Connect with us

ದಿನದ ಸುದ್ದಿ

ಒಂದೇ ಕುಟುಂಬದ 6 ಜನ ಆತ್ಮಹತ್ಯೆ..!

Published

on

ಸುದ್ದಿದಿನ,ಕೊಪ್ಪಳ : ಒಂದೇ ಕುಟುಂಬ 6 ಜನ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಕೊಪ್ಪಳ ತಾಲೂಕು ಮೆತಗಲ್ ಗ್ರಾಮದಲ್ಲಿ ನಡೆದಿದೆ.ಪತ್ನಿ ಮತ್ತು ನಾಲ್ವರು ಮಕ್ಕಳಿಗೆ ವಿಷ ಕುಡಿಸಿ, ನೇಣಿಗೆ ಶರಣಾಗಿರೋ ವ್ಯಕ್ತಿ ಶೇಖರಯ್ಯ ಬೀಡನಾಳ(42) ಹಾಗೂಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ(23), ಗೌರಮ್ಮ(20), ಸಾವಿತ್ರಿ(18), ಪಾರ್ವತಿ(16. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಿನದ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಕೆ..!

Published

on

ಸುದ್ದಿದಿನ, ದಾವಣಗೆರೆ :ಕೋವಿಡ್-19 ಸೋಂಕು ನಿಯಂತ್ರಣ ಕಾರ್ಯದಲ್ಲಿ ಜಿಲ್ಲೆಯಲ್ಲಿ ವೈದ್ಯರು, ಸಿಬ್ಬಂದಿಯಾದಿಯಾಗಿ ಆರೋಗ್ಯ ಇಲಾಖೆ ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರತಿಯೊಬ್ಬರೂ ಹಗಲು ರಾತ್ರಿ ಉತ್ತಮವಾಗಿ ಸೇವೆ ಸಲ್ಲಿಸುವ ಮೂಲಕ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಸೋಂಕು ಪ್ರಕರಣಗಳಲ್ಲಿ ಇಳಿಕೆ ಕಂಡುಬರುತ್ತಿದೆ. ರಾಜ್ಯದಲ್ಲಿಯೂ ಸೋಂಕು ಪ್ರಮಾಣ ಇಳಿಮುಖವಾಗಿದೆ.

ಸದ್ಯ ಜಿಲ್ಲೆಯಲ್ಲಿ ಪಾಸಿಟೀವ್ ಕಂಡುಬರುವ ಪ್ರಮಾಣ ಶೇ. 5 ಕ್ಕಿಂತ ಕಡಿಮೆ ಇದೆ. ಈ ಪ್ರಮಾಣ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಶೇ. 2.5 ಕ್ಕಿಂತ ಕಡಿಮೆ ಆಗಿರುವುದು ಸಮಾಧಾನಕರ ಸಂಗತಿಯಾಗಿದೆ. ಸದ್ಯ ಜಿಲ್ಲೆಯಲ್ಲಿ ನಿತ್ಯ ಕನಿಷ್ಟ 2500 ಮಾದರಿಗಳ ಪರೀಕ್ಷೆ ನಡೆಸುವುದನ್ನು ಮುಂದುವರೆಸಲಾಗಿದೆ.

ಮುಂಬರುವ ಚಳಿಗಾಲದಲ್ಲಿ ಕೋವಿಡ್ ಪ್ರಕರಣ ಹೆಚ್ಚುವ ಸಂಭವವಿದೆ ಎಂಬುದಾಗಿ ತಜ್ಞರು ಅಭಿಪ್ರಾಯಪಟ್ಟಿದ್ದು, ಸಾರ್ವಜನಿಕರು ಇನ್ನಷ್ಟು ಮುಂಜಾಗ್ರತೆ ವಹಿಸುವುದು ಅಗತ್ಯವಾಗಿದೆ. ಜಗತ್ತಿನ ವಿವಿಧ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಪರಿಸ್ಥಿತಿ ಎದುರಿಸಲು ಜಿಲ್ಲೆಯಲ್ಲಿ ಸಜ್ಜಾಗಿರೋಣ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋವಿಡ್ ಲಸಿಕೆ ; ಮೊದಲು ಕೊರೋನಾ ವಾರಿಯರ್ಸ್ ಗೆ ನೀಡಲಾಗುವುದು

Published

on

ಸುದ್ದಿದಿನ, ದಾವಣಗೆರೆ :ಕೋವಿಡ್-19 ಲಸಿಕೆ ಬಳಕೆಗೆ ಬಂದ ಕೂಡಲೆ ಮೊದಲ ಆದ್ಯತೆಯಾಗಿ ಆರೋಗ್ಯ ವಲಯದ ಕಾರ್ಯಕರ್ತರಿಗೆ ನೀಡಲಾಗುತ್ತಿದ್ದು, ನಂತರದ ಆದ್ಯತೆಯಾಗಿ ಸರ್ಕಾರ ನಿಗದಿಪಡಿಸುವ ಕ್ಷೇತ್ರದವರಿಗೆ ನೀಡಲು ಕೂಡ ಈಗಲೇ ಸಿದ್ಧ ಮಾಡಿಕೊಳ್ಳಬೇಕಿದೆ.

ಈ ದಿಸೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಇಲಾಖೆಗಳು ತಮ್ಮ ಕಚೇರಿಗಳಲ್ಲಿನ ಹಾಗೂ ತಮ್ಮ ವ್ಯಾಪ್ತಿಯ ಎಲ್ಲ ಅಧಿಕಾರಿ, ಸಿಬ್ಬಂದಿಗಳ ಹೆಸರು, ಅಂಕಿ-ಅಂಶ ಸಹಿತ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿಕೊಳ್ಳಬೇಕು. ಆದಷ್ಟು ಶೀಘ್ರ ವಿವರ ಸಿದ್ಧಪಡಿಸಿ, ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋವಿಡ್ ಲಸಿಕೆ : ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಕಾರ್ಯಗತಗೊಳಿಸಲು ಡಿಸಿ ಮಹಾಂತೇಶ್ ಬೀಳಗಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ: ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಲಸಿಕೆ ಬಳಕೆಗೆ ಲಭ್ಯವಾಗುವ ಎಲ್ಲ ಸಾಧ್ಯತೆಗಳಿದ್ದು, ಸರ್ಕಾರದ ಸೂಚನೆಯಂತೆ ಮೊದಲ ಆದ್ಯತೆ ವಲಯಕ್ಕಾಗಿ ಅಗತ್ಯ ಅಂಕಿ-ಅಂಶಗಳನ್ನು ಎರಡು ದಿನಗಳ ಒಳಗಾಗಿ ಸಿದ್ಧಪಡಿಸಿ, ಲಸಿಕೆ ನೀಡಿಕೆ ಕಾರ್ಯದಲ್ಲಿ ದಾವಣಗೆರೆ ಜಿಲ್ಲೆಯು ರಾಷ್ಟ್ರ ಮತ್ತು ರಾಜ್ಯಕ್ಕೇ ಮಾದರಿಯಾಗುವ ರೀತಿ ಕಾರ್ಯಗತಗೊಳಿಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್-19 ಲಸಿಕೆ ಕಾರ್ಯವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ಗೆ ಲಸಿಕೆ ಅಭಿವೃದ್ಧಿಪಡಿಸುವ ಕಾರ್ಯ ದೇಶದಲ್ಲಿ ಅಂತಿಮ ಹಂತದಲ್ಲಿದ್ದು, ಯಾವುದೇ ಸಮಯದಲ್ಲಿ ಲಸಿಕೆಯು ಬಳಕೆಗೆ ಲಭ್ಯವಾಗುವ ಸಾಧ್ಯತೆಗಳಿವೆ. ಲಸಿಕೆಯನ್ನು ಮೊದಲ ಆದ್ಯತೆಯಾಗಿ ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರೂ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎಲ್ಲರಿಗೂ ನೀಡಬೇಕೆಂಬುದು ಸರ್ಕಾರದ ನಿಲುವಾಗಿದೆ.

ಇದರಂತೆಯೇ ಜಿಲ್ಲೆಯಲ್ಲಿಯೂ ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕಿದೆ. ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಮಾನ್ಯತೆ ಹೊಂದಿರುವ ಖಾಸಗಿ ಎಲ್ಲ ಆಸ್ಪತ್ರೆಗಳ ವೈದ್ಯರು, ನರ್ಸ್‍ಗಳು, ಪ್ರಯೋಗಶಾಲೆ ನಿರ್ವಹಿಸುವವರು, ಚಾಲಕರು, ಕ್ಲರ್ಕ್‍ಗಳು, ಡಿ-ಗ್ರೂಪ್ ಸಿಬ್ಬಂದಿಯಾದಿಯಾಗಿ ಎಲ್ಲ ಆರೋಗ್ಯ ಕಾರ್ಯಕರ್ತರ ವಿವರಗಳು, ವೈದ್ಯಕೀಯ ಕಾಲೇಜುಗಳು, ದಂತವೈದ್ಯಕೀಯ, ಪ್ಯಾರಾಮೆಡಿಕಲ್, ಆಯುರ್ವೇದಿಕ್ ಸೇರಿದಂತೆ ಎಲ್ಲರ ಸಮಗ್ರ ವಿವರಗಳು ಅಂಕಿ-ಅಂಶ ಸಹಿತ ಎರಡು ದಿನಗಳ ಒಳಗಾಗಿ ಸಿದ್ಧವಾಗಬೇಕು.

ಜಿಲ್ಲೆಗೆ ಪ್ರಥಮ ಹಂತದಲ್ಲಿ ಬೇಕಾಗಬಹುದಾದ ಲಸಿಕೆ ಡೋಸ್‍ಗಳ ಸಂಖ್ಯೆಯನ್ನು ವಿವರ ಸಹಿತ ಸಲ್ಲಿಸಬೇಕು. ಪ್ರಥಮ ಆದ್ಯತಾ ವಲಯದ ಯಾರೂ ಕೂಡ ಈ ಅಂಕಿ-ಅಂಶದಲ್ಲಿ ಬಿಟ್ಟುಹೋಗಬಾರದು ಎಂದು ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಪ್ರತಿ ಗುರುವಾರ ಕೋವಿಡ್ ಲಸಿಕೆಗೆ ಸಂಬಂಧಿಸಿದ ಕಾರ್ಯಪಡೆ ಸಮಿತಿ ಸಭೆಯನ್ನು ನಡೆಸಿ, ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲಾಗುವುದು, ಅಲ್ಲದೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರತಿ ತಾಲ್ಲೂಕಿಗೆ ಒಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಈ ಹಿಂದಿನ ಲಸಿಕಾ ಕಾರ್ಯಕ್ರಮಗಳಿಗಿಂತ ಇದು ಹೆಚ್ಚಿನ ಮಹತ್ವದ್ದಾಗಿದ್ದು, ಪ್ರತಿಯೊಬ್ಬರಲ್ಲೂ ಆತ್ಮಸ್ಥೈರ್ಯ ಮೂಡಿಸುವುದು ಅಗತ್ಯವಾಗಿದೆ.

ಕೋವಿಡ್ ಲಸಿಕೆ ಕಾರ್ಯಕ್ರಮ ಅನುಷ್ಠಾನದಲ್ಲಿ ಜಿಲ್ಲೆಯು ರಾಷ್ಟ್ರ ಹಾಗೂ ರಾಜ್ಯದಲ್ಲಿ ಮಾದರಿಯಾಗಬೇಕು ಎಂದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಅವರು, ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಈಗಾಗಲೆ ಅಂಕಿ-ಅಂಶ ಸಿದ್ಧಪಡಿಸುವ ಕಾರ್ಯ ನಡೆದಿದೆ.

ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲು ಲಸಿಕಾಕರ್ತರನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಕೋವಿಡ್‍ಗೆ ಸಂಬಂಧಿಸಿದಂತೆ ಭಾರತದಲ್ಲಿ ಒಟ್ಟು 09 ಲಸಿಕೆಗಳು ಅಭಿವೃದ್ಧಿಗೊಳ್ಳುತ್ತಿವೆ. ಈ ಪೈಕಿ 04 ಪ್ರಾಥಮಿಕ ಹಂತ, 02- ದ್ವಿತೀಯ ಹಂತ ಹಾಗೂ 03 ಲಸಿಕೆಗಳು ತೃತೀಯ ಅಂದರೆ ಅಂತಿಮ ಹಂತದಲ್ಲಿವೆ. ಅಂತಿಮ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗುವ ಲಸಿಕೆಗೆ ಮಾತ್ರ ಬಳಕೆ ಮಾಡಲು ಅನುಮತಿ ದೊರೆಯಲಿದೆ. ಜಾಗತಿಕವಾಗಿ ಒಟ್ಟು 248 ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಪೈಕಿ 10 ಲಸಿಕೆಗಳು ಅಂತಿಮ ಹಂತ ತಲುಪಿವೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ37 mins ago

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಕೆ..!

ಸುದ್ದಿದಿನ, ದಾವಣಗೆರೆ :ಕೋವಿಡ್-19 ಸೋಂಕು ನಿಯಂತ್ರಣ ಕಾರ್ಯದಲ್ಲಿ ಜಿಲ್ಲೆಯಲ್ಲಿ ವೈದ್ಯರು, ಸಿಬ್ಬಂದಿಯಾದಿಯಾಗಿ ಆರೋಗ್ಯ ಇಲಾಖೆ ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರತಿಯೊಬ್ಬರೂ ಹಗಲು ರಾತ್ರಿ ಉತ್ತಮವಾಗಿ ಸೇವೆ...

ದಿನದ ಸುದ್ದಿ45 mins ago

ಕೋವಿಡ್ ಲಸಿಕೆ ; ಮೊದಲು ಕೊರೋನಾ ವಾರಿಯರ್ಸ್ ಗೆ ನೀಡಲಾಗುವುದು

ಸುದ್ದಿದಿನ, ದಾವಣಗೆರೆ :ಕೋವಿಡ್-19 ಲಸಿಕೆ ಬಳಕೆಗೆ ಬಂದ ಕೂಡಲೆ ಮೊದಲ ಆದ್ಯತೆಯಾಗಿ ಆರೋಗ್ಯ ವಲಯದ ಕಾರ್ಯಕರ್ತರಿಗೆ ನೀಡಲಾಗುತ್ತಿದ್ದು, ನಂತರದ ಆದ್ಯತೆಯಾಗಿ ಸರ್ಕಾರ ನಿಗದಿಪಡಿಸುವ ಕ್ಷೇತ್ರದವರಿಗೆ ನೀಡಲು ಕೂಡ...

ದಿನದ ಸುದ್ದಿ50 mins ago

ಕೋವಿಡ್ ಲಸಿಕೆ : ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಕಾರ್ಯಗತಗೊಳಿಸಲು ಡಿಸಿ ಮಹಾಂತೇಶ್ ಬೀಳಗಿ ಸೂಚನೆ

ಸುದ್ದಿದಿನ,ದಾವಣಗೆರೆ: ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಲಸಿಕೆ ಬಳಕೆಗೆ ಲಭ್ಯವಾಗುವ ಎಲ್ಲ ಸಾಧ್ಯತೆಗಳಿದ್ದು, ಸರ್ಕಾರದ ಸೂಚನೆಯಂತೆ ಮೊದಲ ಆದ್ಯತೆ ವಲಯಕ್ಕಾಗಿ ಅಗತ್ಯ ಅಂಕಿ-ಅಂಶಗಳನ್ನು ಎರಡು ದಿನಗಳ ಒಳಗಾಗಿ...

ದಿನದ ಸುದ್ದಿ54 mins ago

ಕೊರೋನಾ : ದಾವಣಗೆರೆಗೆ ಒಲಿದು ಬಂದ ಬೆಳ್ಳಿ ಪ್ರಶಸ್ತಿ

ಸುದ್ದಿದಿನ, ದಾವಣಗೆರೆ : ಆರೋಗ್ಯ ಇಲಾಖೆಯಿಂದ ಜಾರಿಗೊಳಿಸುವ ವಿವಿಧ ಲಸಿಕಾ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೋವಿಡ್-19 ಲಾಕ್‍ಡೌನ್ ಹಾಗೂ ಅನ್‍ಲಾಕ್ ಸಂದರ್ಭದಲ್ಲಿ ಹಲವು ಬಗೆಯ ಲಸಿಕೆ ಕಾರ್ಯಕ್ರಮವನ್ನು ದೇಶದ...

ನೆಲದನಿ9 hours ago

ನುಡಿಯ ಒಡಲು – 20 : ದಾರಿಯಾವುದಯ್ಯ ಕನ್ನಡ ಚಿಂತನೆಗೆ..?

ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಒಂದೊಂದು ವರುಷವೂ ಕೂಡ ನವಂಬರ್ ತಿಂಗಳು ಕನ್ನಡ ನುಡಿ ಕುರಿತು ಚಿಂತಿಸುವ, ಯೋಚಿಸುವ...

ದಿನದ ಸುದ್ದಿ1 day ago

ದಾವಣಗೆರೆ | ಮಾಸ್ಕ್ ಹಾಗೂ ಸಾಮಾಜಿಕ ಅಂತರ ಉಲ್ಲಂಘನೆ : 51. 67 ಲಕ್ಷ ರೂ. ದಂಡ ಸಂಗ್ರಹ

ಸುದ್ದಿದಿನ,ದಾವಣಗೆರೆ: ಸಾಂಕ್ರಾಮಿಕ ಪಿಡುಗಾಗಿರುವ ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬುದಾಗಿ ನಿಯಮ ರೂಪಿಸಿದ್ದು, ದಾವಣಗೆರೆ ಜಿಲ್ಲೆಯಲ್ಲಿ...

ದಿನದ ಸುದ್ದಿ2 days ago

ಮಧ್ಯ ಕರ್ನಾಟಕದ ಯಕ್ಷಗಾನ ಯುವಪ್ರತಿಭೆ ‘ಅಮೂಲ್ಯ ಸಿ.’

ಡಾ.ಕೆ.ಎ.ಓಬಳೇಶ್ ಕರ್ನಾಟಕದ ಬಹುತ್ವವೆಲ್ಲ ಸಮನ್ವಯತೆಯನ್ನು ಕಂಡುಕೊಂಡಿರುವುದು ಮಧ್ಯ ಕರ್ನಾಟಕದಲ್ಲಿ. ಈ ಭಾಗವು ಯಾವುದೇ ಅನ್ಯ ಗಡಿಪ್ರಾಂತ್ಯ, ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿರುವುದು ಕಂಡುಬರುವುದಿಲ್ಲ. ಆದರೆ ಇವೆಲ್ಲವುಗಳನ್ನು ಸಮನ್ವಯದ...

ದಿನದ ಸುದ್ದಿ2 days ago

ದಾವಣಗೆರೆ | ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ : ಶೇ.62.55 ಮತದಾನ

ಸುದ್ದಿದಿನ,ದಾವಣಗೆರೆ : ಬುಧವಾರ ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶೇ.62.55 ಮತದಾನವಾಗಿದೆ. ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ಮತಕ್ಷೇತ್ರಗಳಲ್ಲಿನ...

ದಿನದ ಸುದ್ದಿ2 days ago

ದಾವಣಗೆರೆಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿ.ವಿ. ಕೇಂದ್ರ ದಿಂದ ಹೊರಡುವ ಎಂ.ಸಿ.ಸಿ.ಬಿ ಹಾಗೂ ಡಿ.ಸಿ.ಎಂ. ಫೀಡರ್‍ಗಳಲ್ಲಿ ಬೆ.ವಿ.ಕಂ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.29 ರಂದು ಬೆಳಿಗ್ಗೆ...

ದಿನದ ಸುದ್ದಿ2 days ago

ಪೆನ್ಶನ್ ಪಡೆಯುವವರಿಗೆ ಇಲ್ಲಿದೆ ಸಿಹಿ ಸುದ್ದಿ..!

ಸುದ್ದಿದಿನ,ದಾವಣಗೆರೆ: ನಿವೃತ್ತ ಸರ್ಕಾರಿ ನೌಕರರು ಪ್ರತಿವರ್ಷ ಪೆನ್ಶನ್ ಪಡೆಯಲು ಜೀವನ ಪ್ರಮಾಣ ದೃಡೀಕರಣ ಪತ್ರವನ್ನು ನವೆಂಬರ್ ತಿಂಗಳಲ್ಲಿ ಸಲ್ಲಿಸುವುದು ಖಡ್ಡಾಯವಾಗಿರುತ್ತದೆ. ಈ ಕಾರಣಕ್ಕಾಗಿ ನಿವೃತ್ತರು ಬ್ಯಾಂಕುಗಳಿಗೆ ಅಡ್ಡಾಡಬೇಕಾಗಿದ್ದು...

Trending