Connect with us

ಲೈಫ್ ಸ್ಟೈಲ್

‘ಹಕ್ಕಿ ಪುಕ್ಕ’ದ ಹೊಸ ಪ್ರತಿಭೆ ಈ ಚಂದನ್..!

Published

on

ಶಿರಸಿ ಅರಣ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿ ಚಂದನ್ ಸಿ. ಇವರಿಗೆ ಪಕ್ಷಿ ವೀಕ್ಷಣೆ ಬರಿ ಹವ್ಯಾಸವಲ್ಲ.ಇದು ಅವರಿಗೆ ಒಂದು ಹುಚ್ಚಾಗಿ, ಅವರ ಜೀವನದ ಒಂದು ಅಂಗವಾಗಿ ಮಾರ್ಪಟ್ಟಿದೆ. ನಾನು ಚಿಕ್ಕವನಾಗಿದ್ದನಿಂದಲೂ ಪಕ್ಷಿಗಳ ಹೆಸರು ತಿಳಿದುಕೊಳ್ಳುವುದು ಎಂದರೆ ಬಹು ಪ್ರಿಯ.ಅದು ಗಿಳಿಯಾಗಲಿ, ಕೋಗಿಲೆಯಗಲಿ, ಮೈನಾ ಮತ್ತು ಮುಂತಾದವು ಆಗಲೇ ನನ್ನ ಆಸಕ್ತಿ ಪ್ರವೇಶಿಸಿದವು.ಆದರೆ ನಾನು ಅರಣ್ಯ ಕಾಲೇಜಿಗೆ ಸೇರಿದ ಮೇಲೆ ನನಗೆ ಪಕ್ಷಿವೀಕ್ಷಣೆ ಎಂಬುದು ಪ್ರಖರವಾಗಿ ಬೆಳೆದು ಜೀವನದ ಅವಿಭಾಜ್ಯ ಅಂಗವಾಗಿತು. ಸೀನಿಯರ್ಸ್ ಮತ್ತು ಪ್ರಾಧ್ಯಾಪಕರು ಪ್ರೋತ್ಸಾಹ ಇದಕ್ಕೆ ಕಾರಣವಾಗಿದೆ‌ ಎನ್ನುತ್ತಾರೆ ಚಂದನ್.

ನನ್ನ ಪಕ್ಷಿ ವೀಕ್ಷಣೆಯ ಕುತೂಹಲ ಶುರುವಾದದ್ದು ಕುಟ್ರಕ್ಕಿ (White checked barbet)ಯಿಂದ. ಈ ಪಕ್ಷಿಯು ಎತ್ತರದ ಮರಗಲ್ಲಿ ಕುಳಿತು ಕುಟ್ರು- ಕುಟ್ರು ಎಂದು ಜೋರಾಗಿ ಶಬ್ದ ಮಾಡುವುದನ್ನು ನಾನು ಮೊದಲು ಗಮನಿಸಿದ್ದೆ ಮತ್ತು ನನ್ನ ಪಕ್ಷಿವಿಕ್ಷಣೆಗೆಂದು ಕರೆದೊಯ್ದು ನನ್ನ ಸೀನಿಯರ್ಸ್ ಅವರಲ್ಲಿ ಈ ಬಗ್ಗೆ ಕೇಳಿ ತಿಳಿದಿದ್ದೆ.ಅಂದಿನಿಂದ ನಾನು ಸುಮಾರು ಒಂದೂವರೆ ತಿಂಗಳು ಪ್ರತಿದಿನ ಕುಟ್ರು- ಕುಟ್ರು ಎಂಬ ಶಬ್ದ ಕೇಳಲು ಸಾಧ್ಯವಾಯತೆ ಹೊರತು ಆ ಪಕ್ಷಿಯನ್ನು ನೋಡಲು ಸಾಧ್ಯವಾಗಿರಲಿಲ್ಲ. ಒಂದೂವರೆ ತಿಂಗಳ ನಂತರ ಆ ಪಕ್ಷಿಯನ್ನು ನೋಡಿದಾಗ ಆದ ಆನಂದ ಹೇಳತೀರದು ಎನ್ನುತ್ತಾರೆ ಚಂದನ್.ಈಗ ಸುಮಾರು 326 ಪಕ್ಷಿಗಳನ್ನು ಗುರುತಿಸುವ ಸಾಮರ್ಥ್ಯವನ್ನು ಇವರು ಗಳಿಸಿದ್ದಾರೆ.

ಶಿರಸಿ, ಜೋಗಫಾಲ್ಸ್, ತರೀಕೆರೆ, ಭದ್ರಾ, ಹುಲಿ ಸಂರಕ್ಷಿತ ಪ್ರದೇಶ, ಗುಡವಿ ಪಕ್ಷಿಧಾಮ, ಅತ್ತಿವೇರಿ ಪಕ್ಷಿಧಾಮ, ಕೈಗಾ, ಚಿತ್ರದುರ್ಗ, ಕಡೂರು, ದಾವಣಗೆರೆ, ಚೆನ್ನಗಿರಿ ಮತ್ತು ಚಿಕ್ಕಮಂಗಳೂರು ಮುಂತಾದೆಡೆ ಸ್ನೇಹಿತರು ಮತ್ತು ಸೀನಿಯರ್ಸಗಳೊಂದಿಗೆ ಸುತ್ತಾಡಿ ಪಕ್ಷಿ ವೀಕ್ಷಣೆಯನ್ನು ಮಾಡಿದ್ದಾರೆ. ಶಿರಸಿ ಬರ್ಡ್ಸ್ ಎಕ್ಸ್ಪದೇಶನ್, ಕೈಗಾ ಬರ್ಡ್ಸ್ ಮ್ಯಾರಥನ್, ಹಸಿರು ಪಯಣ ಮತ್ತು ಚಿಣ್ಣರ ವನದರ್ಶನ ಮುಂತಾದ ಕಾರ್ಯಕ್ರಮ ಹಾಗೂ ಚಟುವಟಿಕೆಗಳಲ್ಲಿ ಪಾಲ್ಗೊಂಡು ಪಕ್ಷಿಯ ಕುರಿತಾಗಿ ಕಲಿತಿದ್ದಾರೆ – ತಮ್ಮ ಪಕ್ಷಿ ಜ್ಞಾನವನ್ನು ಬರವಣಿಗೆಯ ಮೂಲಕ ಹಂಚಿಕೊಂಡಿದ್ದಾರೆ.

ಚಂದನ್ ಅವರ ಫೋಟೋಗ್ರಫಿ ನೋಡಲು ಕೆಳಗಿರುವ ಅವರ ಫೇಸ್ ಬುಕ್ ಪ್ರೊಫೈಲ್ ಲಿಂಕ್ ಮೇಲೆ ಕ್ಲಿಕ್ ಮಾಡಿ. (Chandan c Nehwal)

https://www.facebook.com/nehwalchandan

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಲೈಫ್ ಸ್ಟೈಲ್

ಕಿವಿಯಲ್ಲಿ ಫ್ಲವರ್ ; ಟ್ಯಾಟೂ ಜಿವಲ್ಲೆರೀ ಟ್ರೆಂಡಿಂಗ್..!

Published

on

ತ್ತೀಚಿನ ಗ್ಲಾಮರ್ ಯುಗದಲ್ಲಿ,  ಇಂಸ್ಟಂಟ್ ಮತ್ತು ಅಚ್ಚರಿ ಹುಟ್ಟಿಸುವಂತಹ ಚಿತ್ರ ವಿಚಿತ್ರ ಟ್ರೆಂಡ್ ಗಳು ಇಂಸ್ಟಾಗ್ರಾಂ ಟ್ವಿಟ್ಟರ್, ಗಳಲ್ಲಿ ಸುದ್ದಿ ಮಾಡುತ್ತಿದೆ. ಹೆಣ್ಣು ಮಕ್ಕಳ ಆಭರಣ ಪ್ರೇಮ ಇಂದು ನಿನ್ನೆಯದಲ್ಲ. ಆಭರಣಕ್ಕೆ ಪರ್ಯಾಯ ಪದವೇ ಹೆಣ್ಣು ಅನ್ನುವಷ್ಟರ ಮಟ್ಟಿಗೆ ಹೆಂಗಳೆಯರ ಆಭರಣ ಪ್ರೀತಿ ಲೋಕಾರೂಢಿಯಲ್ಲಿ ಕಂಡು ಬರುತ್ತದೆ.

ಆದರೆ ಇತ್ತೀಚೆಗೆ ಕಂಡು ಬರುತ್ತಿರುವ ಫ್ಯಾಷನ್ ಟ್ರೆಂಡ್ ಗಳು ಈ ಲೋಕಾರೂಢಿಯ ನಾನ್ನುಡಿಯನ್ನು ಸುಳ್ಳಾಗಿಸಿದೆ. ಆಧುನಿಕ ಫ್ಯಾಷನ್ ಯುಗದಲ್ಲಿ, ಟ್ಯಾಟೂ ಕ್ರೇಜ್ ಹೆಚ್ಚಿದ್ದು, ದುಬಾರಿ
ಆಭರಣಗಳನ್ನು ಸೈಡಿಗೆ ಸೇರಿಸಿದೆ.

ಟ್ಯಾಟೂ ಜಿವಲ್ಲೆರೀ, ಸದ್ಯ ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಹಾಗೂ ಟ್ರೆಂಡ್ ಸೆಟ್ಟರ್ ಆಗಿ ಮಿಂಚುತ್ತಿದೆ. ಚಿನ್ನ ಬೆಳ್ಳಿ ವಜ್ರದ ಆಭರಣಗಳಿಗೆ ಸೆಡ್ಡು ಹೊಡೆದು ನಿಂತಿದೆ ಈ ನೂತನ ಟ್ಯಾಟೂ ಜಿವಲ್ಲೆರೀ ಟ್ರೆಂಡ್ !

ಕಿವಿಯಲ್ಲಿ ಮಿಂಚುವ ಕಿವಿ ಓಲೆಗಳು ಈ ಟ್ರೆಂಡ್ ಗೆ ವಾಶ್ ಔಟ್ ಆಗಿವೆ! ಕಿವಿಯ ಮೇಲೆ ಸುಂದರ ವಾಗಿ ಮೂಡಿ ಬರುತ್ತಿದೆ ಕಲರ್ಫುಲ್ ಫ್ಲವರ್ ಟ್ಯಾಟೂ.. ಬಣ್ಣದ ಹೂಗಳು, ಚಿಟ್ಟೆ, ಎಲೆ-ಬಳ್ಳಿ ಗಳು ಟ್ಯಾಟೂ ಇಯರ್ ಖಫ್ ಮತ್ತು ಇಯರ್ ರಿಂಗ್ ಗಳನ್ನು ರೀಪ್ಲೇಸ್ ಮಾಡಿರುವುದಂತೂ ಸತ್ಯ.

ಅಂತೆಯೇ, ಮೇಲ್ಕುತ್ತಿಗೆ, ಕೈ ತೋಳು, ಕಾಲ್ಗೆಜ್ಜೆ, ಕೈ ಬಳೆ, ಎಂಗೇಜ್ಮೆಂಟ್ ರಿಂಗ್ ಟ್ಯಾಟೂ ಯುವಪೀಳಿಗೆ ಯಲ್ಲಿ ಭಾರೀ ಕ್ರೇಜ್ ಹುಟ್ಟುಹಾಕಿದೆ.

ಚಿತ್ರಶ್ರೀ ಹರ್ಷ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಲೈಫ್ ಸ್ಟೈಲ್

ಪಕ್ಷಿ ಪರಿಚಯ | ಬೇಲಿ ಚಟಕ

Published

on

ಫೋಟೋ : ಭಗವತಿ‌ ಎಂ.ಅರ್ / ಗಂಡು ಬೇಲಿ ಚಟಕ

ಬೇಲಿ ಚಟಕವು (Pied Bush chat) ಗುಬ್ಬಚ್ಚಿಯಂತೆಯೇ ಸಣ್ಣ ಗಾತ್ರದ ಪಕ್ಷಿ. ಸಾಮಾನ್ಯವಾಗಿ ಬೇಲಿಗಳಲ್ಲಿ ಕುರುಚಲು ಗಿಡಗಳಿರುವ ಕಡೆ, ಬಾಲ ಕುಣಿಸುತ್ತಾ ಓಡಾಡುತ್ತಿರುತ್ತವೆ. ಮುಳ್ಳುಗಿಡಗಳ ತುದಿಯಲ್ಲಿ, ವಿರಳ ರೆಂಬೆಗಳಿರುವ ಗಿಡದ ತುದಿಯಲ್ಲಿ ಕೂತು ಬಾಲ ಕುಣಿಸುತ್ತಾ ಅತ್ತೀಂದಿತ್ತ ತಲೆಯನ್ನು ಅಲ್ಲಾಡಿಸುತ್ತಾ ಚಿಟಗುಡುತ್ತದೆ. ಸದಾ ಟುವಟಿಕೆಯಿಂದಿರುವ ಹಕ್ಕಿ ಇದು. ಇವೂ ಕೂಡ ಕೀಟಾಹಾರಿ ಹಕ್ಕಿಗಳ ಸಾಲಿಗೆ ಸೇರುತ್ತವೆ. ಹಾಗಾಗಿಯೇ ಪೊದೆಗಳಿರುವಲ್ಲಿ, ಹೆಚ್ಚಾಗಿ ನೆಲದ ಮೇಲೆ ಆಹಾರ ಹುಡುಕುತ್ತಾ ಇರುತ್ತವೆ.

ಹೆಣ್ಣು ಬೇಲಿ ಚಟಕ

ಗಂಡು ಬೇಲಿಚಟಕದ ಮೈಯ ಹೆಚ್ಚು ಭಾಗ ಕಪ್ಪು ಬಣ್ಣದಾಗಿದ್ದು, ರೆಕ್ಕೆಯ ಮೇಲೆ, ಕೆಳ ಹೊಟ್ಟೆಯ ಭಾಗ ಬಿಳಿಯ ಬಣ್ಣದಾಗಿರುತ್ತವೆ. ನೋಡಲು ಸಪೂರವಾಗಿದ್ದು, ಮೋಟು ಬಾಲ ಹೊಂದಿದೆ. ಪಕ್ಷಿ ಲೋಕದಲ್ಲಿ ಸಾಮಾನ್ಯವಾಗಿ ಗಂಡುಗಳೇ ಹೆಚ್ಚು ಸುಂದರ. ಆದರೆ ಹೆಣ್ಣು ಬೇಲಿಚಟಕವು ಗಂಡಿಗಿಂತ ನೋಡಲು ಮುದ್ದಾಗಿರುತ್ತವೆ.ಮೈ ಪೂರಾ ಕಂದು ಬಣ್ಣದಾಗಿದ್ದು, ಬಾಲದ ಭಾಗ ಇಟ್ಟಿಗೆಯ ಬಣ್ಣವಿರುತ್ತದೆ. ಸಾಮಾನ್ಯವಾಗಿ ಸಿಗುವ ಈ ಹಕ್ಕಿ ಎನ್ನುವ ಕಾರಣಕ್ಕೆ ಬಹುತೇಕರ, ಛಾಯಾಗ್ರಾಹಕರ ಅವಜ್ಞೆಗೆ ಗುರಿಯಾಗಿರುವ ಇವು ತನ್ನ ಪಾಡಿಗೆ ಊರೂರು ತಿರುಗುತ್ತಾ ಇರುತ್ತವೆ!

ಭಗವತಿ ಎಂ.ಆರ್
ಛಾಯಾಗ್ರಾಹಕಿ, ಕವಯಿತ್ರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಲೈಫ್ ಸ್ಟೈಲ್

ಗಣೇಶ ಬಂದ ನೈಲ್ ಆರ್ಟ್ ಅಲ್ಲೂ ಕ್ರಿಯೇಟಿವಿಟಿ ಕಂಡ..!

Published

on

ಗಣೇಶ ಹಬ್ಬದ ಸಡಗರದಲ್ಲಿ ಮೈಮರೆತಿರರುವ ಹೆಂಗಳೆಯರ ಸಂಭ್ರಮ ಕ್ಕೆ ಸಾಥ್ ನೀಡಲು ಈ ಬಾರಿ ವಿಶೇಷ ನೈಲ್ ಆರ್ಟ್ ಒಂದು ಗರಿಗೆದರಿದೆ. ಗಣೇಶ ಹಬ್ಬದ ಸಂಭ್ರಮಾಚರಣೆ ಮತ್ತಷ್ಟು ರಂಗು ತುಂಬಲು”ಗಣೇಶ ನೈಲ್ ಆರ್ಟ್” ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.

ಪ್ರತಿ ಹಬ್ಬಕ್ಕೂ ಒಂದೊಂದು ಬಗೆಯ ಹೊಸ ಟ್ರೆಂಡ್ ಸೃಷ್ಟಿಸುವ ನೈಲ್ ಆರ್ಟ್ ತಗ್ಙರು, ಗಣೇಶ ಸ್ಟಿಕರ್ ಬಳಸಿ ಹೊಸಾ ನೈಲ್ ಆರ್ಟ್ ಟ್ರೆಂಡ್ ಮಾಡಿದ್ದಾರೆ.

ಮಕ್ಕಳು, ಕಾಲೇಜು ಕನ್ಯೆಯರು, ಮಹಿಳೆಯರು ಸೇರಿದಂತೆ ಎಲ್ಲಾ ವಯೋಮಾನದವರಿಗೂ ಒಪ್ಪುವಂತಿದ್ದು, ಮಾರುಕಟ್ಟೆಯಲ್ಲಿ ಈ ಗಣೇಶ ನೈಲ್ ಆರ್ಟ್ ಭಾರೀ ಬೇಡಿಕೆ ಗಿಟ್ಟಿಸಿಕೊಂಡಿದೆ. ನಿಮ್ಮ ಫೇವರಿಟ್ ನೈಲ್ ಕಲರ್ಗೆ ಮ್ಯಾಚ್ ಆಗುವ ಗಣೇಶ ಸ್ಟಿಕರ್ ಬಳಸಿ ಗಣೇಶ ಚತುರ್ಥಿ ಸಂಭ್ರಮ ಕ್ಕೆ ನಿಮ್ಮ ಕ್ರಿಯಾತ್ಮಕತೆಯ ಲೇಪನ ನೀಡಿ.

ಕೇವಲ ಸ್ಟಿಕರ್ಗಷ್ಟೇ ಸೀಮಿತವಾಗಿರದೆ, ನೈಲ್ ಆರ್ಟ್ ಪೆನ್ ಮೂಲಕ, ವಿಫ್ನ ನಿವಾರಕ  ಗಣೇಶನ ಹಲವಾರು ಭಂಗಿಗಳಲನ್ನು ಕಣ್ಣು ಕೋರೈಸುವ ರೀತಿಯಲ್ಲಿ ರಚಿಸಲಾಗಿದೆ.

ಚಿತ್ರಶ್ರೀ ಹರ್ಷ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Trending