Connect with us

ದಿನದ ಸುದ್ದಿ

ನನಸಾಗುವುದೇ ಬಾಪೂಜಿ ಕಂಡ ಗ್ರಾಮೀಣಾಭಿವೃದ್ಧಿಯ ಕನಸು..?

Published

on

  • ಕುಮಾರಸ್ವಾಮಿ.ವಿ.ಕೆ

ಭಾರತ ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳು ನಮ್ಮ ದೇಶದ ಹೃದಯವಿದ್ದಂತೆ. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಸುಮಾರು 70% ಮಂದಿ ಇಂದು ಗ್ರಾಮೀಣ ಭಾಗಗಳಲ್ಲಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಹಳ್ಳಿ ಮಂದಿಯ ಸಂಸ್ಕøತಿ, ಆಚಾರ – ವಿಚಾರಗಳು ವಿಶಿಷ್ಟ, ಆಹಾರ, ವಿಹಾರ, ಉಡುಗೆ-ತಿಡುಗೆ ಹೀಗೆ ಎಲ್ಲವೂ ವಿಭಿನ್ನ. ಪ್ರಸ್ತುತ ಜಗತ್ತನ್ನ ಮೊದಲುಗೊಂಡು ನಮ್ಮ ಹಿಂದೂಸ್ಥಾನವನ್ನೂ ಕಿತ್ತು ತಿನ್ನುತ್ತಿರುವ ವಿಷಕ್ರಿಮಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಇಂದು ನಿಜಕ್ಕೂ ಹಳ್ಳಿಗರ ಸಂಘಟನಾತ್ಮಕ ವರ್ತನೆ ಶ್ಲಾಘನೀಯ.

ಕೊರೋನಾ ವಿರುದ್ಧದ ಹೋರಾಟದಲ್ಲಿ ಇಂದು ಅತೀ ಹೆಚ್ಚು ಇಕ್ಕಟ್ಟಿಗೆ ಸಿಲುಕುತ್ತಿರುವುದು ನಗರ ವಾಸಿಗಳೇ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಸಂಬಂಧವಾಗಿ ನಗರ ವಾಸಿಗಳಲ್ಲಿಲ್ಲದ ಬುದ್ಧಿಮತ್ತೆ, ಪ್ರಜ್ಞೆ, ಕಾಲಕ್ಕೆ ತಕ್ಕಂತ ಜ್ಞಾನ ನಮ್ಮ ಹಳ್ಳಿಗರಲ್ಲಿದ್ದು, ಇದು ನಿಜಕ್ಕೂ ಮೆಚ್ಚುವಂತದ್ದು. ಒಂದೆಡೆ ಕೊರೋನಾಕ್ಕಿಂತ ಕೆಲವು ವಿದ್ಯಾವಂತ ಮೂರ್ಖರೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದರೆ, ಮತ್ತೊಂದೆಡೆ ನಮ್ಮ ಹಳ್ಳಿಗರು ನಿರುಮ್ಮಳವಾಗಿ ಮತ್ತು ಯಶಸ್ವಿಯಾಗಿ ಜೀವನದ ರಥ ಎಳೆಯುತ್ತಿದ್ದಾರೆ.

ಜೊತೆ ಜೊತೆಗೇ ಇಡೀ ದೇಶವನ್ನೇ ಪೋಷಿಸಲು ಸಜ್ಜಾಗುತ್ತಿದ್ದಾರೆ. ಇಂದು ಇತರ ಅಗತ್ಯಗಳಿಗಿಂತ ಹೆಚ್ಚಾಗಿ ಜೀವ ಉಳಿಸಿಕೊಳ್ಳಲು ಅಗತ್ಯವಾದ ಮೂರು ಹೊತ್ತಿನ ಊಟ ನಮ್ಮೆಲ್ಲರಿಗೂ ಸಮರ್ಪಕವಾಗಿ ಸಿಗುತ್ತಿದೆಯೆಂದರೆ ಅದಕ್ಕೆ ಕಾರಣಕರ್ತರಾದ ನಮ್ಮೆಲ್ಲರ ಅನ್ನದಾತನನ್ನು ಮರೆಯುವಂತಿಲ್ಲ.

ಹೆಚ್ಚುತ್ತಿದೆ ಗ್ರಾಮೀಣ ವಲಸೆ

ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಸಾಗುತ್ತಿದ್ದ ಬಹುತೇಕ ನಗರ ವಾಸಿಗಳ ಇಂದಿನ ಆದ್ಯತೆ ಪ್ರಾಣ ಭಿಕ್ಷೆಯಷ್ಟೇ ಆಗಿದೆ. ಲೋಕದ ಅರಿವೇ ಇಲ್ಲದಂತೆ ಸ್ವಾರ್ಥಕ್ಕಾಗಿಯೇ ಬದುಕುತ್ತಿದ್ದ ಗರಿಷ್ಠ ಮಂದಿ ಇಂದು ಕಂಗಾಲಾಗಿ ಹೋಗಿ, ಪ್ರಾಣ ಉಳಿಸಿಕೊಳ್ಳಲು ಹಳ್ಳಿಗಳತ್ತ ಮುಖ ಮಾಡಿದ್ದಾರೆ.

ಸಾಫ್ಟ್‍ವೇರ್, ಹಾರ್ಡ್‍ವೇರ್‍ಗಳ ಜಂಜಾಟಗಳ ನಡುವೆ ಬೀಗುತ್ತಿದ್ದ ಮಂದಿ ಇಂದು ರೂರಲ್ ವೇರ್ ಆಗಿ ಬದಲಾಗುತ್ತಿದ್ದಾರೆ. ಕಂಪ್ಯೂಟರ್, ಲ್ಯಾಪ್‍ಟಾಪ್, ಟ್ಯಾಬ್‍ಗಳ ಮೇಲೆ ಬೆರಳಾಡಿಸುತ್ತಿದ್ದವರೆಲ್ಲಾ ಈಗ ಗುದ್ದಲಿ, ಹಾರೆ, ಬಾಂಡಲಿಗಳನ್ನು ಹಿಡಯುವ ಕಾಲ ಬಂದಿದೆ.

ನಾವೆಷ್ಟೇ ಮುಂದುವರಿದರೂ ಅನ್ನವನ್ನು ಕಂಪ್ಯೂಟರ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ತಿನ್ನಲು ಸಾಧ್ಯವಿಲ್ಲವೆಂಬ ಕಟುಸತ್ಯದ ಅರಿವಿನ ದರ್ಶನ ಇಂದು ಆಗುತ್ತಿದೆ. ಆದರೆ ಇವರಲ್ಲಿನ ಸಕಾರಾತ್ಮಕ ಬದಲಾವಣೆ ಹೀಗೆಯೇ ಇದ್ದರೆ ಒಳಿತು, ಇಲ್ಲದಿದ್ದರೆ ಹಳ್ಳಿ-ದಿಲ್ಲಿಯ ವ್ಯತ್ಯಾಸವಿಲ್ಲದೆ ಎಲ್ಲವನ್ನೂ ಅತಂತ್ರ ಮಾಡಿಯಾರು ಎಂಬ ಅನುಮಾನ ನಮ್ಮನ್ನು ಕಾಡಲು ಶುರುವಿಟ್ಟಿಕೊಳ್ಳುತ್ತದೆ.

ಕ್ಷೀಣಿಸುತ್ತಿದೆ ತಾತ್ಸಾರ ಮನೋಭಾವ

ಒಂದೆಡೆ ಬೆಳ್ಳಂಬೆಳಗ್ಗೆಯೇ ಎಲ್ಲೆಂದರಲ್ಲಿ ಗೋಬಿ ಮಂಚೂರಿ, ಪಾನಿಪೂರಿ ತಿನ್ನುವ ಮಂದಿ, ಮಾಲ್, ಪಬ್, ಸಿನಿಮಾ ಮಂದಿರಗಳು, ಬಾರ್‍ಗಳ ಮುಂದೆ ಕ್ಯೂ ನಿಲ್ಲುತ್ತಿದ್ದವರ ಗುಂಪು, ಎದುರಿಗೆ ಬಂದವರನ್ನೂ ನೋಡದೆ ಗುದ್ದುಕೊಂಡೇ ಕರ್ತವ್ಯಕ್ಕೆ ಹೊರಟ ಜನರ ಹಿಂಡು, ಎಲ್ಲಕ್ಕೂ ತಾ ಮುಂದು, ನಾ ಮುಂದು ಎಂದು ದುಂಬಾಲು ಬೀಳುತ್ತಿದ್ದ ಸಮುದಾಯ ಇವುಗಳಷ್ಟೇ ನಗರ ವಾಸಿಗಳ ಪ್ರತಿನಿತ್ಯ ಜೀವನದ ಕಥೆಯಾಗಿತ್ತು.

ಇನ್ನೊಂದೆಡೆ ಮನೆಯ ಮುಂದೆ ಸಗಣಿ ನೀರಿನಿಂದ ಸಾರಿಸಿ, ರಂಗವಲ್ಲಿ ಹಾಕಿ, ರೊಟ್ಟಿ, ಮುದ್ದೆ ಹೀಗೆ ಗಟ್ಟಿ ಆಹಾರ ಸೇವಿಸಿ, ನೆರೆ ಮನೆಯವರ ಉಭಯಕುಶಲೋಪರಿಯನ್ನು ವಿಚಾರಿಸಿ, ತಂತಮ್ಮ ಕೆಲಸಗಳಲ್ಲಿ ತೊಡಗುತ್ತಿದ್ದವರು ನಮ್ಮ ಹಳ್ಳಿ ಮಂದಿ. ಈ ಮೊದಲು ಸಿಟಿ ವಾಸಿಗಳಿಗೆ ಹಳ್ಳಿಗಳೆಂದರೆ, ಹಳ್ಳಿಗರ ಜೀವನ ಶೈಲಿ ಎಂದರೆ ಅದೇನೋ ಅಹಂಕಾರ ಮತ್ತು ತಾತ್ಸಾರ ಮನೋಭಾವವೇ ಹೆಚ್ಚು.

ಆದರೀಗ ಬದಲಾದ ಜಾಯಮಾನದಲ್ಲಿ ಎಲ್ಲವೂ ವೈಪರಿತ್ಯವಾಗಿದೆ. ತಮ್ಮ ಮಕ್ಕಳನ್ನು ರಜಾ ದಿನಗಳಲ್ಲಿ ಅಜ್ಜ-ಅಜ್ಜಿಯಂದಿರ ಮನೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದ ಕೆಲವು ಮಂದಿ ಇಂದು ಊರು ಬಿಟ್ಟು ಹೋಗಿ ಎಂದು ಹೇಳುವ ಪರಿಸ್ಥಿತಿ ನಿರ್ಮಿಸಿಕೊಂಡಿದ್ದಾರೆ. ಆದರೆ ನಮ್ಮ ಉದಾರಿ ರೈತ ಬಾಂಧವರು ಯಾವುದೇ ಫಲಾಪೇಕ್ಷೆ ಇಲ್ಲದೆ ಎಲ್ಲರನ್ನೂ ಸಂಭಾಳಿಸುತ್ತದ್ದಾರೆ. ಇದಕ್ಕೇ ಹೇಳುವುದು ‘ಕಾಲಾಯ ತಸ್ಮೈ ನಮಃ’ ಎಂದು.

ಬಲಿಷ್ಠವಾಗಬೇಕಿದೆ ಹಳ್ಳಿಗಳು

ಸ್ವಾತಂತ್ರ್ಯ ನಂತರದ ದಶಕಗಳಲ್ಲೂ ಹಳ್ಳಿಗಳಲ್ಲಿ ಕಾಡುತ್ತಿರುವ ಅತೀ ದೊಡ್ಡ ಸಮಸ್ಯೆ ಎಂದರೆ ಮೂಲಭೂತ ಸೌಕರ್ಯಗಳ ಕೊರತೆ. ನಾವೆಲ್ಲಾ ಚಂದ್ರಯಾನದಂತಹ ಹೆಮ್ಮೆಯ ಗಗನಯಾನವನ್ನು ಕೈಗೊಳ್ಳುವಷ್ಟು ಸಮರ್ಥರಿದ್ದರೂ ಇಂತಹ ಚಿಕ್ಕ ಚಿಕ್ಕ ಸಮಸ್ಯೆಗಳನ್ನು ಬದಿಗಿಡುತ್ತಲೇ ಸಾಗುತ್ತಿರುವುದು ನೋವಿನ ಸಂಗತಿ. ಆದರೆ ಅದೇ ಹಳ್ಳಿಗಳು ಮುಂದೊಂದು ದಿನ ಸಕಲ ಸೌಕರ್ಯಗಳುಳ್ಳ ಸ್ಥಳಗಳಾಗಿ ಮಾರ್ಪಡುವ ಕಾಲ ಸನ್ನಿಹಿತವಾಗುತ್ತಿದೆ.

ಆದರೆ ಇದಕ್ಕೆ ಕೇವಲ ಸರ್ಕಾರದ ಸವಲತ್ತುಗಳನ್ನೇ ಕಾಯದೇ ಅಬೇಧವಾಗಿ ಎಲ್ಲರೂ ಕೈ ಜೋಡಿಸಬೇಕಿದೆ. ಒಂದರ್ಥದಲ್ಲಿ ಇಷ್ಟು ವರ್ಷಗಳ ಕಾಲ ನಮಗೆ ಅನ್ನ ಹಾಕಿ ಶುಶ್ರೂಷೆ ಮಾಡುತ್ತಿದ್ದ ಹಳ್ಳಿಗರಿಗಿಂದು ನಗರ ವಾಸಿಗಳು ಹೊರೆಯಾಗುತ್ತಿದ್ದಾರೆ. ಆದರೆ ಹಳ್ಳಿಗರ ಔದಾರ್ಯದ ಮುಂದೆ ಇದೆಲ್ಲಾ ಮಂಕಾಗುತ್ತಿದೆ.

ಪ್ರಾಯಶಃ ಇಂದು ‘ಜೈ ಕಿಸಾನ್’ ಎಂಬ ಘೋಷವಾಕ್ಯ ಪ್ರತಿಧ್ವನಿಸುತ್ತಿದೆ. ಅದೇನೆ ಇದ್ದರೂ ಹಳ್ಳಿಗಳಿಂದು ಎಲ್ಲ ಕೊರತೆಗಳಿಂದ ಮುಕ್ತವಾಗಬೇಕಿದೆ. ಆರೋಗ್ಯ, ತಂತ್ರಜ್ಞಾನ, ಜಲ ಸಂರಕ್ಷಣೆ, ಶಿಕ್ಷಣ, ರಸ್ತೆಗಳ ನಿರ್ಮಾಣ, ಹೀಗೆ ಹತ್ತು ಹಲವು ಯೋಜನೆಗಳು ಇಂದು ಜಾರಿಯಲ್ಲಿದ್ದರೂ ಯಾವುಗಳು ಪೂರ್ಣ ಪ್ರಮಾಣದಲ್ಲಿ ಫಲಕಾರಿಯಾಗಿಲ್ಲ ಎಂಬುದನ್ನು ಈಗಲಾದರೂ ಮನಗಾಣಬೇಕಿದೆ.

ಬದಲಾದೀತೇ ಕ್ರೂರ ಮನಸ್ಥಿತಿ?

ನಗರಗಳೆಂದರೆ ಹಾಗೆ, ಪ್ರತಿ ಕ್ಷಣವೂ ಟೆನ್ಷನ್, ಭಯ ನಿರ್ಮಿತ ವಾತಾವರಣ, ಕೊಲೆ, ಸುಲಿಗೆ, ದರೋಡೆ, ಸಣ್ಣ ಸಣ್ಣ ವಿಚಾರಗಳಿಗೆಲ್ಲಾ ಗಲಭೆ, ಗಲಾಟೆ, ಮಾಲಿನ್ಯ, ಅನಾರೋಗ್ಯ. ಒಂದರ್ಥದಲ್ಲಿ ‘ಎಲ್ಲ ಇದ್ದು ಏನೂ ಇರದ ಹಾಗೆ’ ಬದುಕು ಸಾಗಿಸುವ ಅನಿವಾರ್ಯತೆ ಅಲ್ಲಿತ್ತು. ಆದರೆ ನಮ್ಮ ಹಳ್ಳಿಗರ ಪರಿಸ್ಥಿತಿ ಹೇಗಿತ್ತೆಂದರೆ ‘ಏನೂ ಇರದಿದ್ದರೂ ಎಲ್ಲ ಇದೆ’ ಎಂದು ಬದುಕುವ ರೀತಿಯಲ್ಲಿತ್ತು.

ಹೀಗೆ ಸದಾ ಆತಂಕದಲ್ಲೇ ಕಾಲ ಕಳೆಯುತ್ತಿದ್ದ ಜನ ಇಂದು ಹಳ್ಳಿಗಳನ್ನು ಸೇರಿ ಒಂದಷ್ಟು ಸಮಾಧಾನಿಸುತ್ತಿದ್ದಾರೆ. ಇದು ಅವರ ಮೂಲಭೂತ ವರ್ತನೆಯಲ್ಲಿ ಬಹುತೇಕ ಬದಲಾವಣೆ ತರುವ ಕಾಲವೂ ಆಗಿದೆ. ಶಾಂತಪ್ರಿಯ ಭಾರತದಲ್ಲಿ ಇವೆಲ್ಲವೂ ಸದ್ದಿಲ್ಲದೆ ನಡೆಯುತ್ತಿತ್ತು ಎಂಬುದನ್ನು ನಾವು ನಂಬಲೇಬೇಕಿದೆ. ಆದರೆ ಈಗ ಸರಳ ಜೀವನದ ಪಾಠ ಕಲಿಸುತ್ತಿರುವ ನಿರಕ್ಷಕರಕುಕ್ಷಿಗಳಿಗೆ ನಾವೊಂದು ಸಲಾಮ್ ಸಲ್ಲಿಸೋಣ.

ಹೆಚ್ಚಳವಾಗಲಿದೆ ನಿರೀಕ್ಷಿತ ಜೀವಿತಾವಧಿ

ನಗರವಾಸಿಗಳಲ್ಲಿ ಸದಾಕಾಲ ಅತೀವ ಅನಾರೋಗ್ಯ ಪೀಡಿತರ ಸಂಖ್ಯೆಯೇ ಹೆಚ್ಚು. ಅಲ್ಲಿನ ಮಾಲಿನ್ಯ, ಜನಜಂಗುಳಿ, ಕ್ರೌರ್ಯ, ಅವರ ಆಹಾರ ಪದ್ಧತಿಗಳು ವಿಚಿತ್ರ ಹಾಗೂ ಅನಾರೋಗ್ಯಕರವಾಗಿವೆ. ಹೀಗಾಗಿ ಬಹುತೇಕ ನಗರ ವಾಸಿಗಳ ನಿರೀಕ್ಷಿತ ಜೀವಿತಾವಧಿ (ಆಯಸ್ಸು) ಕಡಿಮೆಯೇ ಇತ್ತೆಂಬುದು ಆಶ್ಚರ್ಯವೇನಲ್ಲ.

ಬದಲಾದ ಇಂದಿನ ಸನ್ನಿವೇಶದಲ್ಲಿ ನಮ್ಮ ದೇಶವಾಸಿಗಳ ಆಯಸ್ಸು ಹೆಚ್ಚಾಗುವ ನಿರೀಕ್ಷೆಯಿದೆ. ಇದಕ್ಕೆಲ್ಲಾ ಕಾರಣಕರ್ತರಾಗುತ್ತಿರುವ ನಮ್ಮ ಹಳ್ಳಿಗರನ್ನ ನಾವು ಮತ್ತೊಮ್ಮೆ ಗೌರವಿಸದೆ ಇರಬಾರದು. ಜೀವನವನ್ನಷ್ಟೇ ಅಲ್ಲ ಜೀವವನ್ನೂ ವೃದ್ಧಿಸುತ್ತಿರುವುದು ಇಂದು ನಮ್ಮ ಹಳ್ಳಿಗರೆ. ಆದರೆ ಇದಕ್ಕೆ ಪೂರಕವಾದ ಸನ್ನಿವೇಶಗಳು ಗ್ರಾಮೀಣ ಭಾಗದಲ್ಲಿ ಮತ್ತಷ್ಟು ದೊರಕುವ ಅನಿವಾರ್ಯತೆ ಮತ್ತು ಅಗತ್ಯತೆ ಇಂದಿದೆ.

ಕೃಷಿಗೆ ದೊರಬೇಕಿದೆ ಮತ್ತಷ್ಟು ಆದ್ಯತೆ

ಪ್ರಾಥಮಿಕ, ದ್ವಿತೀಯ ಹಾಗೂ ತೃತೀಯ ವಲಯಗಳ ಪೈಕಿ ಈ ಮೊದಲು ನಮ್ಮ ರಾಷ್ಟ್ರೀಯ ಆದಾಯದ ಸಿಂಹಪಾಲು ಕೃಷಿಯದ್ದೇ ಆಗಿತ್ತು. ಆದರೆ ಜಾಗತೀಕರಣ, ಖಾಸಗೀಕರಣ ಮತ್ತು ಉದಾರಿಕರಣಗಳ ಫಲವಾಗಿ ಇತ್ತೀಚೆಗೆ ಕೃಷಿ ವಲಯ ನಿರ್ಲಕ್ಷಕ್ಕೆ ಒಳಪಟ್ಟಿರುವುದು ಬೇಸರ ಹಾಗೂ ಆತಂಕಕಾರಿ ಸಂಗತಿಯಾಗಿದೆ.

ಇಂದಿನ ಪರಿಸ್ಥಿತಿಯಲ್ಲಿ ಅನ್ನ ತಿಂದು ಜೀವ ಉಳಿಸಿಕೊಳ್ಳಲು ಸಾಧ್ಯವೇ ಹೊರತು, ಬೇರೇನೂ ಅಲ್ಲ ಎಂಬಂತಾಗಿದೆ. ಮತ್ತೊಮ್ಮೆ ನಮ್ಮ ಅನ್ನದಾತನಿಗೆ ಬೆಲೆ ಬರುತ್ತಿದೆ. ಆದರೆ ಅನ್ನದಾತನತ್ತ ನಮ್ಮ ಸರ್ಕಾರಳ ಚಿತ್ತ ಬೀಳಬೇಕಿದೆ. ಇತರ ವಲಯಗಳಂತೆಯೇ ಕೃಷಿಯನ್ನೂ ಅಭಿವೃದ್ಧಿಪಡಿಸಬೇಕಿದೆ. ಇಲ್ಲವಾದಲ್ಲಿ ಕೊರೋನಾ ವಿಷ ಕ್ರಿಮಿಯ ಲಗ್ಗೆ ಹೀಗೆಯೇ ಹೆಚ್ಚಾಗುತ್ತಿದ್ದರೆ, ಮುಂದೊಂದು ದಿನ ತಿನ್ನಲು ಅನ್ನವೂ ಇಲ್ಲದಂತಾಗಿ, ಗೆಡ್ಡೆ, ಗೆಣಸುಗಳನ್ನು ತಿಂದು ಆದಿ ಮಾನವರಂತೆ ಬದುಕುವ ಕಾಲ ಬಂದರೂ ಆಶ್ಚರ್ಯವೇನಿಲ್ಲ!

ನನಸಾಗುವುದೇ ಬಾಪೂಜಿ ಕನಸು?

“ಹಳ್ಳಿಗಳ ಉದ್ದಾರದಿಂದಲೇ ದೇಶದ ಉದ್ದಾರ” ಎಂಬ ಮಾತನ್ನು ನಮ್ಮ ರಾಷ್ಟ್ರಪಿತ ಗಾಂಧೀಜಿಯವರು ಸುಮಾರು ವರ್ಷಗಳ ಹಿಂದೆಯೇ ನುಡಿದಿದ್ದಾರೆ. ಮದ್ಯಪಾನಮುಕ್ತ ಗ್ರಾಮಗಳು, ಗುಡಿ ಕೈಗಾರಿಕೆಗಳಿಗೆ ಆದ್ಯತೆ, ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ, ಸ್ವದೇಶಿ ವಸ್ತುಗಳ ಬಳಕೆ, ಅಧಿಕಾರ ವಿಕೇಂದ್ರಿಕರಣದ ಮೂಲಸ್ಥಾನ ಹೀಗೆ ಗ್ರಾಮೀಣಾಭಿವೃದ್ಧಿಯ ಬಗ್ಗೆ ಬಾಪೂಜಿ ಅಂದೇ ದೊಡ್ಡ ದೊಡ್ಡ ಕನಸುಗಳನ್ನು ಕಂಡಿದ್ದರು.

ಇಂದಿನ ಪರಿಸ್ಥಿತಿ ನೋಡಿದರೆ ಆ ಕಾಲ ಬಹುಬೇಗ ಬರುವುದೇ? ಎಂದು ಕಾದು ನೋಡಬೇಕಿದೆ. ಹಾಗೆ ನೋಡಿದರೆ ಇಂದು ನಿಜಕ್ಕೂ ನಗರಳಲ್ಲಿನ ದ್ವಿತೀಯ ಹಾಗೂ ತೃತೀಯ ವಲಯಗಳ ಬಹುತೇಕ ಚಟುವಟಕೆಗಳಲ್ಲಿ ಕೃಷಿಯ ಸಹಕಾರವೇ ಹೆಚ್ಚು. ಈ ಹಿನ್ನೆಲೆಯಲ್ಲಿ ನಮ್ಮ ಗ್ರಾಮೀಣ ಭಾಗಗಳನ್ನು ಮುನ್ನೆಲೆಗೆ ತರುವಂತಹ ಕ್ರಮಗಳು ಇಂದು ಅಪೇಕ್ಷಣಿಯ.

ಕೈಗಾರಿಕೆಗಳ ಮೂಲ ನೆಲೆಯಾದೀತೇ?

ದುಡಿಯುವ ಕೈಗಳಿಗೆ ಉದ್ಯೋಗ ಒದಗಿಸುವಲ್ಲಿ ಕೃಷಿ ಕ್ಷೇತ್ರದ ಸಾಮಥ್ರ್ಯ ಹೆಚ್ಚಿದ್ದರೂ, ವರ್ಷವಿಡೀ ಕೃಷಿಯಲ್ಲಿ ಉದ್ಯೋಗ ಲಭ್ಯತೆ ಇರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನಿರುದ್ಯೋಗಿಗಳಾಗುತ್ತಿದ್ದ ನಮ್ಮ ಗ್ರಾಮೀಣ ಭಾಗದ ಜನರು ನಗರಗಳತ್ತ ವಲಸೆ ಹೋಗುತ್ತಿದ್ದರು. ಆದರೆ ಇಂದು ಅದೇ ವಲಸೆ ಪುನರಾವರ್ತಿತವಾಗುತ್ತಿದೆ.

ಇಂತಹ ಕೃಷಿ ಕಾರ್ಮಿಕತನ್ನು ಒಂದೆಡೆ ಸಂಘಟಿಸಿ ಇಂದು ಅವರಿಗೆ ಸರಿ ಹೊಂದುವ ಉದ್ಯೋಗ ಸೃಷ್ಟಿಗೆ ಸರ್ಕಾರಗಳು ಮುಂದಾಗಬೇಕಿದೆ. ತಾವಿರುವ ಸ್ಥಳಗಳಲ್ಲಿಯೇ ಸಾಧ್ಯವಿರುವ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸಿದರೆ ನಿರುದ್ಯೋಗ ಸಮಸ್ಯೆಯ ನಿವಾರಣೆ ಜೊತೆಗೆ ದೇಶದ ಆರ್ಥಿಕತೆಯೂ ಸಹ ಬಲಿಷ್ಠವಾಗಲಿದೆ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಕೃಷಿ ಪದ್ಧತಿಗೆ ಮತ್ತೊಮ್ಮೆ ಜೀವ ತುಂಬಲು ಸಾಧ್ಯವಿದೆ.

(ಕುಮಾರಸ್ವಾಮಿ.ವಿ.ಕೆ
(ಕುಮಾರ್ ಭಾರದ್ವಾಜ್)
ಹವ್ಯಾಸಿ ಬರಹಗಾರರು, ವಿರುಪಾಪುರ,
ಸುಗ್ಗನಹಳ್ಳಿ ಅಂಚೆ, ತಿಪ್ಪಸಂದ್ರ ಹೋಬಳಿ,
ಮಾಗಡಿ ತಾಲ್ಲೂಕು, ರಾಮನಗರ ಜಿಲ್ಲೆ.
ಮೊಬೈಲ್ : 9113906120, 9740840678)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಾಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು; ತುಂಗಭದ್ರಾ ಡ್ಯಾಂ ತುಂಬಲು ಕೆಲವೇ ಅಡಿ ಬಾಕಿ

Published

on

tungabhadra dam water level today in tmc

ಸುದ್ದಿದಿನ, ಹೊಸಪೇಟೆ: ರಾಜ್ಯದಲ್ಲಿ ಮಳೆ ಅಬ್ಬರ ಇಂದು ಕೊಂಚ ತಗ್ಗಿದ್ದು, ನೀರಿನ ಸೆಳೆವು ಮುಂದುವರಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಳಿ ತುಂಗಭದ್ರಾ ತಂಬಲು ಇನ್ನೂ ಕೆಲವೇ ಅಡಿ ಬಾಕಿ ಇದೆ.

ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಅಬ್ಬರ ಹೆಚ್ಚಾಗಿದೆ. 8.581 ಟಿಎಂಸಿ ನೀರು ಒಂದೇ ದಿನಕ್ಕೆ ಹರಿದು ಬಂದು ತುಂಗಭದ್ರಾ ಜಲಾಶಯ ಸೇರಿದೆ ಎಂದು ಅಂದಾಜಿಸಲಾಗಿದೆ. ಪೂರ್ಣ ಜಲಾಶಯ ತುಂಬಲು ಇನ್ನು 11 ಅಡಿ ನೀರು ಬರಬೇಕಿದೆ. ಮಹಾ ಮಳೆ ಹೀಗೆ ಬಂದರೆ ಇನ್ನು ಕೆಲ ದಿನಗಳಲ್ಲಿ ತುಂಗಭದ್ರಾ ಜಲಾಶಯ ಪೂರ್ಣ ತುಂಬಲಿದೆ.

ಇನ್ನು ಭದ್ರಾ ಜಲಾಶಯ ಸೇರಿದಂತೆ ರಾಜ್ಯದ ವಿವಿಧೆಡೆ ನದಿಮೂಲಗಳಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

Continue Reading

ದಿನದ ಸುದ್ದಿ

ಸೋಮವಾರದ ಭವಿಷ್ಯವಾಣಿ

Published

on

ಓಂ ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ.

ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮೇಷ ರಾಶಿ

ಗಾಯಗೊಳ್ಳುವುದನ್ನು ತಪ್ಪಿಸಲು ಕುಳಿತುಕೊಳ್ಳುವಾಗ ವಿಶೇಷ ಕಾಳಜಿ ವಹಿಸಿ. ಅಲ್ಲದೇ ಒಳ್ಳೆಯ ನಿಲುವು ಕೇವಲ ನಿಮ್ಮ ವ್ಯಕ್ತಿತ್ವವನ್ನು ವ್ರುದ್ಧಿಸುವುದಷ್ಟೇ ಅಲ್ಲದೇ ಆರೋಗ್ಯ ಮತ್ತು ವಿಶ್ವಾಸಾರ್ಹತೆಯನ್ನು ಅಭಿವೃದ್ಧಿಪಡಿಸುವಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ನೀವು ಪ್ರಯಾಣ ಮಾಡುತ್ತಿದ್ದರೆ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ವಿಶೇಷ ಗಮನ ಹರಿಸಿ, ನೀವು ಇದನ್ನು ಮಾಡದಿದ್ದರೆ ಸರಕುಗಳು ಕದಿಯುವ ಸಾಧ್ಯತೆಯಿದೆ.

ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ತಪ್ಪು ಸಂವಹನೆ ಅಥವಾ ಒಂದು ಸಂದೇಶ ನಿಮ್ಮ ದಿನವನ್ನು ಅವರಿಸಬಹುದು. ನೀವೇನೇ ಮಾಡಿದರೂ ನೀವು ಅಧಿಕಾರಯುತ ಸ್ಥಾನದಲ್ಲಿರುತ್ತೀರಿ. ದಿನದ ಪ್ರಾರಂಭವು ಸ್ವಲ್ಪ ದಣಿದಿರಬಹುದು ಆದರೆ ದಿನ ಮುಂದುವರೆದಂತೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ.

ದಿನದ ಕೊನೆಯಲ್ಲಿ ನಿಮಗಾಗಿ ಸಮಯ ಸಿಗುತ್ತದೆ ಮತ್ತು ನಿಕಟ ವ್ಯಕ್ತಿಯನ್ನು ಭೇಟಿಯಾಗುವ ಮೂಲಕ ನೀವು ಈ ಸಮಯವನ್ನು ಚೆನ್ನಾಗಿ ಬಳಸಿಕೊಳ್ಳಬಹುದು. ನಿಮ್ಮ ಸಂಗಾತಿಯ ಬೇಡಿಕೆಗಳು ನಿಮಗೆ ಸ್ವಲ್ಪ ಒತ್ತಡವುಂಟುಮಾಡಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ವೃಷಭ ರಾಶಿ

ನಿಮ್ಮ ಆರೋಗ್ಯ ಸುಧಾರಿಸಲು ಸಹಕಾರಿಯಾಗುವ ಕೆಲಸಗಳನ್ನು ಮಾಡಬಹುದಾದ ಒಂದು ದಿನ. ಪ್ರಮುಖ ಜನರು ವಿಶೇಷ ವರ್ಗ ಹೊಂದಿರುವ ಯಾವುದಕ್ಕಾದರೂ ಹಣಕಾಸು ನೀಡಲು ಸಿದ್ಧವಾಗಿರುತ್ತಾರೆ. ಕುಟುಂಬದ ಸದಸ್ಯರ ಖುಷಿಯ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸುತ್ತದೆ.

ಇಂದು ನೀವು ನಿಮ್ಮ ಜೀವನದ ತೊಂದರೆಗಳನ್ನು ನಿಮ್ಮ ಸಂಗಾತಿಯೊಂದಿಗೆ ಹಂಚಿಕೊಳ್ಳಲು ಬಯಸುವಿರಿ ಆದರೆ ಅವರು ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡಿ ನಿಮ್ಮನ್ನು ಇನ್ನಷ್ಟು ತೊಂದರೆಗೊಳಿಸಬಹುದು. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂ ಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ” ಎಂದಲ್ಲಿ. ಮನೆಯಲ್ಲಿರುವ ಯಾವುದೇ ಹಳೆಯ ವಸ್ತು ಇಂದು ನಿಮಗೆ ಸಿಗಬಹುದು.

ಇದರಿಂದ ನಿಮ್ಮ ಬಾಲ್ಯದ ದಿನಗಳನ್ನು ನೀವು ನೆನಪಿಸಿಕೊಳ್ಳಬಹುದು ಮತ್ತು ನೀವು ದುಃಖದೊಂದಿಗೆ ನಿಮ್ಮ ದಿನದ ಸಾಕಷ್ಟು ಸಮಯವನ್ನು ಒಂಟಿಯಾಗಿ ಕಳೆಯಬಹುದು. ನಿಮ್ಮ ಯೋಜನೆಗಳು ಒಬ್ಬ ಅನಿರೀಕ್ಷಿತ ಅತಿಥಿಯ ಕಾರಣ ಹಾಳಾಗಬಹುದು, ಆದರೆ ಇದು ನಿಮ್ಮ ದಿನವನ್ನು ಉತ್ತಮವಾಗಿಸುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮಿಥುನ ರಾಶಿ

ಅನಂತ ಜೀವನದ ಉತ್ಕೃಷ್ಟ ವೈಭವವನ್ನು ಆನಂದಿಸಲು ನಿಮ್ಮ ಜೀವನವನ್ನು ಹೆಚ್ಚು ಭವ್ಯಗೊಳಿಸಿ. ಚಿಂತೆಯ ಅನುಪಸ್ಥಿತಿ ಈ ದಿಕ್ಕಿನಲ್ಲಿ ಮೊದಲ ಹೆಜ್ಜೆ. ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಹೊಂದಿರುವ ಸಾಧ್ಯತೆ ಇದೆ ಆದರೆ ನಿಮ್ಮ ಬುದ್ಧಿವಂತಿಕೆಯಿಂದ ಈ ಹಾನಿಯನ್ನು ಲಾಭದಲ್ಲಿ ಪರಿವರ್ತಿಸಬಹುದು ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ.

ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಒಂದು ಅಚ್ಚರಿಯನ್ನು ಯೋಜಿಸಿ ಮತ್ತು ಇದನ್ನು ನಿಮ್ಮ ಜೀವನದ ಅತ್ಯಂತ ಸುಂದರ ದಿನವನ್ನಾಗಿ ಮಾಡಿ. ಕೆಲಸದ ಪ್ರದೇಶದಲ್ಲಿ ಉತ್ತಮವಾಗಿ ಅನುಭವಿಸುವ ದಿನಗಳಲ್ಲಿ ಒಂದು ದಿನ ಇದು.

ಇಂದು ನಿಮ್ಮ ಸಹೋದ್ಯೋಗಿಗಳು ನಿಮ್ಮ ಕೆಲಸವನ್ನು ಪ್ರಶಂಸಿಸುತ್ತಾರೆ ಮತ್ತು ನಿಮ್ಮ ಬಾಸ್ ಸಹ ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ. ಉದ್ಯಮಿಗಳು ಸಹ ತಮ್ಮ ವ್ಯಾಪಾರದಲ್ಲಿ ಪ್ರಯೋಜನವನ್ನು ಪಡೆಯಬಹುದು.

ಇವತ್ತು ನಿಮಗೆ ಹೇಗೆನಿಸುತ್ತಿದೆಯೆಂದು ಇತರರಿಗೆ ತಿಳಿಸುವ ಉತ್ಸಾಹವನ್ನು ನಿಯಂತ್ರಿಸಿ. ಇಂದು, ನಿಮ್ಮ ಜೀವನ ಸಂಗಾತಿ ಸಕ್ಕರೆಗಿಂತ ಸಿಹಿಯಾಗಿದ್ದಾರೆಂದು ನಿಮಗೆ ಅರಿವಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕರ್ಕ ರಾಶಿ

ನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ರಾಶಿಚಕ್ರದ ವಿವಾಹಿತ ಜನರಿಗೆ ಇಂದು ಅತ್ತೆಮನೆಯ ಕಡೆಯಿಂದ ಹಣದ ಪ್ರಯೋಜನವಾಗುವ ಸಾಧ್ಯತೆ ಇದೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ.

ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ಇಂದು ಅರ್ಥಮಾಡಿಕೊಳ್ಳಿ. ಇತರ ದೇಶಗಳಲ್ಲಿ ವೃತ್ತಿಪರ ಸಂಪರ್ಕಗಳನ್ನು ಅಭಿವೃದ್ಧಿಪಡಿಸಲು ಇದು ಉತ್ತಮ ಸಮಯ. ಇಂದು ನೀವು ಯಾವುದೊ ಹೊಸ ಪುಸ್ತಕವನ್ನು ಖರೀದಿಸಿ, ಯಾವುದೇ ಕೊಠಡಿಯಲ್ಲಿ ಸ್ವತಃ ಲಾಕ್ ಮಾಡಿ ಇಡೀ ದಿನವನ್ನು ಕಳೆಯಬಹುದು. ಇಂದು, ನಿಮ್ಮ ಮದುವೆ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಸಿಂಹ ರಾಶಿ

ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಹಣದ ಪ್ರಾಮುಖ್ಯತೆ ನಿಮಗೆ ಚೆನ್ನಾಗಿ ಗೊತ್ತಿದೆ, ಆದ್ದರಿಂದ ಇಂದು ನಿಮ್ಮ ಮೂಲಕ ಉಳಿಸಲಾಗಿರುವ ಹಣ ನಿಮ್ಮ ತುಂಬಾ ಕೆಲಸಕ್ಕೆ ಬರಬಹುದು ಮತ್ತು ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು.

ಒಬ್ಬ ಹಿರಿಯ ವ್ಯಕ್ತಿಯ ಆರೋಗ್ಯ ಕೊಂಚ ಆತಂಕಕ್ಕೆ ಕಾರಣವಾಗುತ್ತದೆ. ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನೀವು ಎಂದಾದರೂ ಶುಂಠಿ ಮತ್ತು ಗುಲಾಬಿಗಳ ಚಾಕೋಲೇಟ್ ಅನ್ನು ಆಘ್ರಾಣಿಸಿದ್ದೀರೇ? ನಿಮ್ಮ ಪ್ರೇಮ ಜೀವನ ಇಂದು ಈ ರೀತಿಯಾಗಿರುತ್ತದೆ. ಈ ರಾಶಿಚಕ್ರದ ಜನರು ಇಂದು ತಮ್ಮ ಸಹೋದರಸಹೋದರಿಯರೊಂದಿಗೆ ಮನೆಯಲ್ಲಿ ಯಾವುದೇ ಚಲನ ಚಿತ್ರ ಅಥವಾ ಮ್ಯಾಚ್ ನೋಡಬಹುದು.

ಇದನ್ನು ಮಾಡುವುದರಿಂದ ನಿಮ್ಮ ನಡುವಿನ ಪ್ರೀತಿಯಲ್ಲಿ ಹೆಚ್ಚಳವಾಗುತ್ತದೆ. ನೀವು ನಿಮ್ಮ ಕೆಲಸದಲ್ಲಿ ವಹಿಸುವ ಎಲ್ಲಾ ಶ್ರಮವೂ ಇಂದು ಫಲ ನೀಡುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕನ್ಯಾ ರಾಶಿ

ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನಿಮ್ಮ ತಾಯಿಯ ಬದಿಯಿಂದ ಇಂದು ಹಣಕಾಸಿನ ಲಾಭವನ್ನು ಪಡೆಯುವ ಪೂರ್ಣ ಸಾಧ್ಯತೆ ಇದೆ.ನಿಮ್ಮ ಮಾಮ ಅಥವಾ ತಾತ ನಿಮಗೆ ಆರ್ಥಿಕ ಬೆಂಬಲ ಮಾಡಬಹುದು. ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಸಂತೋಷದ ಕ್ಷಣಗಳನ್ನು ತರುತ್ತದೆ. ಇಂದು ನೀವು ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ನೀವು ಕೆಲಸದಲ್ಲಿ ಅಭಿನಂದನೆಗಳನ್ನು ಪಡೆಯಬಹುದು.

ಜನರು ನಿಮ್ಮ ಮನೆಯ ಬಗ್ಗೆ ಏನು ಯೋಚಿಸುತ್ತಾರೆ ಎಂದು ಇಂದು ನಿಮಗೆ ಈ ವಿಷಯದಿಂದ ಯಾವುದೇ ವ್ಯತ್ಯಾಸ ಬೀಳುವುದಿಲ್ಲ. ಇಂದು ನೀವು ಉಚಿತ ಸಮಯದಲ್ಲಿ ಯಾರೊಂದಿಗೂ ಭೇಟಿ ಮಾಡಲು ಇಷ್ಟ ಪಡುವುದಿಲ್ಲ ಮತ್ತು ಏಕಾಂತದಲ್ಲಿ ಸಂತೋಷವಾಗಿರುತ್ತೀರಿ.

ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂ ಹೊರಗೆ ಹೋಗುವಂತೆ ಅಥವಾ ಮನೆಯಲ್ಲುಳಿಯುವಂತೆ ನಿಮ್ಮನ್ನು ಒತ್ತಾಯಿಸಬಹುದು, ಹಾಗೂ ಇದು ಅಂತಿಮವಾಗಿ ನಿಮಗೆ ಕಿರಿಕಿರಿಯುಂಟುಮಾಡಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ತುಲಾ ರಾಶಿ

ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸನ್ನು ಪ್ರೋತ್ಸಾಹಿಸಿ. ಒಮ್ಮೆ ಈ ಭಾವನೆಗಳು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಂಡ ನಂತರ ಮನಸ್ಸು ತಾನಾಗಿಯೇ ಪ್ರತಿ ಪರಿಸ್ಥಿತಿಗೂ ಧನಾತ್ಮಕವಾಗಿ ಪ್ರತಿಕ್ರಿಯಿಸುತ್ತದೆ.

ನಿಮ್ಮ ಅವಾಸ್ತವಿಕ ಯೋಜನೆ ಹಣದ ಕೊರತೆಗೆ ಕಾರಣವಾಗುತ್ತದೆ. ನಿಮ್ಮ ನೆರವು ಅಗತ್ಯವಿರುವ ಒಬ್ಬ ಸ್ನೇಹಿತರನ್ನು ಭೇಟಿ ಮಾಡಿ. ಕೆಲವರಿಗೆ ಮದುವೆಯಾಗುವ ಸಾಧ್ಯತೆಗಳು ಹಾಗೂ ಇನ್ನೂ ಕೆಲವರಿಗೆ ಪ್ರಣಯ ಕಾಲ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ವೃಶ್ಚಿಕ ರಾಶಿ

ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ.

ವಿವಾಹಿತ ಜನರು ಇಂದು ತಮ್ಮ ಮಕ್ಕಳ ಶಿಕ್ಷಣದ ಮೇಲೆ ಹೆಚ್ಚು ಹಣವನ್ನು ಖರ್ಚು ಮಾಡಬೇಕಾಗುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ
ತಾಳ್ಮೆಯಿಂದಿರಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಧನು ರಾಶಿ

ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ನೀವು ಇಂದು ಹಣ ಉಳಿಸುವುದು ಕಷ್ಟ ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ ಪರ್ಸ್ ಕಳೆದುಕೊಳ್ಳುವ ಸಾಧ್ಯತೆಗಳಿವೆ ನಿರ್ಲಕ್ಷ್ಯತನದಿಂದ ಕೆಲವು ಸಮಸ್ಯೆಗಳು ಖಂಡಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ.

ಯಾರಾದರೂ ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ನೀವು ನಿರಾಸೆ ಅನುಭವಿಸುತ್ತೀರಿ ಅದೇಕೆಂದರೆ ನೀವು ಬಯಸುತ್ತಿದ್ದ ಗುರುತಿಸುವಿಕೆ ಮತ್ತು ಪ್ರತಿಫಲಗಳು ಮುಂದೂಡಲ್ಪಡುತ್ತವೆ. ಸ್ನೇಹಿತರೊಂದಿಗೆ ಈ ಅಮೂಲ್ಯ ಕ್ಷಣಗಳನ್ನು ಹಾಳುಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ.

ಸ್ನೇಹಿತರು ಮುಂಬರುವ ಸಮಯದಲ್ಲೂ ಸಿಗಬಹುದು ಆದರೆ ಅಧ್ಯಯನಕ್ಕಾಗಿ ಇದೆ ಸಮಯ ಅತ್ಯುತ್ತಮವಾಗಿದೆ. ಇಂದು, ನೀವು ನಿಮ್ಮ ಸಂಗಾತಿಯ ಪ್ರೀತಿಯ ಜೊತೆ ನಿಮ್ಮ ಜೀವನದ ಎಲ್ಲಾ ಕಷ್ಟಗಳನ್ನು ಮರೆಯುತ್ತೀರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮಕರ ರಾಶಿ

ನಿಮ್ಮಲ್ಲಿ ಕೆಲವರು ಇದು ಇಂದು ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕಾಗಬಹುದು ಹಾಗೂ ಇದು ನಿಮ್ಮನ್ನು ಉದ್ವೇಗಭರಿತರನ್ನಾಗಿಯೂ ಹಾಗೂ ಗಾಬರಿಯಿರುವವರನ್ನಾಗಿಯೂ ಮಾಡಬಹುದು. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ನಿಮ್ಮ ಕುಟುಂಬದೊಂದಿಗೆ ಸಾಮಾಜಿಕ ಚಟುವಟಿಕೆ ಎಲ್ಲರನ್ನೂ ಆರಾಮವಾಗಿ ಮತ್ತು ಆಹ್ಲಾದಕರ ಮನಸ್ಥಿತಿಯಲ್ಲಿಡುತ್ತದೆ.

ದೀರ್ಘಕಾಲದ ನಂತರ ನಿಮ್ಮ ಸ್ನೇಹಿತರಿಗೆ ಸಂಧಿಸುವ ವಿಚಾರ ನಿಮ್ಮ ಮನಸ್ಸಿನೆಲ್ಲೆಡೆ ತುಂಬಿರುತ್ತದೆ. ನೀವು ಸಮಯವೇ ಹಣವೆಂದು ನೀವು ನಿಮ್ಮ ಅತ್ಯುತ್ತಮ ಸಂಭಾವ್ಯತಯನ್ನು ತಲುಪಲು ಹೆಜ್ಜೆಗಳನ್ನಿಡಬೇಕು. ನೀವು ಸ್ನೇಹಿತರೊಬ್ಬನೊಂದಿಗೆ ಇಂದು ಸಮಯವನ್ನು ಕಳೆಯಬಹುದು ಆದರೆ ಈ ಸಮಯದಲ್ಲಿ ನೀವು ಆಲ್ಕೊಹಾಲ್ ಸೇವಿಸುವುದನ್ನು ತಪ್ಪಿಸಬೇಕು ಇಲ್ಲದಿದ್ದರೆ, ಸಮಯ ಹಾಳಾಗಬಹುದು.

ನೀವು ಮತ್ತು ನಿಮ್ಮ ಸಂಗಾತಿ ಇಂದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ನೆನಪುಗಳನ್ನು ರಚಿಸುತ್ತೀರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಕುಂಭ ರಾಶಿ

ನೀವು ಚೈತನ್ಯಯುಕ್ತವಾಗಿರುತ್ತೀರಿ ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವು ತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನು ಮಾಡಲು ನಿಮಗೆ ಸಾಧ್ಯವಾಗುತ್ತದೆ. ನೀವು ದೀರ್ಘಕಾಲದ ಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವು ಸಲಹೆ ಪಡೆಯಬಹುದು.

ಪ್ರಣಯ ಮತ್ತು ಸಾಮಾಜಿಕವಾಗಿ ಬೆರೆಯುವುದು ಬಾಕಿಯಿರುವ ಕೆಲಸಗಳ ಹೊರತಾಗಿಯೂ ನಿಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತವೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನೀವು ಸ್ನೇಹಿತರೊಬ್ಬನೊಂದಿಗೆ ಇಂದು ಸಮಯವನ್ನು ಕಳೆಯಬಹುದು ಆದರೆ ಈ ಸಮಯದಲ್ಲಿ ನೀವು ಆಲ್ಕೊಹಾಲ್ ಸೇವಿಸುವುದನ್ನು ತಪ್ಪಿಸಬೇಕು ಇಲ್ಲದಿದ್ದರೆ, ಸಮಯ ಹಾಳಾಗಬಹುದು. ಇಂದು, ನೀವು ಮತ್ತೆ ನಿಮ್ಮ ಸಂಗಾತಿಯ ಜೊತೆ ಪ್ರೀತಿಯಲ್ಲಿ ಬೀಳುತ್ತೀರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

ಮೀನ ರಾಶಿ

ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ, ಏಕೆಂದರೆ ಮನೆಯ ಯಾವುದೇ ಹಿರಿಯ ಸದಸ್ಯ ಇಂದು ನಿಮಗೆ ಹಣವನ್ನು ನೀಡಬಹುದು. ಎಲ್ಲರನ್ನೂ ನಿಮ್ಮ ದೊಡ್ಡ ಪಾರ್ಟಿಗೆ ಕರೆಯಿರಿ ನೀವು ಇಂದು ಆ ಹೆಚ್ಚುವರಿ ಚೈತನ್ಯವನ್ನು ಹೊಂದಿರುತ್ತೀರಿ ಹಾಗೂ ಇದು ನಿಮ್ಮನ್ನು ನಿಮ್ಮ ಗುಂಪಿಗಾಗಿ ಸಮಾರಂಭವನ್ನು ಸಂಯೋಜಿಸುವಂತೆ ಮಾಡುತ್ತದೆ.

ನಿಮ್ಮ ಪ್ರೀತಿಪಾತ್ರರು ಬದ್ಧತೆಯನ್ನು ಬಯಸುತ್ತಾರೆ ನೀವು ಕಾಯ್ದುಕೊಳ್ಳಲು ಕಷ್ಟವಾಗುವ ಭರವಸೆಯನ್ನು ನೀಡಬೇಡಿ. ನಿಮ್ಮ ಮಾರ್ಗದಲ್ಲಿ ಸುಧಾರಣೆ ಮತ್ತು ಆಫೀಸಿನ ಕೆಲಸದಲ್ಲಿ ಗುಣಮಟ್ಟದ ಸುಧಾರಣೆಯನ್ನು ಅನುಭವಿಸುತ್ತೀರಿ. ನಿಮಗೆ ನೀವು ಸಮಯವನ್ನು ನೀಡುವುದು ತಿಳಿದಿದೆ ಮತ್ತು ಇಂದು ನೀವು ಸಾಕಷ್ಟು ಉಚಿತ ಸಮಯವನ್ನು ಪಡೆಯುವ ಸಾಧ್ಯತೆಯಿದೆ.

ಉಚಿತ ಸಮಯದಲ್ಲಿ ಇಂದು ನೀವು ಯಾವುದೇ ಆಟವನ್ನು ಆಡಬಹುದು ಅಥವಾ ಜಿಮ್‌ಗೆ ಹೋಗಬಹುದು. ನಿಮ್ಮ ಪ್ರಚೋದಕ ವೈವಾಹಿಕ ಜೀವನದಲ್ಲಿ ಇಂದು ಒಂದು ಸುಂದರ ಬದಲಾವಣೆಯನ್ನು ನೀವು ಅನುಭವಿಸುತ್ತೀರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9535935559

Continue Reading

ದಿನದ ಸುದ್ದಿ

24 ಗಂಟೆಯಲ್ಲಿ ದಾಖಲಾದ ಕೊರೋನಾ ಕೇಸ್ ಗಳು ಎಷ್ಟು ಗೊತ್ತಾ..!?

Published

on

ಸುದ್ದಿದಿನ ಡೆಸ್ಕ್: ದೇಶದಲ್ಲಿ ಕೊರೋನಾ ಸ್ಫೋಟಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಹೊಸದಾಗಿ 64,399 ಪ್ರಕರಣಗಳು ದಾಖಲಾಗಿದ್ದು, 861 ಜನ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ, ದೇಶದಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳು ಈಗ 21,53,011 ಆಗಿದೆ. ಇನ್ನು ದೇಶದಲ್ಲಿ ಒಟ್ಟು 14,80,885 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಈಗ ಒಟ್ಟು 6,28,747 ಸಕ್ರಿಯ ಪ್ರಕರಣಗಳಿವೆ. ಒಟ್ಟು 43,379 ಮಂದಿ ಸಾವನ್ನಪ್ಪಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending