Connect with us

ಲೈಫ್ ಸ್ಟೈಲ್

7000 ವರ್ಷಗಳಿಂದ ಬಳಸುತ್ತಿರುವ ಬೆಳ್ಳುಳ್ಳಿಯ ಆರೋಗ್ಯದ ಗುಣಗಳ ಬಗ್ಗೆ ನಿಮಗೆಷ್ಟು ಗೊತ್ತು..?

Published

on

ಸುದ್ದಿದಿನ ಡೆಸ್ಕ್ : 7000 ವರ್ಷಗಳಿಂದ ನಾವು ಬೆಳ್ಳುಳ್ಳಿಯನ್ನು ಉಪಯೋಗಿಸುತ್ತಿದ್ದೇವೆ. ಆರೋಗ್ಯದ ಹಾಗೂ ರುಚಿಯ ದೃಷ್ಟಿಯಿಂದ ಇದನ್ನು ಬಳಸಲಾಗುತ್ತಿದೆ.ಇದರ ಬಗ್ಗೆ ಇನ್ನೂ ಕೆಲವು ಉಪಯೋಗಗಳನ್ನು ತಿಳಿಯೋಣ.

ಉಪಯೋಗಗಳು

  1. ದೇಹವನ್ನು ಹೆಚ್ಚು ಶಾಕವಾಗಿಡಲು ಮತ್ತು ನರಗಳನ್ನು ಹೆಚ್ಚು ಚೈತನ್ಯ ತುಂಬಿಸಿಕೊಳ್ಳಲು ಬೆಳ್ಳುಳ್ಳಿಯನ್ನು ಪ್ರತಿದಿನವೂ ಸೇವಿಸಬೇಕು.
  2. ರೋಗ ಯುಕ್ತರಾದ ಕ್ಷಯರೋಗಿಗಳು ದೀರ್ಘಕಾಲ ಪ್ರತಿದಿನವೂ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರೆ ರೋಗ ಮರುಕಳಿಸುವ ಭಯವಿರುವುದಿಲ್ಲ.
  3. ರಕ್ತದ ಒತ್ತಡ ಹೆಚ್ಚಾಗಿರುವ ರೋಗಿಗಳು ಬೆಳ್ಳುಳ್ಳಿಯನ್ನು ಖಂಡಿತವಾಗಿ ಬಳಸಲೇಬೇಕು.
  4. ಬೆಳ್ಳುಳ್ಳಿ, ಹಿಪ್ಪೇ ಅಥವಾ ಹೊಂಗೆ ಬೀಜ ಮತ್ತು ಅಡಿಗೆ ಉಪ್ಪನ್ನು ಅರೆದು ಗಾಯಗಳಿಗೆ ಹೆಚ್ಚುವುದರಿಂದ ಗಾಯ ಬಹುಬೇಗ ಗುಣವಾಗುವುದು.
  5. ಚೇಳು ಕುಟುಕಿದ ಜಾಗಕ್ಕೆ ಬೆಳ್ಳುಳ್ಳಿ ಎಸಳನ್ನು ಅರೆದು ಹಚ್ಚದರೆ ಯಾತನೆ ದೂರವಾಗುವುದು.
  6. ಜೇನುತುಪ್ಪದೊಂದಿಗೆ ಬೆಳ್ಳುಳ್ಳಿ ರಸವನ್ನು ಒಂದು ಟೀ ಚಮಚದಷ್ಟು ಸೇವಿಸುವುದರಿಂದ ಜಂತುಹುಳುಗಳು ಮಲದೊಂದಿಗೆ ಹೊರಬೀಳುವುವು.
  7. ಕಿವಿ ನೋವಿದ್ದರೆ ಬೆಳ್ಳುಳ್ಳಿಯ ಎಸಳನ್ನು ಹರಳೆಣ್ಣೆಯಲ್ಲಿ ಕರಿದು ನಂತರ ಆರಿದ ಮೇಲೆ ಕಿವಿಗೆ ಒಂದೆರಡು ತೊಟ್ಟು ಆ ಎಣ್ಣೆಯನ್ನು ಬಿಟ್ಟುಕೊಂದರೆ ನೋವು ಪರಿಹಾರವಗುವುದು.
  8. ಬೆಳ್ಳುಳ್ಳಿ ಸೇವನೆಯಿಂದ ವಾತನಾಶವಾಗುತ್ತದೆ. ಕ್ಷಯರೋಗವನ್ನು ನಿವಾರಿಸುತ್ತದೆ. ಕಾಲರಾಕ್ಕೆ ಇದರ ಸೇವನೆಯಿಂದ ಹೆಚ್ಚು ಉಪಯೋಗವಾಗುತ್ತದೆ.
  9. ಹಾಲಿನಲ್ಲಿ ಬೆಳ್ಳುಳ್ಳಿ ಎಸಳನ್ನು ಬೇಯಿಸಿ ಪ್ರತಿದಿನ ತಿನ್ನುವುದರಿಂದ ಉಬ್ಬಸ ರೋಗ ಗುಣವಾಗುತ್ತದೆ.
  10. ಬಾಣಂತಿಯರು ಬೆಳ್ಳುಳ್ಳಿಯ ಚೂರುಗಳನ್ನು ಹತ್ತಿಯಲ್ಲಿ ಸುತ್ತಿ ಇಟ್ಟುಕೊಂಡರೆ ಶೀತದಿಂದ ಕಿವಿ ಕಿವುಡಾಗುಗ ಸಾಧ್ಯತೆ ಇರುವುದಿಲ್ಲ.
  11. ಬೆಳ್ಳುಳ್ಳಿಯನ್ನು ಬೇಯಿಸಿ ಅದರ ನೀರನ್ನು ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ಗರ್ಭಾಶಯದ ನೋವು ಪರಿಹಾರವಾಗುವುದು.
  12. ಪ್ರತಿನಿತ್ಯ ಬೆಳ್ಳುಳ್ಳಿಯನ್ನು ಬಳಸುತ್ತಿದ್ದರೆ ಜಠರದಲ್ಲಿ ವಾಯು ಸೇರುವುದಿಲ್ಲ ಜೊತೆಗೆ ರಕ್ತದ ವೃದ್ಧಿಯಾಗುತ್ತದೆ.
  13. ಬೆಳ್ಳುಳ್ಳಿ ಹೊಟ್ಟಿನ ಹೊಗೆಯನ್ನು ಮನೆಯಲ್ಲಿ ಕೆಲವು ಗಂಟೆಗಳು ಹಾಕುವುದರಿಂದ ಮನೆಯಲ್ಲಿ ಒಂದು ವೇಳೆ ವಿಷಜಂತುಗಳು ಸೇರಿಕೊಂಡಿದ್ದರೆ ಅವು ಅದರ ವಾಸನೆಯನ್ನು ತಡೆಯಲಾರದೆ ಹೊರಗೆ ಹೊರಟು ಹೋಗುವುವು.
  14. ದೀರ್ಘಕಾಲದ ಕೆಮ್ಮು ಮತ್ತು ನೆಗಡಡಯಿಂದ ಬಳಲುತ್ತಿರುವವರು ಬೆಳ್ಳುಳ್ಳಿಯನ್ನು ಪ್ರತಿದಿನ ಬಳಸಿದರೆ ಖಾಯಿಲೆ ದೂರವಾಗುವುದು.
  15. ಬಿಸಿ ಮಾಡಿದ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಅಜೀರ್ಣ ಮತ್ತು ಹೊಟ್ಟೆ ಉಬ್ಬರ ದೂರವಾಗುವುದು.
  16. ಬೆಳ್ಳುಳ್ಳಿಯನ್ನು ಪ್ರತಿನಿತ್ಯವೂ ಬಳಸುವುದರಿಂದ ಪಚನಶಕ್ತಿ ಹೆಚ್ಚಿಸಿ ವೀರ್ಯವನ್ನು ವೃದ್ಧಿಸುತ್ತದೆ. ಇದರಿಂದ ದಮ್ಮು, ಕೆಮ್ಮು ಉಬ್ಬಸದ ವಿಕಾರಗಳಿಗೆ ಅತ್ಯುತ್ತಮ ಔಷಧವಾಗಿದೆ.
  17. ಬೆಳ್ಳುಳ್ಳಿಯನ್ನು ಬಳಸುವುದರಿಂದ ಜ್ವರ ಬಂದಾಗ ಪ್ಲೇಟ್ ಲೇಟ್ ಗಳು ಕಡಿಮೆ ಇರುವುದನ್ನು ಹೆಚ್ಚು ಮಾಡುತ್ತದೆ.
  18. ಬೆಳ್ಳುಳ್ಳಿಯು ಇನ್ಸುಲಿನ್ ಬಿಡುಗಡೆ ಹೆಚ್ಚಿಸಿ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿ ಇರುತ್ತದೆ.
  19. ಹಲ್ಲು ನೋವು ಇದಲ್ಲಿ ಬೆಳ್ಳುಳ್ಳಿಯ ಸಣ್ಣ ಚೂರು ಇಡುವುದರಿಂದ ನೋವು ಕಡಿಮೆಯಾಗುತ್ತದೆ.
  20. ಬೆನ್ನು ನೋವಿದ್ದರೆ ಬೆಳ್ಳುಳ್ಳಿ ರಸ ಹೆಚ್ಚುವುದರಿಂದ ನೋವು ಕಡಿಮೆ ಆಗುತ್ತದೆ.

ಇದನ್ನೂ ಓದಿ

ಆರೋಗ್ಯದ ಗಣಿ ‘ಬಾಳೆ ಹಣ್ಣಿ’ನ ಮಹತ್ವ ತಿಳಿದರೆ ಅಚ್ಚರಿ ಪಡ್ತಿರಾ..!

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಲೈಫ್ ಸ್ಟೈಲ್

ಕಿವಿಯಲ್ಲಿ ಫ್ಲವರ್ ; ಟ್ಯಾಟೂ ಜಿವಲ್ಲೆರೀ ಟ್ರೆಂಡಿಂಗ್..!

Published

on

ತ್ತೀಚಿನ ಗ್ಲಾಮರ್ ಯುಗದಲ್ಲಿ,  ಇಂಸ್ಟಂಟ್ ಮತ್ತು ಅಚ್ಚರಿ ಹುಟ್ಟಿಸುವಂತಹ ಚಿತ್ರ ವಿಚಿತ್ರ ಟ್ರೆಂಡ್ ಗಳು ಇಂಸ್ಟಾಗ್ರಾಂ ಟ್ವಿಟ್ಟರ್, ಗಳಲ್ಲಿ ಸುದ್ದಿ ಮಾಡುತ್ತಿದೆ. ಹೆಣ್ಣು ಮಕ್ಕಳ ಆಭರಣ ಪ್ರೇಮ ಇಂದು ನಿನ್ನೆಯದಲ್ಲ. ಆಭರಣಕ್ಕೆ ಪರ್ಯಾಯ ಪದವೇ ಹೆಣ್ಣು ಅನ್ನುವಷ್ಟರ ಮಟ್ಟಿಗೆ ಹೆಂಗಳೆಯರ ಆಭರಣ ಪ್ರೀತಿ ಲೋಕಾರೂಢಿಯಲ್ಲಿ ಕಂಡು ಬರುತ್ತದೆ.

ಆದರೆ ಇತ್ತೀಚೆಗೆ ಕಂಡು ಬರುತ್ತಿರುವ ಫ್ಯಾಷನ್ ಟ್ರೆಂಡ್ ಗಳು ಈ ಲೋಕಾರೂಢಿಯ ನಾನ್ನುಡಿಯನ್ನು ಸುಳ್ಳಾಗಿಸಿದೆ. ಆಧುನಿಕ ಫ್ಯಾಷನ್ ಯುಗದಲ್ಲಿ, ಟ್ಯಾಟೂ ಕ್ರೇಜ್ ಹೆಚ್ಚಿದ್ದು, ದುಬಾರಿ
ಆಭರಣಗಳನ್ನು ಸೈಡಿಗೆ ಸೇರಿಸಿದೆ.

ಟ್ಯಾಟೂ ಜಿವಲ್ಲೆರೀ, ಸದ್ಯ ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಹಾಗೂ ಟ್ರೆಂಡ್ ಸೆಟ್ಟರ್ ಆಗಿ ಮಿಂಚುತ್ತಿದೆ. ಚಿನ್ನ ಬೆಳ್ಳಿ ವಜ್ರದ ಆಭರಣಗಳಿಗೆ ಸೆಡ್ಡು ಹೊಡೆದು ನಿಂತಿದೆ ಈ ನೂತನ ಟ್ಯಾಟೂ ಜಿವಲ್ಲೆರೀ ಟ್ರೆಂಡ್ !

ಕಿವಿಯಲ್ಲಿ ಮಿಂಚುವ ಕಿವಿ ಓಲೆಗಳು ಈ ಟ್ರೆಂಡ್ ಗೆ ವಾಶ್ ಔಟ್ ಆಗಿವೆ! ಕಿವಿಯ ಮೇಲೆ ಸುಂದರ ವಾಗಿ ಮೂಡಿ ಬರುತ್ತಿದೆ ಕಲರ್ಫುಲ್ ಫ್ಲವರ್ ಟ್ಯಾಟೂ.. ಬಣ್ಣದ ಹೂಗಳು, ಚಿಟ್ಟೆ, ಎಲೆ-ಬಳ್ಳಿ ಗಳು ಟ್ಯಾಟೂ ಇಯರ್ ಖಫ್ ಮತ್ತು ಇಯರ್ ರಿಂಗ್ ಗಳನ್ನು ರೀಪ್ಲೇಸ್ ಮಾಡಿರುವುದಂತೂ ಸತ್ಯ.

ಅಂತೆಯೇ, ಮೇಲ್ಕುತ್ತಿಗೆ, ಕೈ ತೋಳು, ಕಾಲ್ಗೆಜ್ಜೆ, ಕೈ ಬಳೆ, ಎಂಗೇಜ್ಮೆಂಟ್ ರಿಂಗ್ ಟ್ಯಾಟೂ ಯುವಪೀಳಿಗೆ ಯಲ್ಲಿ ಭಾರೀ ಕ್ರೇಜ್ ಹುಟ್ಟುಹಾಕಿದೆ.

ಚಿತ್ರಶ್ರೀ ಹರ್ಷ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಲೈಫ್ ಸ್ಟೈಲ್

ಪಕ್ಷಿ ಪರಿಚಯ | ಬೇಲಿ ಚಟಕ

Published

on

ಫೋಟೋ : ಭಗವತಿ‌ ಎಂ.ಅರ್ / ಗಂಡು ಬೇಲಿ ಚಟಕ

ಬೇಲಿ ಚಟಕವು (Pied Bush chat) ಗುಬ್ಬಚ್ಚಿಯಂತೆಯೇ ಸಣ್ಣ ಗಾತ್ರದ ಪಕ್ಷಿ. ಸಾಮಾನ್ಯವಾಗಿ ಬೇಲಿಗಳಲ್ಲಿ ಕುರುಚಲು ಗಿಡಗಳಿರುವ ಕಡೆ, ಬಾಲ ಕುಣಿಸುತ್ತಾ ಓಡಾಡುತ್ತಿರುತ್ತವೆ. ಮುಳ್ಳುಗಿಡಗಳ ತುದಿಯಲ್ಲಿ, ವಿರಳ ರೆಂಬೆಗಳಿರುವ ಗಿಡದ ತುದಿಯಲ್ಲಿ ಕೂತು ಬಾಲ ಕುಣಿಸುತ್ತಾ ಅತ್ತೀಂದಿತ್ತ ತಲೆಯನ್ನು ಅಲ್ಲಾಡಿಸುತ್ತಾ ಚಿಟಗುಡುತ್ತದೆ. ಸದಾ ಟುವಟಿಕೆಯಿಂದಿರುವ ಹಕ್ಕಿ ಇದು. ಇವೂ ಕೂಡ ಕೀಟಾಹಾರಿ ಹಕ್ಕಿಗಳ ಸಾಲಿಗೆ ಸೇರುತ್ತವೆ. ಹಾಗಾಗಿಯೇ ಪೊದೆಗಳಿರುವಲ್ಲಿ, ಹೆಚ್ಚಾಗಿ ನೆಲದ ಮೇಲೆ ಆಹಾರ ಹುಡುಕುತ್ತಾ ಇರುತ್ತವೆ.

ಹೆಣ್ಣು ಬೇಲಿ ಚಟಕ

ಗಂಡು ಬೇಲಿಚಟಕದ ಮೈಯ ಹೆಚ್ಚು ಭಾಗ ಕಪ್ಪು ಬಣ್ಣದಾಗಿದ್ದು, ರೆಕ್ಕೆಯ ಮೇಲೆ, ಕೆಳ ಹೊಟ್ಟೆಯ ಭಾಗ ಬಿಳಿಯ ಬಣ್ಣದಾಗಿರುತ್ತವೆ. ನೋಡಲು ಸಪೂರವಾಗಿದ್ದು, ಮೋಟು ಬಾಲ ಹೊಂದಿದೆ. ಪಕ್ಷಿ ಲೋಕದಲ್ಲಿ ಸಾಮಾನ್ಯವಾಗಿ ಗಂಡುಗಳೇ ಹೆಚ್ಚು ಸುಂದರ. ಆದರೆ ಹೆಣ್ಣು ಬೇಲಿಚಟಕವು ಗಂಡಿಗಿಂತ ನೋಡಲು ಮುದ್ದಾಗಿರುತ್ತವೆ.ಮೈ ಪೂರಾ ಕಂದು ಬಣ್ಣದಾಗಿದ್ದು, ಬಾಲದ ಭಾಗ ಇಟ್ಟಿಗೆಯ ಬಣ್ಣವಿರುತ್ತದೆ. ಸಾಮಾನ್ಯವಾಗಿ ಸಿಗುವ ಈ ಹಕ್ಕಿ ಎನ್ನುವ ಕಾರಣಕ್ಕೆ ಬಹುತೇಕರ, ಛಾಯಾಗ್ರಾಹಕರ ಅವಜ್ಞೆಗೆ ಗುರಿಯಾಗಿರುವ ಇವು ತನ್ನ ಪಾಡಿಗೆ ಊರೂರು ತಿರುಗುತ್ತಾ ಇರುತ್ತವೆ!

ಭಗವತಿ ಎಂ.ಆರ್
ಛಾಯಾಗ್ರಾಹಕಿ, ಕವಯಿತ್ರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಲೈಫ್ ಸ್ಟೈಲ್

ಗಣೇಶ ಬಂದ ನೈಲ್ ಆರ್ಟ್ ಅಲ್ಲೂ ಕ್ರಿಯೇಟಿವಿಟಿ ಕಂಡ..!

Published

on

ಗಣೇಶ ಹಬ್ಬದ ಸಡಗರದಲ್ಲಿ ಮೈಮರೆತಿರರುವ ಹೆಂಗಳೆಯರ ಸಂಭ್ರಮ ಕ್ಕೆ ಸಾಥ್ ನೀಡಲು ಈ ಬಾರಿ ವಿಶೇಷ ನೈಲ್ ಆರ್ಟ್ ಒಂದು ಗರಿಗೆದರಿದೆ. ಗಣೇಶ ಹಬ್ಬದ ಸಂಭ್ರಮಾಚರಣೆ ಮತ್ತಷ್ಟು ರಂಗು ತುಂಬಲು”ಗಣೇಶ ನೈಲ್ ಆರ್ಟ್” ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.

ಪ್ರತಿ ಹಬ್ಬಕ್ಕೂ ಒಂದೊಂದು ಬಗೆಯ ಹೊಸ ಟ್ರೆಂಡ್ ಸೃಷ್ಟಿಸುವ ನೈಲ್ ಆರ್ಟ್ ತಗ್ಙರು, ಗಣೇಶ ಸ್ಟಿಕರ್ ಬಳಸಿ ಹೊಸಾ ನೈಲ್ ಆರ್ಟ್ ಟ್ರೆಂಡ್ ಮಾಡಿದ್ದಾರೆ.

ಮಕ್ಕಳು, ಕಾಲೇಜು ಕನ್ಯೆಯರು, ಮಹಿಳೆಯರು ಸೇರಿದಂತೆ ಎಲ್ಲಾ ವಯೋಮಾನದವರಿಗೂ ಒಪ್ಪುವಂತಿದ್ದು, ಮಾರುಕಟ್ಟೆಯಲ್ಲಿ ಈ ಗಣೇಶ ನೈಲ್ ಆರ್ಟ್ ಭಾರೀ ಬೇಡಿಕೆ ಗಿಟ್ಟಿಸಿಕೊಂಡಿದೆ. ನಿಮ್ಮ ಫೇವರಿಟ್ ನೈಲ್ ಕಲರ್ಗೆ ಮ್ಯಾಚ್ ಆಗುವ ಗಣೇಶ ಸ್ಟಿಕರ್ ಬಳಸಿ ಗಣೇಶ ಚತುರ್ಥಿ ಸಂಭ್ರಮ ಕ್ಕೆ ನಿಮ್ಮ ಕ್ರಿಯಾತ್ಮಕತೆಯ ಲೇಪನ ನೀಡಿ.

ಕೇವಲ ಸ್ಟಿಕರ್ಗಷ್ಟೇ ಸೀಮಿತವಾಗಿರದೆ, ನೈಲ್ ಆರ್ಟ್ ಪೆನ್ ಮೂಲಕ, ವಿಫ್ನ ನಿವಾರಕ  ಗಣೇಶನ ಹಲವಾರು ಭಂಗಿಗಳಲನ್ನು ಕಣ್ಣು ಕೋರೈಸುವ ರೀತಿಯಲ್ಲಿ ರಚಿಸಲಾಗಿದೆ.

ಚಿತ್ರಶ್ರೀ ಹರ್ಷ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Trending