Connect with us

ರಾಜಕೀಯ

ಜನತೆ ಮೇಲೆ ಸರ್ಕಾರಿ ಪ್ರಯೋಜಿತ ದಾಳಿಗಳು ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ, ಹುಬ್ಬಳ್ಳಿ : ಸಿಎಎ ಹಾಗೂ ಎನ್‌ಆರ್‌ಸಿ ಇವು ಅಸಂವಿಧಾನಿಕವಾದುವು, ಹಾಗಾಗಿ ಬಿಜೆಪಿ ಪಕ್ಷ ತಾವು ಮಾಡುತ್ತಿರುವ ತಪ್ಪಿಗೆ ಜನಬೆಂಬಲ ಪಡೆದು, ಅದನ್ನೇ ಸರಿ ಎಂದು ಸಾಬೀತುಪಡಿಸಲು ಸಾರ್ವಜನಿಕ ಸಭೆ, ಸಮಾರಂಭ ಮಾಡುತ್ತಿದೆ. ಈ ಕಾಯ್ದೆಯಿಂದಾಗಿ ಸಂವಿಧಾನದ ಮೂಲ ಆಶಯಗಳಾದ ಸಮಾನತೆ ಮತ್ತು ಜಾತ್ಯಾತೀತತೆಗೆ ಧಕ್ಕೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಗುರುವಾರ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ತಿಕ್ಕಿ ಸರ್ವಾಧಿಕಾರಿ ಆಡಳಿತ ಜಾರಿಯಲ್ಲಿದೆ. ದೇಶಾದ್ಯಂತ ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕರ ಮೇಲೆ ಸರ್ಕಾರಿ ಪ್ರಯೋಜಿತ ದಾಳಿಗಳು ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ. ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ. ಜನತೆ ಭಯದಲ್ಲಿ ದಿನ ದೂಡುವಂತಹ ಪರಿಸ್ಥಿತಿ ಇದೆ ಎಂದು ಕಿಡಿಕಾರಿದರು.

ಹಿಂಗಾರು ಮಳೆ ನಷ್ಟದಿಂದಾಗಿ ಸುಮಾರು 45 ತಾಲೂಕುಗಳು ಭೀಕರ ಬರ ಎದುರಿಸುತ್ತಿವೆ. ಈವರೆಗೆ ಬರಪರಿಹಾರಕ್ಕಾಗಿ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ. ರಾಜ್ಯದ ಪಾಲಿನ ಹಲವು ಅನುದಾನಗಳು ಬಂದಿಲ್ಲ. ಕೇಂದ್ರ ತಾನು ದಿವಾಳಿಯಾಗುವ ಜೊತೆಗೆ ರಾಜ್ಯಗಳನ್ನು ದಿವಾಳಿ ಎಬ್ಬಿಸುತ್ತಿದೆ. ಮುಂದಿನ ವರ್ಷದಲ್ಲಿ ನಮ್ಮ ರಾಜ್ಯದಿಂದ ಸಂಗ್ರಹವಾದ ವಿವಿಧ ತೆರಿಗೆಗಳಲ್ಲಿ ರಾಜ್ಯದ ಪಾಲಿನ ಅನುದಾನ ಕನಿಷ್ಠ ರೂ.5000 ಕೋಟಿ ಕಡಿತವಾಗಲಿದೆ. ಹೀಗಾದರೆ ಅಭಿವೃದ್ಧಿ ಕಾರ್ಯಗಳು ನಡೆಯುವುದಾದರೂ ಹೇಗೆ? ನನ್ನದೇ ಕ್ಷೇತ್ರದಲ್ಲಿ ಸಂಪುಟ ಅನುಮೋದನೆ ಪಡೆದ ರೂ.500 ಕೋಟಿ ವೆಚ್ಚದ ಕೆರೂರು ಏತ ನೀರಾವರಿ ಯೋಜನೆ ಹಣವಿಲ್ಲದೆ ಮೂಲೆಸೇರಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಈಗಲೂ ಮನಸ್ಸು ಮಾಡಿದರೆ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಬಹುದು. ಆದರೆ ಈ ಇಚ್ಛಾಶಕ್ತಿಯೇ ನಮ್ಮ‌ ಪ್ರಧಾನಿಗಳಲ್ಲಿ ಇಲ್ಲ. ಮಹದಾಯಿ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ ಒಂದೇ ಒಂದು ಮಾತಾದರೂ ಈಡೇರಿದೆಯೇ? ಎಂದು ಪ್ರಶ್ನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

Published

on

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್‌ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.

ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್‌ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಹೇಳಿಕೆ


  • ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.

            | ಸಚಿವ ದಿನೇಶ್ ಗುಂಡೂರಾವ್


ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending