Connect with us

ಕ್ರೀಡೆ

ಗಡ್ಡದ ಕುರಿತು ಅಭಿಮಾನಿ ಕೇಳಿದ ಪ್ರಶ್ನೆಗೆ ವಿರಾಟ್ ನೀಡಿದ ಉತ್ತರವೇನು ಗೊತ್ತಾ ?

Published

on

ಸುದ್ದಿದಿನ ಡೆಸ್ಕ್: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸ್ಪೋಟಕ ಆಟದ ಜತೆಗೆ ತಮ್ಮ ಸ್ಟೈಲಿಸ್ ಮ್ಯಾನರಿಸಮ್ ಮೂಲಕ ಕೂಡ ಹೆಚ್ಚು ಜನಪ್ರಿಯ. 29 ವರ್ಷ ವಯಸ್ಸಿನ ವಿರಾಟ್ ಕೊಹ್ಲಿ ಗೆ ಭಾರತ ಅಷ್ಟೇ ಅಲ್ಲ ಪ್ರಪಂಚದ ವಿವಿಧೆಡೆ ಅಭಿಮಾನಿಗಳಿದ್ದಾರೆ. ವಿರಾಟ್ ಕೊಹ್ಲಿ ಏನೇ ಮಾಡಿದರೂ ಅದನ್ನು ಲಕ್ಷಾಂತರ ಮಂದಿ ಅನುಸರಿಸುತ್ತಾರೆ. ವಿರಾಟ್ ಕೊಹ್ಲಿ ಚಲನವಲನ ಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಈಚೆಗೆ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿ ಗಡ್ಡದ ಕುರಿತು ಸಾಮಾಜಿಕ ಜಾಲತಾಣ ಇನ್ಸ್ಟಾ ಗ್ರಾಮ್ ಪ್ರಶ್ನೆ ಕೇಳಿದ್ದು, ಸ್ವಾರಸ್ಯಕರ ಚರ್ಚೆಗೆ ಕಾರಣವಾಗಿದೆ. ವಿರಾಟ್ ನೀವು ಯಾವಾಗ ನಿಮ್ಮ ದಾಡಿ ಶೇವಿಂಗ್ ಮಾಡಿಸುತ್ತೀರ ಎಂದು ಪ್ರಶ್ನೆ ಕೇಳಿದ್ದು, ಇದಕ್ಕೆ ಕೊಹ್ಲಿ ಉತ್ತರಿಸಿ, ನನ್ನ ವ್ಯಕ್ತಿತ್ವಕ್ಕೆ ಗಡ್ಡ ಹೊಂದಾಣಿಕೆ ಆಗುತ್ತಿದೆ. ಆದ್ದರಿಂದ ನಾನು ಸದ್ಯ ಗಡ್ಡ ತೆಗೆಯುವುದಿಲ್ಲ ಎಂದು ಹೇಳಿದ್ದಾರೆ. ಇದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ. ಇದಕ್ಕೆ ಸ್ವತಃ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ದೇಶದ ಜಾಹಿರಾತು ಕಂಪನಿಗಳಿಗೆ ಗೆಲ್ಲುವ ಕುದರೆಯಂತೆ ಕಾಣುವ ವಿರಾಟ್ ಕೊಹ್ಲಿ ಎಂದರೆ ಕೋಟಿ ರೂಪಾಯಿ ಗಟ್ಟಲೆ ಬಂಡವಾಳ ಹೂಡಲು ಸಿದ್ಧರಿದ್ದಾರೆ. ಇದಕ್ಕೆ ವಿರಾಟ್ ಕೊಹ್ಲಿ ಯ ಸ್ಟೈಲಿಸ್ ಮ್ಯಾನರಿಸಮ್ ಕೂಡ ಪೂರಕವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ದಾವಣಗೆರೆ | ವಾರ್ಷಿಕ ಪೊಲೀಸ್ ಕ್ರೀಡಾಕೂಟ-2019

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾ ಪೊಲೀಸ್ ವತಿಯಿಂದ ಡಿ.09 ರಿಂದ 11 ರಂದು ರವರೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನ, ಡಿ.ಎ.ಆರ್, ದಾವಣಗೆರೆ ಇಲ್ಲಿ ವಾರ್ಷಿಕ ಪೊಲೀಸ್ ಕ್ರೀಡಾಕೂಟ-2019 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಡಿ.9 ರ ಬೆಳಿಗ್ಗೆ 8 ಗಂಟೆಗೆ ಇದೇ ಸ್ಥಳದಲ್ಲಿ ಉದ್ಘಾಟನಾ ಕಾರ್ಯಕ್ರಮವಿದ್ದು, ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಶರಣಪ್ಪ.ವಿ.ಹಲಸೆ ಉದ್ಘಾಟಿಸುವರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಡಿ.11 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಗಿದ್ದು, ಮುಖ್ಯ ಅತಿಥಿಗಳಾಗಿ ಪೂರ್ವವಲಯದ ಪೊಲೀಸ್ ಮಹಾನಿರೀಕ್ಷಕರಾದ ಅಮ್ರಿತ್ ಪಾಲ್ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ವೇಣುಗೋಪಾಲ್ ಗೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ : ನಗರದ ಕ್ರೀಡಾ ವಸತಿ ನಿಲಯದ ಕ್ರೀಡಾಪಟುವಾದ ವೇಣುಗೋಪಾಲ್ ಎಸ್ ಇವರು ಇತ್ತೀಚೆಗೆ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷದೊಳಗಿನ ಬಾಲಕರ ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ಸ್ ಸ್ಪರ್ಧೆಯ 400 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

ಡಿ.04 ರಿಂದ 08 ರವರೆಗೆ ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗೆ ರಾಜ್ಯ ತಂಡದಿಂದ ಇವರು ಆಯ್ಕೆಯಾಗಿರುತ್ತಾರೆ. ಈ ಕ್ರೀಡಾಪಟುವು ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರಲೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ಶ್ರೀನಿವಾಸ್ ಮತ್ತು ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ಕಬಡ್ಡಿ ಪಂದ್ಯಾವಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ಗೆ ದ್ವಿತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಕ್ರೀಡಾಪಟುಗಳಿಗೆ ಪ್ರಾಂಶುಪಾಲರಾದ ತೂ.ಕ.ಶಂಕರಯ್ಯ, ವ್ಯವಸ್ಥಾಪಕ ಎಸ್.ಆರ್ ಭಜಂತ್ರಿ, ಪ್ರೊಪೆಸರುಗಳಾದ ಭೀಮಣ್ಣ ಸುಣಗಾರ್, ರುದ್ರಪ್ಪ, ಗೌರಮ್ಮ, ವಿರೇಶ, ಡಾ.ಮಂಜಣ್ಣ ಹಾಗೂ ಡಾ.ಶಾಂತಕುಮಾರಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Trending