Connect with us

ದಿನದ ಸುದ್ದಿ

ಜೈವಿಕ ಇಂಧನ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

Published

on

ಸುದ್ದಿದಿನ ,ಬೆಳಗಾವಿ : ಎಥೆನಾಲ್ ದರ ನಿಶ್ಚಿತವಿಲ್ಲದೇ ದರ ಏರಿಳಿತ ಕಂಡರೆ ಬಂಡವಾಳ ಹೂಡಿಕೆ ಮಾಡಿರುವ ಕಾರ್ಖಾನೆ ಮಾಲೀಕರಿಗೆ ಆರ್ಥಿಕ ತೊಂದರೆಯಾಗುತ್ತದೆ. ಆದ್ದರಿಂದ ದರ ನಿಗದಿ ಹಾಗೂ ಅವಧಿಯ ಬಗ್ಗೆ ಸ್ಪಷ್ಟತೆ ತರಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿವೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ(ಕೆ.ಎಸ್.ಬಿ.ಡಿ.ಬಿ) ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಸಮಿತಿ (ಕೆ.ಎಸ್.ಸಿ.ಎಸ್.ಟಿ) ಆಶ್ರಯದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜೈವಿಕ ಇಂಧನ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಸೋಮವಾರ (ಜ.೬) ಉದ್ಘಾಟಿಸಿ ಅವರು ಮಾತನಾಡಿದರು.

ಜೈವಿಕ ಇಂಧನ ಉತ್ಪಾದನೆ ಅತ್ಯಗತ್ಯವಾಗಿದ್ದು, ಸ್ಥಳೀಯವಾಗಿ ಉತ್ಪಾದನೆಯಿಂದ ಇಂಧನ ಆಮದು ಪ್ರಮಾಣವನ್ನು ಕಡಿಮೆಗೊಳಿಸಬಹುದು. ಜೈವಿಕ ಇಂಧನ ಉತ್ಪಾದನೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ-ಸೌಲಭ್ಯಗಳನ್ನು ನೀಡಲು ಸರ್ಕಾರ ಬದ್ಧವಿದೆ. ಉತ್ತರ ಕರ್ನಾಟಕದಲ್ಲಿ ಅತೀ ಹೆಚ್ಚು ಸಕ್ಕರೆ ಕಾರ್ಖಾನೆಗಳಿದ್ದು, ಇಥೆನಾಲ್ ಉತ್ಪಾದನೆಯಲ್ಲಿ ತೊಡಗಿವೆ.

ಎಥೆನಾಲ್ ಗೆ ಪ್ರತ್ಯೇಕ ದರ ನಿಗದಿಪಡಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಸಚಿವ ಸುರೇಶ್ ಅಂಗಡಿ ಅವರಿಗೆ ಮನವಿ ಮಾಡಿಕೊಂಡರು.
ಎಥೆನಾಲ್ ದರ ನಿಗದಿಪಡಿಸಿದ ಬಳಿಕ ಎಷ್ಟು ವರ್ಷದ ಮಟ್ಟಿಗೆ ದರ ನಿಗದಿಪಡಿಸಲಾಗಿರುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದರೆ ಸಕ್ಕರೆ ಕಾರ್ಖಾನೆಗಳಿಂದ ಎಥೆನಾಲ್ ಉತ್ಪಾದನೆಗೆ ಅನುಕೂಲವಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟರು.

ಸಹಾಯಧನ-ಮಾದರಿ ಯೋಜನೆ ರೂಪಿಸಲು ಸಲಹೆ

ಜೈವಿಕ ಇಂಧನ ಉತ್ಪಾದನೆಗೆ ಸಂಬಂಧಿಸಿದಂತೆ ಯಾವ ರೀತಿಯ ಯೋಜನೆ ರೂಪಿಸಬಹುದು ಎಂಬುದರ ಬಗ್ಗೆ ತಜ್ಞರು ಸ್ಪಷ್ಟ ಅಭಿಪ್ರಾಯ ನೀಡಿದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಯೋಜನೆ ರೂಪಿಸಲು ಸಹಕಾರಿಯಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟರು.

ಜಗತ್ತಿನಲ್ಲಿ ಈಗಿರುವ ಇಂಧನ ಸಂಪನ್ಮೂಲ ಗರಿಷ್ಠ ನಲವತ್ತು ವರ್ಷಕ್ಕೆ ಸಾಕಾಗಬಹುದು. ಆದ್ದರಿಂದ ಜೈವಿಕ ಇಂಧನ ಉತ್ಪಾದನೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಸರ್ಕಾರ ನೀಡಲಿದೆ. ಎರಡು ದಿನಗಳ ಜೈವಿಕ ಇಂಧನ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಹೊರ ಹೊಮ್ಮುವ ನಿರ್ಣಯ ಇಡೀ ದೇಶಕ್ಕೆ ಮಾದರಿಯಾಗಿರಬೇಕು ಎಂದು ಸಚಿವ ಈಶ್ವರಪ್ಪ ಆಶಯ ವ್ಯಕ್ತಪಡಿಸಿದರು.
ಮುಂಬರುವ ಬಜೆಟ್ ನಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಯಾವ ರೀತಿ ಸಹಾಯಧನ ನೀಡಬಹುದು ಎಂಬುದರ ಕುರಿತು ಸಮ್ಮೇಳನದಲ್ಲಿ ಸ್ಪಷ್ಟ ಅಭಿಪ್ರಾಯ ರೂಪಿಸಿದರೆ ಅದೇ ಪ್ರಕಾರ ಸರ್ಕಾರ ನೆರವು ನೀಡಲಿದೆ.

ಜೈವಿಕ ಇಂಧನ ಉತ್ಪಾದನೆ ಹೆಚ್ಚಳದಿಂದ ಭವಿಷ್ಯದಲ್ಲಿ ದೇಶಕ್ಕೆ ಬರಬಹುದಾದ ಆಪತ್ತು ತಡೆಗಟ್ಟಲು ಸಹಕಾರಿಯಾಗಲಿದೆ ಎಂದರು.
ಜೈವಿಕ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಕರ್ನಾಟಕವು ಮಾದರಿಯಾಗುವಂತಹ ಯೋಜನೆ ರೂಪಿಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು, ಜೈವಿಕ ಇಂಧನ, ಸೌರಶಕ್ತಿ, ಪವನಶಕ್ತಿ ಸೇರಿದಂತೆ ವಿವಿಧ ಬಗೆಯ ಕ್ಷೇತ್ರದ ತಜ್ಞರು ಸಮನ್ವಯದಿಂದ ಮಾದರಿ ಯೋಜನೆ ರೂಪಿಸುವುದರಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ದೇಶದ ಎಲ್ಲ ಮಾರ್ಗಗಳಲ್ಲಿ ಮಾಲಿನ್ಯರಹಿತ ಎಲೆಕ್ಟ್ರಿಕ್ ರೈಲುಗಳನ್ನು ಓಡಿಸುವುದು ಪ್ರಧಾನಮಂತ್ರಿಗಳ ಕನಸಾಗಿದೆ. ಇಂತಹ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಕೈಜೋಡಿಸುವ ಉದ್ಯಮಿಗಳ ಸ್ನೇಹಿ ವಾತಾವರಣ ರೂಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಯೋಜನೆ ರೂಪಿಸುವ ಕೆಲಸವಾಗಬೇಕಿದೆ ಎಂದು ಸಚಿವ ಸುರೇಶ್ ಅಂಗಡಿ ಪ್ರತಿಪಾದಿಸಿದರು.

ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಶಾಸಕರಾದ ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಮಹೇಶ್ ಕುಮಠಳ್ಳಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೆ.ಎಸ್.ಬಿ.ಡಿ.ಬಿ ವ್ಯವಸ್ಥಾಪಕ ನಿರ್ದೇಶಕ ಮನೋಜಕುಮಾರ್ ಶುಕ್ಲಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.

ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಜೈವಿಕ ಇಂಧನ ತಜ್ಞರು, ಉದ್ಯಮಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಜೈವಿಕ ಇಂಧನ ತಜ್ಞರಾದ ವೈ.ಬಿ.ರಾಮಕೃಷ್ಣ ಅವರನ್ನು ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಗಣ್ಯರು ವೇದಿಕೆಯಲ್ಲಿ ಸನ್ಮಾನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending