ರಾಜಕೀಯ
ಮೋದಿ ಟೀಂ ನ ರಾಜ್ಯ ಖಾತೆ ಸಚಿವರು ಮತ್ತು ಅವರ ಖಾತೆಗಳು
ಸುದ್ದಿದಿನ,ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಟೀಂ ರೆಡಿಯಾಗಿದೆ. ನಿನ್ನೆಯಷ್ಟೇ ಮೋದಿ ಸೇರಿ 58 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಅವರಲ್ಲಿ 24 ಸಂಸದರು ರಾಜ್ಯ ಖಾತೆ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. ಇದೀಗ ಆ ಎಲ್ಲಾ ಸಚಿವರಿಗೆ ಖಾತೆ ಹಂಚಿ ಜವಾಬ್ದಾರಿ ನೀಡಲಾಗಿದೆ.
ರಾಜ್ಯ ಖಾತೆ ಸಚಿವರು
- ಫಗನ್ ಸಿಂಗ್ – ರಾಜ್ಯ ಮಿನಿಸ್ಟ್ರಿ ಆಫ್ ಸ್ಟೀಲ್
- ಅಶ್ವಿನ್ ಕುಮಾರ್ ಚೌಬೆ – ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
- ಅರ್ಜುನ್ ರಾಮ್ ಮೇಘವಾಲ್ – ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಮತ್ತು ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಕೈಗಾರಿಗೆ ರಾಜ್ಯ ಖಾತೆ
- ಜನರಲ್ ವಿ.ಕೆ.ಸಿಂಗ್ – ರಸ್ತೆ ಸಾರಿಕೆ ಮತ್ತು ರಾಷ್ಟ್ರೀಯ ಹೆದ್ದಾರಿ ರಾಜ್ಯ ಖಾತೆ
- ಕೃಷ್ಣಪಾಲ್ ಗುರ್ಜರ್ – ಸಾಮಾಜಿ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ
- ರಾಮ್ ಸಾಹೇಬ್ ದಾದಾರಾವ್ – ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಖಾತೆ
- ಕಿಶನ್ ರೆಡ್ಡಿ – ರಾಜ್ಯ ಗೃಹ ಇಲಾಖೆ
- ಪುರುಷೋತ್ತಮ್ ರೂಪಾಲ : ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ
- ರಾಮ್ ದಾಸ್ ಅಠಾವಳೆ : ರಾಜ್ಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
- ಸಾಧ್ವಿ ನಿರಂಜನ್ ಜ್ಯೋತಿ : ಗ್ರಾಮೀಣಾಭಿವೃದ್ಧಿ ಸಚಿವಾಲಯದ ರಾಜ್ಯ ಸಚಿವ
- ಬಾಬುಲ್ ಸುಪ್ರಿಯೋ : ರಾಜ್ಯ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ
- ಡಾ.ಸಂಜೀವ್ ಕುಮಾರ್ ಬಾಲಿಯಾನ್: ಪಶುಸಂಗೋಪನೆ, ಹಾಲು, ಮೀನುಗಾರಿಕೆ ರಾಜ್ಯ ಖಾತೆ
- ಸಂಜಯ್ ಶಮರಾವ್ : ಮಾನವ ಸಂಪನ್ಮೂಲ ಅಭಿವೃದ್ಧಿ, ಸಂವಹನ ಸಚಿವಾಲಯ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ
- ಅನುರಾಗ್ ಸಿಂಗ್ ಠಾಕೂರ್ : ರಾಜ್ಯ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳು
- ಸುರೇಶ್ ಅಂಗಡಿ : ರೈಲ್ವೇ ಇಲಾಖೆಯ ರಾಜ್ಯ ಖಾತೆ
- ನಿತ್ಯಾನಂದ್ ರಾಯ್ : ರಾಜ್ಯ ಗೃಹ ವ್ಯವಹಾರಗಳ ರಾಜ್ಯ ಖಾತೆ
- ರತನ್ ಲಾಲ್ ಕಟಾರಿಯ – ಜಲಶಕ್ತಿ ಮತ್ತು ಸಾಮಾಜಿಕ ನ್ಯಾಯ ಸಬಲೀಕರಣ ರಾಜ್ಯ ಖಾತೆ
- ವಿ.ಮುರಳಿಧರನ್ – ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ, ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ
- ರೇಣುಕಾ ಸಿಂಗ್ ಸರೂತ್ – ಬುಡಕಟ್ಟು ಸಮುದಾಯಗಳ ರಾಜ್ಯ ಖಾತೆ
- ಸೋಮ ಪ್ರಕಾಶ್ – ವಾಣಿಜ್ಯ ಮತ್ತು ಕೈಗಾರಿಗೆ ರಾಜ್ಯ ಖಾತೆ
- ರಾಮೇಶ್ವರ್ ತೇರಿ – ಆಹಾರ ಮತ್ತು ಸಂಸ್ಕರಣಾ ಕೈಗಾರಿಕೆ ರಾಜ್ಯ ಖಾತೆ
- ಪ್ರತಾಪ್ ಚಂದ್ರ ಸಾರಂಗಿ – ಪಶುಸಂಗೋಪನೆ, ಡೈರಿ ಮೀನುಗಾರಿಗೆ ರಾಜ್ಯ ಸಚಿವ ಮತ್ತು ಅತಿ ಚಿಕ್ಕ, ಮದ್ಯಮ ಉದ್ಯಮಗಳ ರಾಜ್ಯ ಖಾತೆ
- ಕೈಲಾಶ್ ಚೌಧರಿ – ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವ
- ದೇಬಶ್ರೀ ಚೌಧರಿ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಖಾತೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದು ಚುನಾವಣಾ ಆಯೋಗ ಸಮಾವೇಶ
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.
ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.
ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243