ದಿನದ ಸುದ್ದಿ
ಚಿತ್ರದುರ್ಗ | ಕೊರೋನಾ ಗೆದ್ದು ಬಂದ 110 ವರ್ಷದ ಅಜ್ಜಿ
ಸುದ್ದಿದಿನ,ಚಿತ್ರದುರ್ಗ: ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಪಾಸಿಟಿವ್ನಿಂದಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ 110 ವರ್ಷದ ಅಜ್ಜಿ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆದರು. ಆಸ್ಪತ್ರೆಯಿಂದ ಮನೆಗೆ ತೆರಳುವಾಗ ತಮ್ಮ ಕುಟುಂಬಸ್ಥರನ್ನು ನೆನೆದು ಅಜ್ಜಿ ಆಸ್ಪತ್ರೆ ಆವರಣದಲ್ಲೇ ಕಣ್ಟೀರಿಟ್ಟರು.
ನಗರದ ಪೊಲೀಸ್ ಕ್ವಾಟ್ರಸ್ ನಲ್ಲಿ ತಮ್ಮ ಮೊಮ್ಮಗನೊಂದಿಗೆ ಹಲವು ವರ್ಷಗಳಿಂದ ವಾಸವಾಗಿದ್ದ ಅಜ್ಜಿ, ತುಂಬಾ ಆರೋಗ್ಯವಾಗಿದ್ದರು. ಬಿಪಿ, ಶುಗರ್ ಸೇರಿದಂತೆ ಇನ್ನಿತರ ವಯೋಸಹಜ ಯಾವುದೇ ಖಾಯಿಲೆಗಳು ಸಹ ಇರಲಿಲ್ಲ.
ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಇವರ ಮನೆಯಲ್ಲಿ ವಾಸವಾಗಿದ್ದ ಇಬ್ಬರು ಮಹಿಳೆಯರು ಹಾಗೂ ಒಂದು ವರ್ಷದ ಮಗುವಿಗೆ ಕೊರೊನಾ ಸೋಂಕು ಪತ್ತೆ ಯಾಗಿತ್ತು. ಆಗ ಅಜ್ಜಿ ಸೇರಿದಂತೆ ಏಳು ಜನರನ್ನು ತಪಾಸಣೆಗೆ ಒಳಪಡಿಸಿದಾಗ ಇವರಿಗೂ ಸೋಂಕು ತಗುಲಿರುವುದು ದೃಢವಾಗಿತ್ತು.
ವಯೋವೃದ್ಧೆ ಇನ್ನೇನು ಪುನಃ ಆರೋಗ್ಯವಾಗಿ ಮನೆಗೆ ವಾಪಸ್ ಬರುವುದಿಲ್ಲ ಎಂಬ ಆತಂಕ ಪೊಲೀಸ್ ಕ್ವಾಟ್ರಸ್ ನಲ್ಲಿ ಶುರುವಾಗಿತ್ತು. ಆದರೆ ಅದೃಷ್ಟವಶಾತ್ ಅಜ್ಜಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಹೆಮ್ಮಾರಿ ಕೊರೊನಾದಿಂದ ಸಂಪೂರ್ಣ ಗುಣಮುಖವಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಮನೆಗೆ ತೆರಳುವಾಗ ಕುಟುಂಬಸ್ಥರನ್ನು ನೆನೆದ ಅಜ್ಜಿ, ಬಿಕ್ಕಿ ಬಿಕ್ಕಿ ಅತ್ತರು. ಆಗ ಯಾಕೆ ಅಳಿತಿದ್ದೀರಿ, ಹೆದರಬೇಡಿ ಎಂದು ನೆರೆದಿದ್ದವರು ಹೇಳಿದಾಗ, ನಮ್ಮ ಕುಟುಂಬಸ್ಥರಿಗೆ ಎಂತಹ ಸ್ಥಿತಿ ಬಂದಿದೆ. ಎಲ್ಲರೂ ಕ್ವಾರಂಟೈನ್ ಆಗಿದ್ದಾರೆ. ನಾನು ಈಗ ಡಿಸ್ಚಾರ್ಜ್ ಆಗಿದ್ದೇನೆ. ನಾನು ಎಲ್ಲಿಗೆ ಹೋಗಲಿ, ಏನು ಮಾಡಲಿ ಎಂದು ಆತಂಕ ವ್ಯಕ್ತಪಡಿಸಿದರು.
ಈ ವೇಳೆ ಅಜ್ಜಿಯನ್ನು ಕರೆದುಕೊಂಡು ಹೋಗಲು ಆಸ್ಪತ್ರೆಗೆ ಬಂದಿದ್ದ ಅಜ್ಜಿಯ ಮೊಮ್ಮಗ ಸಮಾಧಾನಪಡಿಸಿದರು. ಅಳಬೇಡ ನಮ್ಮ ಮನೆಗೆ ಹೋಗೋಣ ಎಂದು ಸಂತೈಸಿದರು. ಆಗ ಕ್ಷಣ ಕಾಲ ಸುಮ್ಮನಾದ ಅಜ್ಜಿ, ಓಮಿನಿಯಲ್ಲಿ ಕುಳಿತು ತಮ್ಮ ಮೊಮ್ಮಗ ಹಾಹೂ ಒಂದು ವರ್ಷದ ಮರಿ ಮೊಮ್ಮಗನನ್ನು ನೆನೆದು ಗದ್ಗದಿತರಾದರು.
ಈ ವೇಳೆ ನೆರೆದಿದ್ದವರ ಕಣ್ಣಂಚಲಿ ಸಹ ನೀರು ತುಂಬಿತ್ತು. ಇಂತಹ ಪರಿಸ್ಥಿತಿ ಮತ್ತೆ ಯಾರಿಗೂ ಬರಬಾರದು ಎಂಬ ಮಾತುಗಳು ಸಾಮಾನ್ಯವಾಗಿತ್ತು. ಆಸ್ಪತ್ರೆಯ ಚಿಕಿತ್ಸೆ ಹಾಗೂ ಆರೈಕೆ ಬಗ್ಗೆ ಅಜ್ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗಂಜಿ ಸೇರಿದಂತೆ ಇತರೆ ದ್ರಾವಣಪದಾರ್ಥಗಳು ಶುಚಿಯಾಗಿ, ರುಚಿಯಾಗಿರುತ್ತಿತ್ತು. ಹೀಗಾಗಿ ನಾನು ಬೇಗ ಗುಣಮುಖಳಾದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು