Connect with us

ದಿನದ ಸುದ್ದಿ

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ ಕೈವಾಡವಿದೆ : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ.

ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ‌ ಎಂದರು.

ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್ ಎಸ್ ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಲವಾಲ್ಕಾರ್ ಇಲ್ಲವೇ ಇತರ ಆರ್ ಎಸ್ ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ.

ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ?

ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ.

ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ?

ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ.

ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್ ಎಸ್ ಎಸ್, ಬಿಜೆಪಿಯವರ ಹುನ್ನಾರವಿದೆ.

ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ.

ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ.

ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ.

ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ ಹೊರತು ಕರ್ನಾಟಕದ ಯಾವೊಬ್ಬ ನಾಯಕರಲ್ಲ. ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಷ್ಟೊಂದು ಪ್ರಭಾವಶಾಲಿಯಾಗಿದ್ದರೆ ಅವರು ಯಾಕೆ ಕಾಂಗ್ರೆಸ್ ಬಿಟ್ಟರಂತೆ? ಅವರ ಈಗಿನ ಮಾತು ಮತ್ತು ನಡವಳಿಕೆಗಳನ್ನು ನೋಡಿದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಒಳಗಿಂದೊಳಗೆ ವಿರೋಧಿಸಿರಬಹುದೇ ಎಂಬ ಸಂಶಯ ನನ್ನನ್ನು ಕಾಡುತ್ತಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು?

ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ? ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending