Connect with us

ಕ್ರೀಡೆ

ಭಾರತ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಅಜಿತ್ ವಾಡೆಕರ್ ನಿಧನ

Published

on

ಸುದ್ದಿದಿನ ಡೆಸ್ಕ್ | ಮಾಜಿ ಭಾರತ ಕ್ರಿಕೆಟ್ ತಂಡದ ನಾಯಕ ಅಜಿತ್ ವಾಡೆಕರ್ ಅವರು ತೀವ್ರ ಅನಾರೋಗ್ಯದಿಂದ ನಿಧನ ಹೊಂದಿದರು.

77 ವರ್ಷದ ಅವರಿಗೆ ಪತ್ನಿ ರೇಖಾ, ಇಬ್ಬರು ಪುತ್ರರು ಮತ್ತು ಮಗಳು ಇದ್ದಾರೆ ವಾಡೆಕರ್ ದಕ್ಷಿಣ ಮುಂಬೈಯಲ್ಲಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ತಮ್ಮ ಆಕ್ರಮಣಕಾರಿ ಬ್ಯಾಟ್ಸ್ಮನ್ ಕೇವಲ 37 ಟೆಸ್ಟ್ ಪಂದ್ಯಗಳ ಹೊರತಾಗಿಯೂ ಭಾರತೀಯ ಕ್ರಿಕೆಟ್ನಲ್ಲಿ ಟ್ರೈಲ್ ಬ್ಲೇಜರ್ ಆಗಿದ್ದರು, ಭಾರತವನ್ನು 1971 ರಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ನ ಪಂದ್ಯದಲ್ಲಿ ಭಾರತ ಜಯಗಳಿಸುವಲ್ಲಿ ಇವರ ಪಾತ್ರ ಮುಖ್ಯವಾದುದು.

ವಾಡೆಕರ್ ಅವರ ಟೆಸ್ಟ್ ವೃತ್ತಿಜೀವನದಲ್ಲಿ 2,113 ರನ್ ಗಳಿಸಿದರು. ಅವರು ದೇಶದ ಮೊದಲ ODI ನಾಯಕರಾಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ಏಕಲವ್ಯ ಪ್ರಶಸ್ತಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : ಪ್ರತಿ ವರ್ಷದಂತೆ ಈ ವರ್ಷ ಸಹ 2018 ಹಾಗೂ ಹಿಂದಿನ ನಾಲ್ಕು ವರ್ಷಗಳಲ್ಲಿ ಅಸಾಧರಣ ಪ್ರತಿಭೆ ತೋರಿದ ಪುರುಷ/ಮಹಿಳಾ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಿ ಸನ್ಮಾನಿಸಲು ತೀರ್ಮಾನಿಸಿಲಾಗಿದೆ.

ಇದರೊಂದಿಗೆ ತರಬೇತುದಾರರಾಗಿ ನಿರಂತರವಾಗಿ ಸೇವೆ ಸಲ್ಲಿಸಿದ ಹಿರಿಯ ಹಿರಿಯ ಕ್ರೀಡಾಪಟು/ತರಬೇತುದಾರರು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸನ್ಮಾನಿಸಲು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ತೀರ್ಮಾನಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜೀವಮಾನ ಸಾಧನೆ ಪ್ರಶಸ್ತಿಗೆ http://serviceonline.gov.in/Karnataka ಹಾಗೂ ಏಕಲವ್ಯ ಪ್ರಶಸ್ತಿಗೆ www.karnataka.gov.in/dyes ವೆಬ್ ವಿಳಾಸದ ಮೂಲಕ ಜೂನ್ 30 ರೊಳಗಾಗಿ ಆನ್‍ಲೈನ್ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಆನ್‍ಲೈನ್ ಅರ್ಜಿ ಆಹ್ವಾನ

Published

on

ಸುದ್ದಿದಿನ, ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯಡಿ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ಕ್ರೀಡಾ ಪಟುಗಳು ಕಚೇರಿಯ ಜಾಲತಾಣ http://serviceonline.gov.in/karantaka ಮೂಲಕ ಆನ್‍ಲೈನ್‍ನಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮಾಹಿತಿಗಾಗಿ ದೂ.ಸಂ.: 08182-223328ನ್ನು ಸಂಪರ್ಕಿಸುವುದು.

Continue Reading

ಕ್ರೀಡೆ

‘ಕರ್ನಾಟಕ ಕ್ರೀಡಾ ರತ್ನ’ ಪ್ರಶಸ್ತಿಗೆ ಆನ್‍ಲೈನ್ ಅರ್ಜಿ ಆಹ್ವಾನ

Published

on

ಸುದ್ದಿದಿನ,ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018ನೇ ಸಾಲಿನ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ಕ್ರೀಡಾ ಪಟುಗಳು ಕಚೇರಿಯ ಜಾಲತಾಣ http://serviceonline.gov.in/karantaka ಮೂಲಕ ಆನ್‍ಲೈನ್‍ನಲ್ಲಿ ಜೂನ್ 30ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮಾಹಿತಿಗಾಗಿ ದೂ.ಸಂ.: 08182-223328ನ್ನು ಸಂಪರ್ಕಿಸುವುದು.

Continue Reading
Advertisement

Trending