Connect with us

ದಿನದ ಸುದ್ದಿ

ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು. ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಮಂಕಿಬಾತ್ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವರು ಟ್ವೀಟ್ ಮಾಡಿದ್ದು, ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು.

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆ ನೀಡಬೇಕಾದ ಪ್ರಧಾನಿ, ಟಿವಿಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ?

ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತಗೆ ಕೊರೊನಾ ಪರಿಹಾರದ ಇಪ್ಪತ್ತು ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು.

ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು.ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು ಏಳರಿಂದ ಐದು ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ.

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿಯವರ ಗಮನಕ್ಕೆ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending