Connect with us

ಸಿನಿ ಸುದ್ದಿ

ವಿಡಿಯೋ | ‘ನಟ ಸಾರ್ವಭೌಮ’ ಆಡಿಯೋ ರಿಲೀಸ್ ಗೆ ಅಭಿಮಾನಿಗಳನ್ನ ಆಹ್ವಾನಿಸಿದ್ರು ಅಪ್ಪು..!

Published

on

ಸುದ್ದಿದಿನ ಡೆಸ್ಕ್ : ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಸಿನೆಮಾ ‘ನಟಸಾರ್ವಭೌಮ’ ದ ಟೀಸರ್ ರಿಲೀಸ್ ಆಗಿ ಒಂದು ಟ್ರೆಂಡ್ ಕ್ರಿಯೇಟ್ ಮಾಡಿದೆ.

ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ಈ ಸಿನೆಮಾದ ಹಾಡುಗಳ ಲೋಕಾರ್ಪಣೆ ಕಾರ್ಯಕ್ರಯ ಇಂದು ಸಂಜೆ ಹುಬ್ಬಳ್ಳಿಯಲ್ಲಿ ಅದ್ದೂತಿಯಾಗಿ ನಡೆಯಲಿದೆ.‌ ಈಗಾಗಲೇ ಈ ಕಾರ್ಯಕ್ರಮದ ತಯಾರಿಯು ಭರದಿಂದ ಸಾಗಿದ್ದು, ನಟ ಪುನೀತ್ ಐಟಿ ತಲೆ ನೋವಿನಿಂದ ಕೊಂಚ ಮುಕ್ತರಾಗಿ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಅಭಿಮಾನಿಗಳಿಗೆ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ವೀಡಿಯೋ ನೋಡಿ

#Natasaarvabhowma Audio Launch evattu sanje at Hubballi….

Posted by Puneeth Rajkumar on Friday, 4 January 2019

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ತೊಗೋಳಿ, ಇವನದೊಂದು ನೆನಪು ಬರೆಯುವ ಸರದಿ ಬಂದಿದೆ

Published

on

  • ಕೇಸರಿ ಹರವೂ

ಕೃಷ್ಣ ನಾಡಿಗ ನನಗಿಂತ ಎಂಟೊಭತ್ತು ವರ್ಷಕ್ಕೆ ದೊಡ್ಡವ. ಆದರೂ ‘ಹೋಗೋಲೋ, ಬಾರೋಲೋ’ ಗೆಳೆಯರಾಗಿದ್ವಿ. ನಾನು ಇವನನ್ನು ಮೊದಲು ಕಂಡಿದ್ದು 1983ರಲ್ಲಿ. ಆಗತಾನೇ ಕಾಲೇಜು ಮುಗಿಸಿ, ಕಲಾಕ್ಷೇತ್ರದಲ್ಲೂ ಒಂದಷ್ಟು ಮೊಳೆ ಹೊಡೆದು ಚಿತ್ರನಿರ್ದೇಶನವನ್ನು ಪ್ರಾತ್ಯಕ್ಷಿಕವಾಗಿ ಕಲಿಯುವ ದೆಸೆಯಿಂದ ಗಾಂಧೀನಗರ ಅಲೆಯುತ್ತಿದ್ದೆ. ಹಾಗೊಮ್ಮೆ ಆನಂದರಾವ್ ವೃತ್ತದ ಸಂಗೀತಾ ಹೋಟೆಲಿನ ರೂಮೊಂದರಲ್ಲಿ ನಿರ್ದೇಶಕ ಕೆ.ವಿ. ಜಯರಾಂ ತಮ್ಮ ಮುಂದಿನ ಚಿತ್ರಕ್ಕೆ ತಯಾರಿ ನಡೆಸಿದ್ದರು. ಅಲ್ಲಿ ನಾಡಿಗ ಪ್ರೊಡಕ್ಷನ್ ಮ್ಯಾನೇಜರ್.

ಜಯರಾಂ ‘ತಮ್ಮಲ್ಲಿ ಈಗಾಗಲೇ ನಾಲ್ಕು ಜನ ಸಹಾಯಕರಿದ್ದಾರೆ, ಮುಂದಿನ ಚಿತ್ರದಲ್ಲಿ ನೋಡೋಣ’ ಎಂದು ಹೇಳಿದ್ದರು. ಸರಿ, ಎಂದು ನಾನು ಹೊರಗೆ ಕಾರಿಡಾರಿನಲ್ಲಿ ನಡೆಯುತ್ತಿದ್ದಾಗ ಒಳಗೆ ಕುಳಿತಿದ್ದ ನಾಡಿಗ ಅದೇ ರೂಮಿಂದ ಹೊರಬಂದು ‘ಲೇ, ತಡಿಯೋ’ ಎನ್ನುತ್ತಾ ನನ್ನನ್ನು ಸೇರಿಕೊಂಡ.

‘ಈತ ಪರಿಚಯವೇ ಇಲ್ಲ, ಈಗಲೇ ಏಕವಚನವೇ? ಇದೆಂಥಾ ಚಿತ್ರರಂಗವಯ್ಯಾ!’ ಎಂದು ನನ್ನ ಈಗೋನೋ, ಸ್ವಾಭಿಮಾನವೋ ಕೆಣಕಿತ್ತು. ಹತ್ತಿರ ಬಂದವನೇ ಹಠಾತ್ತನೆ ನನ್ನ ಹೆಗಲ ಮೇಲೆ ಕೈಹಾಕಿ ‘ಬಾ, ಕೆಳಗಡೆ ಕಾಫಿ ಕುಡಿಯೋಣ’ ಎಂದು ನನ್ನನ್ನು ಎಳೆದುಕೊಂಡು ನಡೆಯತೊಡಗಿದ. ನನ್ನ ಮುಖಭಾವದಿಂದ ಅವನಿಗೆ ನನ್ನೊಳಗೆ ಏನೇನೆಲ್ಲಾ ನಡೆದಿದೆ ಎಂದು ಸ್ಪಷ್ಟವಾಗಿ ತಿಳಿದಿತ್ತೆಂದು ಕಾಣುತ್ತದೆ.

ಕಾಫಿ ಕುಡಿಯುವಾಗ ಹೇಳಿದ, ‘ಹಂಗೆ ಮಾತಾಡಿಸಿದ್ದು ನಿನಗೆ ಗುರ್ ಅಂದಿರಬೇಕು, ಅಲ್ವಾ? ನಾನು ನೀನೂ ಇದೇ ಚಿತ್ರರಂಗದಲ್ಲಿ ಕೆಲವು ದಶಕಗಳ ಕಾಲ ಒಳ್ಳೇ ಗೆಳೆಯರಾಗಿ ಜೊತೆಗಿರ್ತೀವಿ ಕಣೋ, ತುಂಬಾ ಜನರ ಜೊತೆ ಹಂಗನಿಸಲ್ಲ, ಅದಿಕ್ಕೆ ಹಂಗನ್ದೇ…” ಎಂದು ಅಜ್ಜಂಪುರದ ಜವಾರೀ ಬ್ರಾಹ್ಮಣ ಭಾಷೆಯಲ್ಲಿ, ದೊಡ್ಡ ಗಂಟಲಿನಲ್ಲಿ ಗಹಗಹಿಸಿದ್ದ. ಸಿಗರೇಟು ಸೇದುವಾಗ ನಾನೂ ಅವನನ್ನು ಆಗಿನಿಂದಲೇ ಏಕವಚನದಲ್ಲೇ ಕರೆಯುವಂತೆ ಮಾಡಿದ್ದ.
ಅನಂತರದ ಹತ್ತಾರು ವರ್ಷ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವಾದರೂ ಒಂದೇ ಚಿತ್ರದಲ್ಲಿ ಕೆಲಸ ಮಾಡಲೇ ಇಲ್ಲ.

ಮಾತಿಗೆ ಸಿಕ್ಕಾಗಲೆಲ್ಲಾ ‘ನಿನ್ನ ಅಂತಃಶಕ್ತಿ ನಿನಗೇ ಗೊತ್ತಿಲ್ಲ ಕಣೋ’ ಎಂದು ಹೇಳುತ್ತಲೇ ಇರುತ್ತಿದ್ದ. ‘ಯಾರಿಗೂ ಗೊತ್ತಿರಲ್ಲ ಬಿಡೋ, ನಿನಗೆ ನಿನ್ನ ಶಕ್ತಿ ಗೊತ್ತಿದೆಯಾ?’ ಎನ್ನುತ್ತಿದ್ದೆ ನಾನು. ಇನ್ನೂ ಕೆಲವೊಮ್ಮೆ ‘ನನಗೆ ಚೆನ್ನಾಗಿ ಗೊತ್ತಿದೆ, ಬೇರೇಯವರಿಗೆ ಅದನ್ನು ಅರಗಿಸಿಕೊಳ್ಳೋ ವೈಶಾಲ್ಯ ಇಲ್ಲ’ ಎನ್ನುತ್ತಿದ್ದೆ. ‘ಬಡ್ಡೀಮಗನೇ, ಅದಿಕ್ಕೇ ನೀನು ನೀನೇ…’ ಎನ್ನುತ್ತಿದ್ದ. ಹೊಗಳಿಕೆ ಮಾತುಗಳು ಅವನಿಂದ ಹೊರಕ್ಕೆ ಸಹಜವಾಗಿ ಹರಿಯುತ್ತಿದ್ದವು. ನನಗೆ ಬಹಳ ಕಷ್ಟ.
ಕೆಲವು ಬಾರಿ ‘ಮನೇಲಿ ನನ್ನ ಹೆಂಡತಿ ಅಡಿಗೆಮನೆ ಡಬ್ಬೀನೆಲ್ಲಾ ನೀಟಾಗಿ ತೊಳೆದು ಹೊರಗೆ ಬಿಸಿಲಿಗೆ ಒಣ ಹಾಕಿದಾಳೆ’ ಎನ್ನುತ್ತಿದ್ದ. ಚಿತ್ರರಂಗದ ಕೆಲವರು ‘ಇದು ಇವನ ಮಾಮೂಲಿ ಡೈಲಾಗು’ ಎಂದು ಹಿಂದೆ ಆಡಿಕೊಳ್ಳುತ್ತಿದ್ದರು ಕೂಡಾ.

ಆದರೆ ಅವರ ಪರಿಸ್ಥಿತಿಯೂ ಇವನಿಗಿಂತ ಒಂದಿಂಚೂ ಉತ್ತಮವಾಗಿರಲಿಲ್ಲ. ಹೇಳಿಕೊಳ್ಳಲು ಅವರಿಗೆ ಸಂಕೋಚವಿತ್ತೋ ಏನೋ!
ಕೆಲವು ವರ್ಷ್ಗಳ ನಂತರ ಅದ್ಯಾವಾಗಲೋ ಅವನು ಮ್ಯಾನೇಜರ್ ಕೆಲಸ ಬಿಟ್ಟು ಸ್ಕ್ರಿಪ್ಟ್ ರೈಟರ್ ಆಗಿದ್ದ. ಅವನು ಬರೆದ ಅನೇಕ ಸ್ಕ್ರಿಪ್ಟುಗಳು ಆ ಚಿತ್ರದ ನಿರ್ದೇಶಕನ ಹೆಸರಲ್ಲಿ ಟೈಟಲ್ ಕಾರ್ಡಿನಲ್ಲಿ ಇರುತ್ತಿದ್ದವು. ಅದೇ ಕಾಲದಲ್ಲಿ ಮಗಳ ಮದುವೆಯನ್ನು ಬಹಳ ಕಷ್ಟಪಟ್ಟು ಸರಳವಾಗಿ, ಆದರೆ ಸಾಂಪ್ರದಾಯಿಕವಾಗಿ ಮಾಡಿದ್ದ. ನನಗೂ ಆಹ್ವಾನಿಸಿದ್ದ. ನನಗೆ ಕೂಡಾ ಆಗ ಆರ್ಥಿಕವಾಗಿ ಅನನುಕೂಲ ಇದ್ದಿದ್ದು, ಬೇಕೆಂದೇ ಮದುವೆಗೆ ಹೋಗಿರಲಿಲ್ಲ.

ಫೇಸ್ಬುಕ್ಕಿನಲ್ಲಿ ನಾನು ಬಲಪಂಥೀಯತೆಯ ಬಗ್ಗೆ ಅಸಹನೆಯಿಂದ ಬರೆಯುತ್ತಿದ್ದಾಗಲೆಲ್ಲಾ ಅವನಿಗೆ ನನ್ನ ಮೇಲೆ ಸಿಟ್ಟು ಬರುತ್ತಿತ್ತೇನೋ! ಅಮೇಲಾಮೇಲೆ ಅವನು ಬಹುಶಃ ನನ್ನ ಪೋಸ್ಟುಗಳನ್ನು ನೋಡುವುದನ್ನೇ ಬಿಟ್ಟಿದ್ದನೇನೋ. ಆ ನಂತರ ನಾವು ಭೇಟಿ ಮಾಡಿದ್ದು ಬಹಳ ಕಡಿಮೆ. ಆಗಾಗ ಫೋನು ಮಾಡುತ್ತಿದ್ದವನು ಅದನ್ನೂ ಬಿಟ್ಟಿದ್ದ. ಬಿಡುವಿಲ್ಲವೆಂದೋ, ಅಥವಾ ಮೇಲಿನ ಕಾರಣಕ್ಕೋ ಗೊತ್ತಿಲ್ಲ.

ಆಮೇಲೆ ಮತ್ಯಾವಾಗಲೋ ಟಿವಿ ಧಾರಾವಾಹಿಗಳಲ್ಲಿ ನಟಿಸುವುದಕ್ಕೆ ಶುರು ಮಾಡಿದ್ದ. ಬಹುಶಃ ನಿರ್ದೇಶಕ ಕೆ.ಎಸ್.ಎಲ್. ಸ್ವಾಮಿ (ರವೀ) ಅವರು ತೀರಿಕೊಂಡ ನಂತರ ಅವರ ಜಾಗವನ್ನು ಸೀರಿಯಲ್ಲಿನವರು ಇವನ ಮೂಲಕ ತುಂಬಿಕೊಂಡಿದ್ದರೆಂದು ಅನಿಸುತ್ತದೆ. ಒಟ್ಟಲ್ಲಿ ಅವನ ಕೊನೆಯ ವರ್ಷಗಳಲ್ಲಿ ಸ್ವಲ್ಪ ಆರ್ಥಿಕವಾಗಿ ನೆಮ್ಮದಿಯಿಂದ ಇದ್ದನೇನೋ!
ಚಿತ್ರರಂಗಕ್ಕೆ ಬರುವಾಗ ಯಾರು ಯಾರು ತಮ್ಮ ಇಡೀ ಓದು, ಅನುಭವ, ಕಾಣ್ಕೆ ಮತ್ತು ಮಹತ್ವಾಕಾಂಕ್ಷೆ ಇಟ್ಟುಕೊಂಡು ಬರುತ್ತಾರೋ ಅಂಥವರನ್ನು ತನ್ನ ಜಿಗುಟಿಗೆ, ಜಿಡ್ಡಿಗೆ ಒಗ್ಗಿಸಿಕೊಂಡುಬಿಡುತ್ತೆ. ಬಂದಾದ ಮೇಲೆ ಅನಿವಾರ್ಯವಾಗಿ ಕೆಲವರು ಒಗ್ಗಿಯೂ ಬಿಡುತ್ತಾರೆ.

ಅಲ್ಲೋ ಅಥವಾ ಟಿವಿ ಮಾಧ್ಯಮದಲ್ಲೋ ಹಣ ಸಿಕ್ಕುವ ಕಸುಬನ್ನು ‘ಅವರಿಗೇನು ಬೇಕೋ ಅದನ್ನು ಕೊಡುತ್ತೇನೆ’ ಎಂದು ಬದುಕಿ ಹೀಗೆ ಕೊನೆಯಾಗುತ್ತಾರೆ. ಇಂತಹ ನೂರು ನಟನಟಿಯರು, ತಂತ್ರಜ್ಞರು, ಕಲಾವಿದರನ್ನು ನಾನು ತೋರಿಸುತ್ತೇನೆ ಬೇಕಾದರೆ. ನನ್ನಂತೆ ಕೆಲವೇ ಕೆಲವರು ಸೆಡ್ಡು ಹೊಡೆಯುತ್ತೇವೆ. ಹೊರಗೆ ಬರುತ್ತೇವೆ. ಪರ್ಯಾಯ ಕಟ್ಟುವ ಆಲೋಚನೆ ಮಾಡುತ್ತೇವೆ. ಸೋಲೋ ಗೆಲುವೋ ಮುಖ್ಯವಲ್ಲ, ಪ್ರಯತ್ನ ಮುಖ್ಯ ಎನ್ನುತ್ತೇವೆ. ನಾಡಿಗನಲ್ಲೂ ಆ ಶಕ್ತಿಯಿತ್ತು. ಆದರೆ ಅವನ ಬದುಕಿನ ಅನಿವಾರ್ಯಕ್ಕೋ, ಸಂಪ್ರದಾಯಸ್ಥ ಮನಸ್ಥಿತಿಗೋ ಅವನಲ್ಲಿ ಅದು ಸಾಧ್ಯವಾಗಲಿಲ್ಲ.
ಹೋಗೋ ಗೆಳೆಯಾ, ನಿನ್ನ ನೆನಪು ಸದಾ ಇರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಗೀತ ಸಂಯೋಜಕ ರಾಜನ್‌ ಗೆ ಗಣ್ಯರ ಸಂತಾಪ

Published

on

ಕನ್ನಡ ಚಿತ್ರರಂಗದ ಮೇರು ಸಂಗೀತ ಸಂಯೋಜಕ ಜೋಡಿ ರಾಜನ್-ನಾಗೇಂದ್ರ. ಈ ಸಹೋದರರಲ್ಲಿ ನಾಗೇಂದ್ರ 2000ರಲ್ಲಿ ನಮ್ಮನ್ನು ಅಗಲಿದ್ದರು. ನಿನ್ನೆ ಭಾನುವಾರ ರಾತ್ರಿ 11 ಗಂಟೆಗೆ ರಾಜನ್‌ (85) ಇಹಲೋಕ ತ್ಯಜಿಸಿದ್ದಾರೆ. ‘ಸೌಭಾಗ್ಯಲಕ್ಷ್ಮಿ’ (1953) ರಾಜನ್‌-ನಾಗೇಂದ್ರ ಸಂಗೀತ ಸಂಯೋಜನೆಯ ಮೊದಲ ಸಿನಿಮಾ.

ಕನ್ನಡ ಸೇರಿದಂತೆ ತೆಲುಗು, ತಮಿಳು, ತುಳು, ಸಿಂಹಳಿ ಭಾಷೆಗಳ ಮುನ್ನೂರ ಎಪ್ಪತ್ತೈದಕ್ಕೂ ಹೆಚ್ಚು ಸಿನಿಮಾಗಳು, ಹಲವಾರು ಭಕ್ತಿಗೀತೆ ಆಲ್ಬಂಗಳಿಗೆ ರಾಜನ್-ನಾಗೇಂದ್ರ ಸಂಗೀತ ಸಂಯೋಜಿಸಿದ್ದಾರೆ.

ಮೊನ್ನೆಯವರೆಗೂ ರಾಜನ್ ತಮ್ಮ ‘ಸಪ್ತಸ್ವರಾಂಜಲಿ’ ಸಂಗೀತ ಶಾಲೆಯ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಸಂಗೀತ ಪಾಠ ಹೇಳಿಕೊಡುತ್ತಿದ್ದರು. ಅವರ ಗರಡಿಯಲ್ಲಿ ನೂರಾರು ಸಂಗೀತರಾರರು ತಯಾರಾಗಿದ್ದು, ತಮ್ಮ ಸಂಗೀತ ಸಂಯೋಜನೆಯ ಹಾಡುಗಳ ಮೂಲಕ ಅವರು ಸದಾ ಕನ್ನಡಿಗರ ಮನದಲ್ಲುಳಿಯಲಿದ್ದಾರೆ.

ತಂದೆಯವರ ಮರೆಯಲಾಗದ ಸಿನಿಮಾಗಳಾದ ಗಂಧದಗುಡಿ, ಮಯೂರ, ನಾ ನಿನ್ನ ಮರೆಯಲಾರೆ ಹಾಗು ಹಲಾವಾರು ಸಿನೆಮಾಗಳನ್ನು ನಿರ್ದೇಶಿಸಿರುವ ವಿಜಯ್ ರೆಡ್ಡಿ ಅವರು…

Posted by Puneeth Rajkumar on Friday, October 9, 2020

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜ್ಯೂನಿಯರ್ ರಾಜ್ ಕುಮಾರ್ ಎಂದೇ ಪ್ರಸಿದ್ಧರಾದ ಕೊಡಗಿನ ಜಯಕುಮಾರ್ ನಿಧನ

Published

on

ಸುದ್ದಿದಿನ, ದಾವಣಗೆರೆ : ರಂಗಭೂಮಿ, ಸಿನಿಮಾ, ಕಿರುತೆರೆಯ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್‌ (72 ವರ್ಷ) ಇಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ. ದಾವಣಗೆರೆ ಸಮೀಪ ಕೊಡಗನೂರು ಅವರ ಜನ್ಮಸ್ಥಳ. ವೃತ್ತಿರಂಗಭೂಮಿ ಜೊತೆ ಅವರದು ಸುಮಾರು ನಾಲ್ಕೂವರೆ ದಶಕಗಳ ಒಡನಾಟ. ಕನ್ನಡ ವೃತ್ತಿರಂಗಭೂಮಿಯಲ್ಲಿ ಅವರು ಜ್ಯೂನಿಯರ್ ರಾಜಕುಮಾರ್ ಎಂದೇ ಹೆಸರಾದವರು.

ಗುಬ್ಬಿ ಕಂಪನಿ, ಕೆಬಿಆರ್‌ ಕಂಪನಿ, ಕುಮಾರೇಶ್ವರ ನಾಟಕ ಸಂಘ, ಶ್ರೀ ಶೈಲ ಮಲ್ಲಿಕಾರ್ಜುನ ನಾಟ್ಯ ಸಂಘ, ಕರ್ನಾಟಕ ಕಲಾ ವೈಭವ ಸಂಘ, ಸಂಗಮೇಶ್ವರ ನಾಟಕ ಸಂಘಗಳ ಹಲವಾರು ನಾಟಕಗಳಲ್ಲಿ ಜಯಕುಮಾರ್ ಅಭಿನಯಿಸಿದ್ದಾರೆ.

ಪೊಲೀಸನ ಮಗಳು, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾತ್ಮೆ, ಮದಕರಿನಾಯಕ, ಮುದುಕನ ಮದುವೆ, ಟಿಪ್ಪು ಸುಲ್ತಾನ, ಗೋಮುಖ ವ್ಯಾಘ್ರ, ರಾಷ್ಟ್ರವೀರ ಎಚ್ಚಮ್ಮನಾಯಕ ಅವರಿಗೆ ಜನಪ್ರಿಯತೆ ತಂದುಕೊಟ್ಟ ನಾಟಕಗಳು. ರಂಗಭೂಮಿಯ ಹೆಸರಾಂತ ನಿರ್ದೇಶಕರಾದ ಪಿ.ಬಿ.ದುತ್ತರಗಿ, ಆರ್‌.ಡಿ.ಕಾಮತ್‌ ಅವರ ನಾಟಕಗಳಲ್ಲಿ ನಟಿಸಿದ್ದಾರೆ.

ಮುಸುರಿ ಕೃಷ್ಣಮೂರ್ತಿ, ಸುಂದರ ಕೃಷ್ಣ ಅರಸ್‌, ಜಿ.ವಿ.ಚನ್ನಬಸಪ್ಪ, ಎಚ್‌.ಟಿ.ಅರಸ್‌, ಉಮಾಶ್ರೀ, ದಿನೇಶ್‌, ಉದಯಕುಮಾರ್‌, ಸುಧೀರ್‌, ಓಬಳೇಶ್ವರ್‌ ಸೇರಿದಂತೆ ವೃತ್ತಿರಂಗಭೂಮಿಯ ಹೆಸರಾಂತ ಕಲಾವಿದರೊಂದಿಗೆ ಅಭಿನಯಿಸಿದ್ದಾರೆ.

ತಾಯಿಗೊಬ್ಬ ಕರ್ಣ, ಸತ್ಯನಾರಾಯಣ ಪೂಜಾಫಲ, ಸಾಂಗ್ಲಿಯಾನ-3, ಜನುಮದ ಜೋಡಿ, ಕಿಟ್ಟಿ, ಜಾಕಿ, ರಾಜ, ತಾಯಿ, ಶಬರಿ, ಮರಣದಂಡನೆ ಸೇರಿದಂತೆ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಂಕ್ರಾಂತಿ, ಮಹಾಮಾಯೆ, ಅಪ್ಪ, ಕೆಳದಿ ಚನ್ನಮ್ಮ, ಭಾಗೀರಥಿ, ಶ್ರೀ ರಾಘವೇಂದ್ರ ವೈಭವ, ಪಾ.ಪ.ಪಾಂಡು, ಶ್ರೀ ಕಲಾಭೈರವ ಮಹಾತ್ಮೆ ಸೇರಿದಂತೆ 20ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸುವರ್ಣ ಅಕಾಡೆಮಿ ಪ್ರಶಸ್ತಿ, ವರದಪ್ಪ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

(ಮಾಧ್ಯಮದವರು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- 9606684489, 9743683835)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಖ್ಯಾತ ರೈತ ಮುಖಂಡ ಮಾರುತಿ ಮಾನ್ಪಡೆ ಕೊರೋನಾಗೆ ಬಲಿ

ಸುದ್ದಿದಿನ ಡೆಸ್ಕ್ : ರೈತ ಮುಖಂಡ, ಹಿರಿಯ ಹೋರಾಟಗಾರರಾದ ಮಾರುತಿ ಮಾನ್ಪಡೆ ಅವರು ಇಂದು ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರೆ. ಇವರು ಸಿಪಿಎಂ ಪಕ್ಷದ ಕಲಬುರಗಿ ಜಿಲ್ಲಾ ಘಟಕದ...

ದಿನದ ಸುದ್ದಿ5 hours ago

ಸಂವಿಧಾನ ಪ್ರಜಾತಂತ್ರ ಮತ್ತು ಸಾರ್ವಭೌಮ ಪ್ರಜೆಗಳು

ನಾ ದಿವಾಕರ ಸಂವಿಧಾನ ಈ ದೇಶದ ಆತ್ಮ ಪ್ರಜಾತಂತ್ರ ನಮ್ಮ ಉಸಿರು ಎಂದು ಹೇಳುತ್ತಲೇ ಬಂದಿರುವ ನಾವು, ಅಂದರೆ ಈ ದೇಶದ ಸಾರ್ವಭೌಮ ಪ್ರಜೆಗಳು ಈಗ ಉಸಿರುಗಟ್ಟಿ...

ದಿನದ ಸುದ್ದಿ5 hours ago

ಮಕ್ಕಳ ಕಲ್ಯಾಣ ಸಮಿತಿ ಸದಸ್ಯತ್ವಕ್ಕಾಗಿ ಅರ್ಜಿಆಹ್ವಾನ

ಸುದ್ದಿದಿನ,ಹಾಸನ : ಬಾಲನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ-2015 ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮ-2016ರನ್ವಯ ಎಲ್ಲಾ ಜಿಲ್ಲೆಗಳಿಂದ ಮಕ್ಕಳ ಕಲ್ಯಾಣ...

ದಿನದ ಸುದ್ದಿ6 hours ago

ಕಲಬುರಗಿ ಪ್ರವಾಹ | 73 ಗ್ರಾಮಗಳ 27378 ಜನರ ರಕ್ಷಣೆ

ಸುದ್ದಿದಿನ,ಕಲಬುರಗಿ : ಭೀಮಾ ನದಿಯ ಪ್ರವಾಹದಿಂದ ತತ್ತರಿಸಿ ಹೋಗಿರುವ ಜಿಲ್ಲೆಯಲ್ಲಿ ಸೋಮವಾರ ಸಾಯಂಕಾಲದ ವರೆಗೆ 73 ಗ್ರಾಮಗಳ 27278 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ತಿಳಿಸಿದ್ದಾರೆ....

ದಿನದ ಸುದ್ದಿ20 hours ago

ಟಿ.ನರಸೀಪುರ | ಕೋವಿಡ್ ರೋಗಿಗಳಿಗೆ ಪೌಷ್ಟಿಕ ಆಹಾರ ನೀಡುತ್ತಿಲ್ಲ : ತಾ.ಪಂ. ಸದಸ್ಯರ ಆರೋಪ

ಸುದ್ದಿದಿನ,ಟಿ. ನರಸೀಪುರ: ಕೋವಿಡ್ ಉಪಕೇಂದ್ರದಲ್ಲಿ ರೋಗಿಗಳಿಗೆ ಒಳ್ಳೆಯ ಆಹಾರ ನೀಡುತ್ತಿಲ್ಲವಾದ್ದರಿಂದ ಇದರ ಹೊಣೆಯನ್ನು ತಾಲ್ಲೂಕು ಆಡಳಿತ ಹೊರಬೇಕೆಂದು ತಾ.ಪಂ. ಸದಸ್ಯರುಗಳಾದ ರಾಮಲಿಂಗಯ್ಯ ಹಾಗೂ ಕುಕ್ಕೂರು ಗಣೇಶ್ ಆಕ್ರೋಶ...

ದಿನದ ಸುದ್ದಿ21 hours ago

ಅತಿಥಿ ಉಪನ್ಯಾಸಕರ ಆಯ್ಕೆ : ಅರ್ಜಿ ಆಹ್ವಾನ

ಸುದ್ದಿದಿನ,ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ ವಿಭಾಗದಲ್ಲಿ ಎಂ.ಎಸ್ಸಿ ಸೈಬರ್ ಸೆಕ್ಯೂರಿಟಿ ಪ್ರೋಗ್ರಾಂ ಅತಿಥಿ ಉಪನ್ಯಾಸಕರ ಹುದ್ದೆಗೆ ಅಕ್ಟೋಬರ್ 27 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ...

ದಿನದ ಸುದ್ದಿ21 hours ago

ಕೋವಿಡ್ ಮಾರ್ಗಸೂಚಿಯನ್ವಯ ಸರಳ ಹಬ್ಬಗಳ ಆಚರಣೆಗೆ ಸೂಚನೆ

ಸುದ್ದಿದಿನ,ದಾವಣಗರೆ : ಕೋವಿಡ್ ಮಾರ್ಗಸೂಚಿಗಳನ್ವಯ ಹಬ್ಬಗಳನ್ನು ಆಚರಿಸಬೇಕಿರುವುದರಿಂದ ಯಾವುದೇ ಕಾರಣಕ್ಕೂ ಸಾಮೂಹಿಕ ಪ್ರಾರ್ಥನೆ, ಮೆರವಣಿಗೆ, ಗುಂಪು ಸೇರಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು....

ದಿನದ ಸುದ್ದಿ22 hours ago

ಅ.31 ರೊಳಗೆ ಅರ್ಜಿ ಸಲ್ಲಿಸುವವರಿಗೆ ಮಾತ್ರ ಪಟಾಕಿ ಅಂಗಡಿ ತೆರೆಯಲು ಅನುಮತಿ : ಎಸ್ ಪಿ ಹನುಮಂತರಾಯ

ಸುದ್ದಿದಿನ, ದಾವಣಗೆರೆ:ಸರ್ಕಾರ ಹಬ್ಬಗಳ ಆಚರಣೆ ಕುರಿತಂತೆ ನಿರ್ದೇಶನಗಳನ್ನು ನೀಡಿದೆ. ಅದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಲೇಬೇಕು. ಕೋವಿಡ್ ನಿಯಂತ್ರಣ ನಮ್ಮ ಕರ್ತವ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ...

ದಿನದ ಸುದ್ದಿ22 hours ago

ಒಂದು ವರ್ಷದ ಒಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ : ಬಿಎಸ್ ಯಡಿಯೂರಪ್ಪ

ಸುದ್ದಿದಿನ ,ಶಿವಮೊಗ್ಗ: ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ...

ದಿನದ ಸುದ್ದಿ1 day ago

ಚಿತ್ರದುರ್ಗ | ಐವರು ಸಾಧಕರಿಗೆ ‘ಮುರುಘಾ ಶ್ರೀ ಪ್ರಶಸ್ತಿ’ ಘೋಷಣೆ..!

ಸುದ್ದಿದಿನ, ಚಿತ್ರದುರ್ಗ : ಬಸವಕೇಂದ್ರ, ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಶರಣಸಂಸ್ಕೃತಿ ಉತ್ಸವದಲ್ಲಿ ಕೊಡಮಾಡುವ ‘ಮುರುಘಾಶ್ರೀ ಪ್ರಶಸ್ತಿ‘ಗೆ ಈ ಬಾರಿ‌ ನಟ ಡಾ. ಮುಖ್ಯಮಂತ್ರಿ ಚಂದ್ರು...

Trending