದ ಪ್ರಶ್ನೆಗೆ ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ಭಾಸ್ಕರ್ ನಾಯಕ್ ಉತ್ತರಿಸಿ, 2685 ಕೋಳಿಗಳನ್ನು ಕಲ್ಲಿಂಗ್ ಮಾಡಲಾಗಿದೆ. ಬೇಡಿಕೆ ಕುಸಿದ ಕಾರಣ ಫಾರಂ ಮಾಲೀಕರು ಕೋಳಿಗಳನ್ನು ಸ್ವತಃ ಜೀವಂತ ಸಮಾದಿ ಮಾಡಿದರು. ಬನ್ನಿಕೋಡಿನ ಒಂದು ಕಿ.ಮೀ ಸೋಂಕಿತ ವಲಯವನ್ನು ಡಿಸ್‍ಇನ್‍ಫೆಕ್ಟ್ ಮಾಡಲಾಗಿದೆ. ಹಾಗೂ 01 ಕಿ.ಮೀ ವ್ಯಾಪ್ತಿಯ ಸೋಂಕಿತ ವಲಯದಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟವನ್ನು 90 ದಿನ ನಿರ್ಬಂಧಿಸಿದ್ದು ಉಳಿದಂತೆ ಜಿಲ್ಲೆಯ ಎಲ್ಲ ಕಡೆ ಮಾರಾಟ ಮಾಡಲಾಗುತ್ತಿದೆ ಎಂದರು.

ಇದಕ್ಕೆ ಉಸ್ತುವಾರಿ ಕಾರ್ಯದರ್ಶಿಗಳು ಪ್ರತಿಕ್ರಿಯಿಸಿ ಕೋಳಿ ಅತ್ಯುತ್ತಮ ಪ್ರೋಟಿನ್ ಆಹಾರ ಆಗಿದ್ದು, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಾರಣ ಕೊರೊನಾಗೆ ಇದು ಒಳ್ಳೆಯ ಆಹಾರ. ಹಾಗಾಗಿ ಸರ್ಕಾರವೇ ಕಡ್ಡಾಯವಾಗಿ ಎಲ್ಲೆಡೆ ಕೋಳಿ ಮತ್ತು ಮೊಟ್ಟೆ ಮಾರಾಟಕ್ಕೆ ಉತ್ತೇಜನ ನೀಡಿದೆ ಎಂದರು.

ಸಭೆಯಲ್ಲಿ ಎಡಿಸಿ ಪೂಜಾರ್ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉಡುಪಿ | ಜಿಲ್ಲೆಯಲ್ಲಿ ಮೀನು, ಮಾಂಸ ನಿರ್ಬಂದಿಸಿಲ್ಲ : ಜಿಲ್ಲಾಧಿಕಾರಿ

Published

on

ಸುದ್ದಿದಿನ,ಉಡುಪಿ : ಜಿಲ್ಲೆಯಲ್ಲಿ ಮೀನು ಹಿಡಿಯುವುದು ಹಾಗೂ ಮಾರಾಟ ಮಾಡುವುದನ್ನು ನಿರ್ಬಂದಿಸಿಲ್ಲ, ಅದರೆ ಗುಂಪು ಗುಂಪಾಗಿ ಮೀನುಗಾರಿಕೆ ಮಾಡುವುದು ಹಾಗೂ ಮಾರಾಟ ಮಾಡುವುದಕ್ಕೆ ನಿರ್ಭಂದವಿದೆ, ಆದರೆ ಸಾಂಪ್ರದಾಯಿಕ ದೋಣಿಗಳಲ್ಲಿ ಮೀನುಗಾರಿಕೆ ಮಾಡಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು , ಕೋಳಿ , ಮಾಂಸ ಮಾರಾಟ ಮಾಡಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಠಪಡಿಸಿದ್ದಾರೆ.

ಅವರು ಗುರುವಾರ, ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ರೈತರ ಬೆಳಗಳಿಗೆ ಸಹ ಯಾವುದೇ ತೊಂದರೆಯಾಗದಂತೆ ಸಮರ್ಪಕ ರೀತಿಯಲ್ಲಿ ಸಾಗಾಟ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ, ಎಪಿಎಂಸಿ ಮತ್ತು ತೋಟಗಾರಿಕಾ ಇಲಾಖೆಯ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ,ಆಹಾರ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮ ಕೈಗೊಂಡಿದೆ, ಪಡಿತರ ವಿತರಣೆ ನಡೆಯುತ್ತಿದ್ದು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಸಮರ್ಪಕ ರೀತಿಯಲ್ಲಿ ಪಡಿತರ ವಿತರಿಸಲಾಗುತ್ತಿದೆ, ಪಡಿತರ ದಾಸ್ತಾನು ಕೊರತೆಯಿಲ್ಲ ಎಂದು ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಕ್ವಾರಟೈಂನ್ ಮಾಡಿರುವವರ ಊಟ ಮತ್ತು ವಸತಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಜಿಲ್ಲಾಡಳಿತದ ಮೂಲಕ ಮಾಡುತ್ತಿದ್ದು, ಅವರಿಗೆ ಪೌಷ್ಠಿಕ ಆಹಾರ ಮತ್ತು ಹಣ್ಣುಗಳನ್ನು ಒದಗಿಸಲಾಗುತ್ತಿದೆ, ಜಿಲ್ಲೆಯಲ್ಲಿ ಇನ್ನು 4 ದಿನದಲ್ಲಿ ಪ್ರಸ್ತುತ ಕ್ವಾರಟೈಂನ್ ನಲ್ಲಿರುವರ ಅವಧಿ ಮುಗಿಯಲಿದೆ, ನಂತರ 14 ದಿನ ಅವರ ಬಗ್ಗೆ ನಿಗಾ ವಹಿಸಲಾಗುವುದು, ಹೋ ಕ್ವಾರಠೈಂನ್ ಉಲ್ಲಂಘಿಸುವವರ ವಿರುದ್ದ 2 ವರ್ಷಗಳ ಜೈಲು ವಾಸದ ಶಿಕ್ಷೆ ವಿಧಿಸಬಹುದಾಗಿದ್ದು, ಅವರಿಂದ ತೊಂದರೆಗೊಳಗಾದ ನಾಗರೀಕರ ಚಿಕಿತ್ಸಾ ವೆಚ್ಚವನ್ನು , ಕ್ವಾರಂಟೈನ್ ಉಲ್ಲಂಘಿಸಿದ ವ್ಯಕ್ತಿಯಿಂದಲೇ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಿಂದ ದೆಹಲಿಯಲ್ಲಿ ನಡೆದ ಪ್ರಾರ್ಥನೆಗೆ ಹೋದವರೂ ಯಾರೂ ಇಲ್ಲ, ಆದರೆ ಆ ಸಮಯದಲ್ಲಿ ಇತರೆ ಕಾರ್ಯದ ಮೇಲೆ ದೆಹಲಿಗೆ ಹೋಗಿದ್ದ ಜಿಲ್ಲೆಯ 16 ಜನರನ್ನು ಮೊಬೈಲ್ ಟವರ್ ಮೂಲಕ ಗುರುತಿಸಲಾಗಿದ್ದು, ಅದರಲ್ಲಿ 9 ಜನ ಹೋಂ ಕ್ವಾರಟೈಂನ್ ನಲ್ಲಿದ್ದು, ಇತÀರರು ಬೇರೆ ಜಿಲ್ಲೆಯಲ್ಲಿದ್ದು ಸಂಬಂದಪಟ್ಟ ಜಿಲ್ಲಾಡಳಿತಕ್ಕೆ ಅವರ ಬಗ್ಗೆ ಮಾಹಿತಿ ನೀಡಲಾಗಿದೆ , ಜಿಲ್ಲೆಯ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಠಪಡಿಸಿದರು.

ಜಿಲ್ಲೆಯಲ್ಲಿನ ವಲಸೆ ಕಾರ್ಮಿಕರಿಗೆ ಯಾವುದೇ ತೊಂದರೆಯಾದಗಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ 3800 ಮಂದಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಿದ್ದು , ಕಾರ್ಮಿಕರು ರೈಲ್ವೆ ಹಳಿಗಳ ಮೇಲೆ , ರಸ್ತೆಯಲ್ಲಿ ಸಂಚರಿಸಬಾರದು ಎಂದು ಡಿಸಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಸಿನಿ ಸುದ್ದಿ5 hours ago

ಕನ್ನಡದ ಹಾಸ್ಯ ದಿಗ್ಗಜ ಬುಲೆಟ್ ಪ್ರಕಾಶ್ ಇನ್ನಿಲ್ಲ..!

ಸುದ್ದಿದಿನ,ಬೆಂಗಳೂರು : ಸ್ಯಾಂಡಲ್ ವುಡ್ ನ ಹಾಸ್ಯ ನಟ ಬುಲೆಟ್ ಪ್ರಕಾಶ್ (45)ಇಂದು ಕಿಡ್ನಿ ವೈಫಲ್ಯದಿಂದ ಮೃತರಾಗಿದ್ದಾರೆ. ಇತ್ತೀಚೆಗೆ ಬುಲೆಟ್ ಪ್ರಕಾಶ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಮೂಲಕ...

ಅಂತರಂಗ9 hours ago

ಅರಿಮೆಯ ಅರಿವಿರಲಿ-9 : ಆತ್ಮರತಿ

ಯೋಗೇಶ್ ಮಾಸ್ಟರ್ ಅವನು ಲ್ಯಾಕೋನಿಯಾದ ಬೇಟೆಗಾರ. ಅವನಿದ್ದದ್ದು ಪುರಾತನ ಗ್ರೀಸಿನಲ್ಲಿರುವ ಥಿಸ್ಪಿಯೇ ಪ್ರಾಂತ್ಯ. ಅವನೋ ಕಟ್ಟುಮಸ್ತಾದ ಮೈಕಟ್ಟಿನವ, ಸುಂದರ ಮುಖದವ. ಅವನೂ ಸುಂದರ. ಅವನಿಗೂ ಸುಂದರವಾದ ವಿಷಯಗಳಲ್ಲಿ...

ಲೈಫ್ ಸ್ಟೈಲ್10 hours ago

‘ಕಲ್ಲಂಗಡಿ ಸಿಪ್ಪೆ ದೋಸೆ, ತೆಳ್ಳವು’ ಮಾಡಿ ಸವಿಯಿರಿ..!

ಶಶಿಕಲಾ ಸುನೀಲ್ ಬೇಕಾಗುವ ಸಾಮಗ್ರಿಗಳು ದೋಸೆ ಅಕ್ಕಿ – 2 ಕಪ್ ಮೆಂತ್ಯ – 1 ಸ್ಪೂನ್ ತೆಂಗಿನತುರಿ – 1 ಹಿಡಿ ಕಲ್ಲಂಗಡಿಯ ಸಿಪ್ಪೆ 10...

ಲೈಫ್ ಸ್ಟೈಲ್11 hours ago

‘ಕೊರೊನ’ ಇದು ಪ್ರಕೃತಿ ಸೃಷ್ಟಿಸೋ ಅವತಾರ..! HANDS UP  ಮಾನವನೇ..!

“ಮಾನವ ಸಂಕುಲದ ನಾಗಲೋಟಕ್ಕೊಂದು ಮಾರಕ ತಡೆ” “LOCK DOWN : ಇದೊಂದು ಆತ್ಮ ವಿಮರ್ಶೆಯ ಸಮಯ.” ಡಾ. ಬಿನಯ್ ಕುಮಾರ್ ಸಿಂಗ್ , ಸನ್‍ಶೈನ್ ಪುರಂತರ ಆಸ್ಪತ್ರೆ,...

ಅಂತರಂಗ1 day ago

ಅರಿಮೆಯ ಅರಿವಿರಲಿ-8 : ಶೀಲ ಅಶ್ಲೀಲ

ಯೋಗೇಶ್ ಮಾಸ್ಟರ್ ಶೀಲದ ಗೀಳಿನ ಸಿನಿಮಾಗಳು ಶೀಲ ಅಶ್ಲೀಲದರಿಮೆ (Madonna/Whore Complex)ನಮ್ಮ ಭಾರತೀಯ ಸಿನಿಮಾಗಳಲ್ಲಿ ಚೆನ್ನಾಗಿ ಅರ್ಥವಾಗುತ್ತದೆ. ಪಾಪ, ಅವರಾದರೋ ಹೊಸದನ್ನೇನೂ ಸೃಷ್ಟಿಸಿ ತೋರುವುದಲ್ಲ. ಸಮಾಜದಲ್ಲಿ ಸಾಮಾನ್ಯವಾಗಿರುವ...

ಭಾವ ಭೈರಾಗಿ2 days ago

ಕವಿತೆ | ನೆನಪ ಹಿಂಬಾಲಿಸಿ ಬಂದವಳು

  ಅಪೂರ್ವ ಜಗದೀಶ್ ನಡೆವ ದಾರಿಯಲಿ ನಾ ಎಡವಿದಾಗಲೆಲ್ಲ ಕಿಸೆಯಲ್ಲಿನ ನೆನಪುಗಳು ರಸ್ತೆಯ ತುಂಬೆಲ್ಲ ನಕ್ಷತ್ರಗಳಂತೆ ಹರಡಿಬಿಡುವವು. ಹುಚ್ಚಿಯಂತೆ ಅವುಗಳನ್ನೆಲ್ಲ ಒಂದೊಂದಾಗಿ ಹೆಕ್ಕಿ ಮತ್ತೆ ಕಿಸೆಗೆ ತುಂಬಿಸಿಕೊಳ್ಳುತ್ತೇನೆ....

ಲೈಫ್ ಸ್ಟೈಲ್2 days ago

‘ಗೋಲ್ಗಪ್ಪಾ, ಪಾನಿಪುರಿ, ಗಪ್ ಚುಪ್’ ರೆಸಿಪಿ ಇಲ್ಲಿದೆ ಮಾಡಿ ನೋಡಿ..!

ಶಶಿಕಲಾ ಸುನೀಲ್ ಬೇಕಾಗುವ ಸಾಮಗ್ರಿಗಳು ಚಿರೋಟಿ ರವೆ – 2 ಕಪ್ ಮೈದಾ – 3 ಸ್ಪೂನ್ ಅಡಿಗೆ ಸೋಡಾ – ಚಿಟಕೆ ಆಲೂಗಡ್ಡೆ – 3...

ಲೋಕಾರೂಢಿ2 days ago

ಮನುಕುಲದ ಉಳಿವಿಗೆ ಮಾನವ ಪ್ರೇಮದ ಸಂಕಲ್ಪ

ಗಂಗಾಧರ ಬಿ ಎಲ್ ನಿಟ್ಟೂರ್ ನಿಜ ನಾವೀಗ ಸಂದಿಗ್ಧ ಮತ್ತು ಸಂಕಟದ ಪರಿಸ್ಥಿತಿಯಲ್ಲಿದ್ದೇವೆ. ಹೌದು, ಇದು ನಮಗಷ್ಟೇ ಅಲ್ಲ ಇಡೀ ಲೋಕಕ್ಕೇ ಬಂದೆರಗಿರುವ ಕಂಟಕ. ಆದರೆ ಈ...

ದಿನದ ಸುದ್ದಿ2 days ago

ಆತ್ಮೀಯ ಮುಸ್ಲಿಂ ಗೆಳೆಯರಿಗಾಗಿ, ಗೌರವಪೂರ್ವಕವಾಗಿ..!

ವಿವೇಕಾನಂದ. ಹೆಚ್.ಕೆ. ಹೌದು, ನಿಮಗೆ ತ್ರಿವಳಿ ತಲ್ಲಾಖ್ ವಿಷಯದಲ್ಲಿ, ಬಾಬರಿ ಮಸೀದಿ ವಿವಾದದ ತೀರ್ಪಿನ ವಿಷಯದಲ್ಲಿ, ಗೋ ಮಾಂಸ ನಿಷೇಧದ ವಿಚಾರದಲ್ಲಿ, ಸಿಎಎ – ಎನ್ ಆರ್...

ಅಂತರಂಗ3 days ago

ಅರಿಮೆಯ ಅರಿವಿರಲಿ-7 : ಕುಮಾರ ಕಾಮ

ಯೋಗೇಶ್ ಮಾಸ್ಟರ್ ಹಗ್ಗದ ಕೊನೆಗಳು ಪ್ರೇಮ ಮತ್ತು ಕಾಮಗಳ ನಡುವೆ ಅದೆಷ್ಟೇ ಅಂತರವನ್ನು ಕಾಯ್ದುಕೊಂಡಿದ್ದರೂ, ಅಥವಾ ವ್ಯತ್ಯಾಸವನ್ನು ಕಂಡುಕೊಂಡಿದ್ದರೂ ಅವೆರಡೂ ಕೆಲವೊಮ್ಮೆ ಬೆರೆತುಕೊಂಡುಬಿಡುತ್ತವೆ. ಕಾರಣ ಈವೆರಡೂ ಒಂದೇ...

Trending