Connect with us

ಕ್ರೀಡೆ

ಆರೋಪ ಮುಕ್ತ ಬೆನ್ ಸ್ಟೋಕ್ ಮರಳಿ ಟೀಂಗೆ

Published

on

ಸುದ್ದಿದಿನ ಡೆಸ್ಕ್ | ಇಂಗ್ಲೆಂಡ್ ಕ್ರಿಕೆಟಿಗ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಬೆನ್ ಸ್ಟೋಕ್ಸ್ ಅವರು ಆಗಸ್ಟ್‌ 18 ರಿಂದ ನಡೆಯುವ ಮೊದಲೇ ಮೂರನೆಯ ಟೆಸ್ಟ್‌ನಲ್ಲಿ ಆಡಲು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇವರು ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆ ನಡೆಸಿದ ಆರೋಪವನ್ನು ಹೊತ್ತಿದ್ದರು. ಈ ಆರೋಪ‌ ಮುಕ್ತವಾಗುತ್ತಿದ್ದಂತೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಬೆನ್ ಸ್ಟೋಕ್ಸ್ ಅವರನ್ನು 11ತಿಂಗಳುಗಳ ವಿಚಾರಣೆ ನಡೆಸಿ ನಂತರ ಅವರನ್ನು ಅಪರಾಧಿ ಎಂದು ಪರಿಗಣಿಸುವುದು ಕಷ್ಟವೆಂದು ನ್ಯಾಯಾಲಯವು ಆದೇಶ ನೀಡಿದ ನಂತರ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ದಾವಣಗೆರೆ ಕ್ರೀಡಾ ವಸತಿ ನಿಲಯದ ಖೋ-ಖೋ ತಂಡಕ್ಕೆ ತೃತೀಯ ಸ್ಥಾನ

Published

on

ಸುದ್ದಿದಿನ ,ದಾವಣಗೆರೆ : ಜ.3 ರಿಂದ 05 ವರೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಅಶೋಕ ಕ್ರೀಡಾ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಆಹ್ವಾನಿತ ಹೊನಲು-ಬೆಳಕಿನ ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ದಾವಣಗೆರೆ ಕ್ರೀಡಾ ವಸತಿ ನಿಲಯದ ಪುರುಷರ ಖೋ-ಖೋ ತಂಡವು ತೃತೀಯ ಸ್ಥಾನ ಪಡೆದಿದೆ.

ಬಾಷಿತ್ ಆಲಿ, ಭರತ್ ಕುಮಾರ್, ಬಾಹುಬಲಿ, ವೀರೇಶ, ಲಕ್ಷ್ಮಣ, ಮಹಮ್ಮದ್ ತಾಸೀನ್, ಅರ್ಜುನ, ಕೃಷ್ಣ, ರಂಗಸ್ವಾಮಿ, ಪುನೀತ್ ಕುಮಾರ್ ಇವರುಗಳು ಉತ್ತಮ ಪ್ರದರ್ಶನ ನೀಡಿರುತ್ತಾರೆ. ಅರುಣ್ ಜೆ. ಬಿ. ಇವರು ಪಂದ್ಯಾವಳಿಯ ಬೆಸ್ಟ್ ಆಲ್‍ರೌಂಡರ್ ಪ್ರಶಸ್ತಿ ಪಡೆದಿರುತ್ತಾರೆ. ಕ್ರೀಡಾಪಟುಗಳು ಇಲಾಖೆಯ ತರಬೇತುದಾರರಾದ ಜೆ.ರಾಮಲಿಂಗಪ್ಪ ಇವರ ಬಳಿ ತರಬೇತಿ ಪಡೆದಿದ್ದರು.

ವಿಜೇತ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ ಶ್ರೀನಿವಾಸ, ಅಧೀಕ್ಷಕರಾದ ಗ್ರೇಸಿ ಕೆ, ಇಲಾಖೆಯ ತರಬೇತುದಾರರಾದ ಜೆ.ರಾಮಲಿಂಗಪ್ಪ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಗೆ ಜಿಲ್ಲಾ ಕ್ರೀಡಾಪಟುಗಳು ಆಯ್ಕೆ

Published

on

ಸುದ್ದಿದಿನ,ದಾವಣಗೆರೆ : ರಾಷ್ಟ್ರ ಮಟ್ಟದ ಎಸ್.ಜಿ.ಎಫ್.ಐ. ಹಾಗೂ ಖೇಲೋ ಇಂಡಿಯಾ ಖೋ-ಖೋ ಪಂದ್ಯಾವಳಿಗಳು ಉತ್ತರ ಪ್ರದೇಶದ ಡಿಯೋರಿಯಾ ಮತ್ತು ಅಸ್ಸಾಂ ರಾಜ್ಯದ ಗೌವಹಟಿಯಲ್ಲಿ ನಡೆಯಲಿದ್ದು ಈ ಪಂದ್ಯಾವಳಿಗಳಿಗೆ ಜಿಲ್ಲಾ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ.

ರಾಷ್ಟ್ರ ಮಟ್ಟದಲ್ಲಿ ಜ.03 ರಿಂದ ಜ.07 ರ ವರೆಗೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆಯುವ 17 ವರ್ಷದೊಳಗಿನ ಬಾಲಕರ ಖೋ-ಖೋ ಪಂದ್ಯಾವಳಿ ಹಾಗೂ ಜ.15 ರಿಂದ ಜ.19 ರ ವರೆಗೆ ಅಸ್ಸಾಂ ರಾಜ್ಯ ಗೌವಹಟಿಯಲ್ಲಿ ನಡೆಯುವ 3ನೇ ರಾಷ್ಟ್ರ ಮಟ್ಟದ 17 ವರ್ಷದೊಳಗಿನ ಖೇಲೋ ಇಂಡಿಯಾ ಖೋ-ಖೋ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ರಾಜ್ಯ ಬಾಲಕರ ತಂಡಕ್ಕೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಾದ ಎಸ್. ವೇಣುಗೋಪಾಲ್, ಗಜಾ ಚೌಹಾಣ್, ದರ್ಶನ್ ತಿಗಡಿ, ಲಂಕೇಶ, ಆಸೀಫ್ ಕನ್ನೂರ್ ಮತ್ತು ಶರೀಷ್ ಲಾಲಾಸಾಬ್ ಯಲಿಗಾರ್ ಇವರುಗಳು ಆಯ್ಕೆಯಾಗಿರುತ್ತಾರೆ.

ಈ ಕ್ರೀಡಾಪಟುಗಳಿಗೆ ಇಲಾಖೆಯ ತರಬೇತುದಾರರಾದ ಜೆ.ರಾಮಲಿಂಗಪ್ಪ ಇವರು ತರಬೇತಿ ನೀಡಿದ್ದಾರೆ. ಪಂದ್ಯಾವಳಿಗಳಲ್ಲಿ ರಾಜ್ಯ ತಂಡವು ಉತ್ತಮ ಸಾಧನೆ ಮಾಡಿ, ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತರಲೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಶ್ರೀನಿವಾಸ್ ಹಾಗೂ ಇಲಾಖೆಯ ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ರಾಜ್ಯ ಖೋ-ಖೋ ತಂಡಕ್ಕೆ ಮಹಮ್ಮದ್ ತಾಸೀನ್ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ : ಡಿ. 26 ರಿಂದ 30 ರವರೆಗೆ ಚತ್ತೀಸ್‍ಗಡ ರಾಜ್ಯದ ರಾಯಪುರದಲ್ಲಿ ನಡೆಯುವ 53ನೇ ಸೀನಿಯರ್ ನ್ಯಾಷನಲ್ ಖೋ-ಖೋ ಚಾಂಪಿಯನ್‍ಷಿಪ್‍ನಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ಪುರುಷರ ಖೋ-ಖೋ ತಂಡಕ್ಕೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುವಾದ ಮಹಮ್ಮದ್ ತಾಸೀನ್ ಇವರು ಆಯ್ಕೆಯಾಗಿರುತ್ತಾರೆ.

ಈ ಕ್ರೀಡಾಪಟುವು ಇಲಾಖೆಯ ತರಬೇತುದಾರರಾದ ಜೆ.ರಾಮಲಿಂಗಪ್ಪ ಇವರ ಬಳಿ ತರಬೇತಿ ಪಡೆಯುತ್ತಿದ್ದಾರೆ.ಕರ್ನಾಟಕ ರಾಜ್ಯ ಪುರುಷರ ಖೋ-ಖೋ ತಂಡವು ಉತ್ತಮ ಸಾಧನೆ ಮಾಡಿ, ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತರಲೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ. ಶ್ರೀನಿವಾಸ್, ಇಲಾಖೆಯ ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Trending