Connect with us

ದಿನದ ಸುದ್ದಿ

ದಾವಣಗೆರೆ | ಕೊರೋನಾದಿಂದ ನರ್ಸ್ ಸಾವು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಅಧೀಕ್ಷಕಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 45 ವರ್ಷದ ಚಂದ್ರಮ್ಮ ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ. ಚಂದ್ರಮ್ಮ ಕಳೆದ 10 ದಿನಗಳಿಂದ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ.ಜಾತಿ ಮತ್ತು ಪ.ಪಂಗಡದ ಕುಂದು ಕೊರತೆ ಸಭೆ | ಸ್ಮಶಾನಕ್ಕೆ ಭೂಮಿ, ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ಧ ಕ್ರಮ

Published

on

ಸುದ್ದಿದಿನ,ದಾವಣಗೆರೆ :ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಪ್ರಮುಖವಾಗಿ ದಲಿತರಿಗೆ ಸ್ಮಶಾನಕ್ಕೆ ಭೂಮಿ, ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವವರ ವಿರುದ್ದ ಕ್ರಮ, ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾದ ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳು, ಈ ಸಭೆ ನಡೆದು 2 ವರ್ಷಗಳಾಗಿದ್ದು ನಾನು ಜಿಲ್ಲಾಧಿಕಾರಿಯಾಗಿ ಬಂದ ನಂತರ ಮೊದಲ ಸಭೆ
ಇದಾಗಿದೆ. ತಮ್ಮ ಕುಂದು ಕೊರತೆಗಳನ್ನು ಮುಕ್ತವಾಗಿ ತಿಳಿಸಿ. ನಾನೂ ಸೇರಿದಂತೆ ಅಧಿಕಾರಿಗಳ ತಂಡದಿಂದ ತಮ್ಮ ಮನವಿಗಳನ್ನು ಸಹಾನುಭೂತಿಯಿಂದ ಪರಿಗಣಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ವರ್ಷದಲ್ಲಿ ಸುಮಾರು 349 ಜಾತಿ ನಿಂದನೆ ಕೇಸ್‍ ದಾಖಲು : ಎ ಎಸ್ಪಿ ರಾಜೀವ್

Published

on

ಸುದ್ದಿದಿನ,ದಾವಣಗೆರೆ: ನಿಮ್ಮ ಕುಂದು ಕೊರತೆಗಳು ನಮಗೆ ಅರ್ಥವಾಗಿದೆ. ನಮ್ಮ ಇಲಾಖೆಯು 10 ವರ್ಷದಲ್ಲಿ ಸುಮಾರು 349 ಜಾತಿ ನಿಂದನೆ ಕೇಸ್‍ಗಳನ್ನು ದಾಖಲಿಸಿಕೊಂಡಿದ್ದು, ಇಲ್ಲಿ 7 ಜನರಿಗೆ ಮಾತ್ರ ಪರಿಹಾರ ಬರಬೇಕು. ಜೊತೆಗೆ 99 ಕೇಸ್‍ಗಳು ಬಾಕಿ ಇದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ರಾಜೀವ್ ಮಾಹಿತಿ ನೀಡಿದರು.

ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಅವರು ಮಾಹಿತಿ ಹಂಚಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪ.ಜಾತಿ – ಪ.ಪಂಗಡದವರ ಮೇಲಿನ ದೌರ್ಜನ್ಯ ಖಂಡಿಸಿದರೆ, ನನಗೆ ಚಪ್ಪಲಿ ಹಾರ ಹಾಕುತ್ತಾರೆ :‌ ಜಿ.ಪಂ ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡದವರ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿವೆ. ನಾನೊಬ್ಬ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ. ನನಗೆ ನಗರದ ಪ್ರಮುಖ ವೃತ್ತದಲ್ಲಿ ಚಪ್ಪಲಿ ಹಾರ ಹಾಕುತ್ತಾರೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ.ವೈ.ರಾಮಪ್ಪ ನೋವಿನಿಂದ ನುಡಿದರು.

ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು,

ದೂರು ನೀಡಿ ಸಂಬಂಧಿಸಿದವರನ್ನು ಬಂಧಿಸಲು ಕೋರಿದರೆ, ಪೊಲೀಸರು ಆರೋಪಿಗಳು ಕಣ್ಮರೆಯಾಗಿದ್ದಾರೆ ಎಂದು ಸಬೂಬು ಹೇಳುತ್ತಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿ ಮುಖ್ಯ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇದು ಹೇಗೆ ಸಾಧ್ಯ? ಇದು ಇಲಾಖೆಯ ವೈಫಲ್ಯವಲ್ಲವೇ? ನನ್ನಂತಹವನಿಗೇ ಹಾಗೆ ಆದರೆ ಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲಿ 500 ರಿಂದ 600 ಕ್ರಷರ್ ಮಾಲೀಕರಿದ್ದಾರೆ. ಇದರಲ್ಲಿ ಎಸ್‍ಸಿ/ಎಸ್‍ಟಿ ಜನಾಂಗದವರು ಎಷ್ಟು ಜನರಿದ್ದಾರೆ? ಸ್ಮಾರ್ಟ್ ಸಿಟಿ ಯೋಜನೆಯಡಿ ಈ ಜನಾಂಗದವರು ಇರುವ ಪ್ರದೇಶಗಳಲ್ಲಿ ಎಷ್ಟು ಕಾಮಗಾರಿಗಳಾಗಿವೆ? ಈ ಜಿಲ್ಲೆಯಲ್ಲಿ ಸಮಾನತೆ ಎಂಬುದು ಏನಾದರೂ ಇದ್ದರೆ ಅದು ಕರೊನಾದಿಂದ ಸತ್ತವರನ್ನು ಮಣ್ಣು ಮಾಡುವಲ್ಲಿ ಮಾತ್ರ ಇದೆ. ಬೇರೆಲ್ಲಿಯೂ ಇಲ್ಲ.

ಕಳೆದ 10 ವರ್ಷಗಳಲ್ಲಿ ಈ ಸಮುದಾಯದವರ ಮೇಲೆ ಎಷ್ಟು ದೌರ್ಜನ್ಯದ ಕೇಸ್‍ಗಳಾಗಿವೆ? ಎಷ್ಟರಲ್ಲಿ ಶಿಕ್ಷೆ ಆಗಿದೆ. ಎಷ್ಟು ‘ಬಿ’ ರಿಪೋರ್ಟ್ ಆಗಿದೆ ಮಾಹಿತಿ ಒದಗಿಸಿ. ಹಾಗೂ ಈ ಹಿಂದಿನ ಸಭೆಯ ಅನುಪಾಲನೆ ವರದಿಯೇ ಇಲ್ಲದೇ ಮುಂದಿನ ಸಭೆ ನಡೆಸುವುದು ಹೇಗೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending